ಬಳ್ಳಾರಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ (Engineering Student) ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ (Ballari) ನಡೆದಿದೆ.
ಸಿರಗುಪ್ಪ ತಾಲೂಕಿನ ಟಿ.ರಾಂಪುರ ಗ್ರಾಮದ ವಿಶ್ವನಾಥ್ (24) ಮೃತ ವಿದ್ಯಾರ್ಥಿ. ಬಳ್ಳಾರಿಯ ಕಾಲೇಜುವೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿಶ್ವನಾಥ್, ಅಶೋಕ್ ನಗರದ ಪಿಜಿಯಲ್ಲಿದ್ದ. ಪಿಜಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಇದನ್ನೂ ಓದಿ: ಫಿಟ್ನೆಸ್ ಪರೀಕ್ಷೆಯಲ್ಲಿ ರೋಹಿತ್, ಪಾಂಡ್ಯ ಪಾಸ್; ಅಫ್ಘಾನ್ ವಿರುದ್ಧ ಏಕದಿನ ಸರಣಿಯಲ್ಲಿ ಆಡ್ತಾರಾ?
ಮೃತ ವಿದ್ಯಾರ್ಥಿಯ ತಲೆಗೆ ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯಗಳಿರುವುದು ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಸೋಮವಾರ ವಿಶ್ವನಾಥ್ ಹಾಗೂ ಆತನ ಪಿಜಿ ಸಹಪಾಠಿಗಳೊಂದಿಗೆ ಜಗಳ ನಡೆದಿತ್ತು ಎನ್ನಲಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ – ವೀಡಿಯೋ ಹರಿಬಿಟ್ಟು ವಿಕೃತಿ
ಘಟನಾ ಸ್ಥಳಕ್ಕೆ ಕೌಲ್ ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬAಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 370 ರೂ. ಬಿರಿಯಾನಿ ಹೇಳಿಕೆಗೆ ಟ್ರೋಲ್ ಆದ ಯುವಕ – ಎಡವಟ್ಟಿನಿಂದ ಹೋಯ್ತು ಇದ್ದೊಂದು ಕೆಲಸ
