ಬೆಂಗಳೂರು: ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಲಾಂಗ್‍ಡ್ರೈವ್‍ಗೆ ಹೋಗಿದ್ದ 6 ವಿದ್ಯಾರ್ಥಿಗಳ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ.
ವೈಷ್ಣವಿ, ಭರತ್, ಸಿರಿಲ್, ವೆಂಕಟ್ ಮೃತ ದುರ್ದೈವಿಗಳು. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಗುದ್ದಿ ಪಕ್ಕದ ರಸ್ತೆಗೆ ಹಾರಿ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮೃತರೆಲ್ಲರೂ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.
Advertisement
Advertisement
ಸಿರಿಕೃಷ್ಣ, ಅಂಕಿತರೆಡ್ಡಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕೆ.ಆರ್ ಪುರಂನ ಗಾರ್ಡನ್ ಸಿಟಿ ಕಾಲೇಜಿನ 6 ಜನ ವಿದ್ಯಾರ್ಥಿಗಳು ಕೋಲಾರದ ನರಸಾಪುರ ಬಳಿಯಿರುವ ಕೆಫೆ ಕಾಫಿ ಡೇಗೆ ಲಾಂಗ್ ಡ್ರೈವ್ ಹೋಗಿದ್ದರು. ಕೋಲಾರದ ಕಡೆಯಿಂದ ಬೆಂಗಳೂರು ಕಡೆಗೆ ವಾಪಸ್ಸಾಗುತ್ತಿದ್ದರು. ಇದನ್ನೂ ಓದಿ: ಗೋವಾ ರಸ್ತೆಯ ಸೃಷ್ಟಿ ಫಾರ್ಮ್‍ನಲ್ಲಿ ಚೆನ್ನವೀರ ಕಣವಿ ಅಂತ್ಯಕ್ರಿಯೆ
Advertisement
ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ರಸ್ತೆ ಮಧ್ಯೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಮೇಲಕ್ಕೆ ಹಾರಿದೆ. ನಂತರ ನೂರು ಮೀಟರ್‍ಗೂ ಅಧಿಕ ದೂರ ಹೆದ್ದಾರಿಯಲ್ಲೇ ಪಲ್ಟಿ ಹೊಡೆದು ಬೆಂಗಳೂರು ಕಡೆಯಿಂದ ಕೋಲಾರದ ಕಡೆಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ನಂತರ ಹೆದ್ದಾರಿ ಬದಿಯ ಹಳ್ಳಕ್ಕೆ ಬಿದ್ದಿದೆ. ಇದನ್ನೂ ಓದಿ: ಕಾಗ್ರೆಸ್, ಆಪ್ ಅಪರಾಧದ ಪಾಲುದಾರರು: ಮೋದಿ
Advertisement
ಕಾರು ಸಂಪೂರ್ಣ ನಜ್ಜು ಗುಜ್ಜಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ವೆಂಕಟ್, ಸಿರಿಲ್, ವೈಷ್ಣವಿ, ಭರತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ವಿದ್ಯಾರ್ಥಿಗಳಾದ ಅಂಕಿತರೆಡ್ಡಿ ಮುತ್ತು ಕೃಷ್ಣಶ್ರೀ ಎಂಬವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ 4 ಹುಡುಗರು ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳೆಂದು ಇಬ್ಬರೂ ಹುಡುಗಿಯರು ಬೆಂಗಳೂರು ವಿಲ್ಸನ್ ಗಾರ್ಡನ್ ನಿವಾಸಿಗಳೆಂದು ಗುರುತಿಸಲಾಗಿದೆ. ಈ ಕುರಿತು ಹೊಸಕೋಟೆ ಪೊಲೀಸರು ಪ್ರಕರಣ ದಾಖಲಾಗಿದೆ.