ಚಿಕ್ಕಬಳ್ಳಾಪುರ: ಕಾಲೇಜು ಹಾಸ್ಟೆಲ್‌ನಲ್ಲಿ (Hostel) ಎಂಜಿನಿಯರಿಂಗ್ (Engineering) ವಿದ್ಯಾರ್ಥಿನಿ (Student) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನಲ್ಲಿ ನಡೆದಿದೆ.
ಮೂಲತಃ ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದ ಪ್ರೀತಿ(21) ಸಾವನ್ನಪ್ಪಿದ ವಿದ್ಯಾರ್ಥಿನಿ. ಪ್ರೀತಿ ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜುವೊಂದರಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಳು. ಮಂಗಳವಾರ ಕಾಲೇಜಿನ ವಸತಿನಿಲಯದ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರೀತಿ ಪತ್ತೆಯಾಗಿದ್ದು, ಕೂಡಲೇ ಕಾಲೇಜು ಆಡಳಿತ ಮಂಡಳಿ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೇ ಅದಾಗಲೇ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಕಂಠೀರವದಲ್ಲಿ ಅಥ್ಲಿಟ್ ನಿಂದನೆ – ಕೋಚ್, ಪತ್ನಿ ವಿರುದ್ಧ ಎಫ್‌ಐಆರ್
ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಯ ಕುರಿತು ಕಾಲೇಜು ಆಡಳಿತ ಮಂಡಳಿಯವರು, ವಿದ್ಯಾರ್ಥಿನಿಯ ಸಾವಿಗೆ ಕಾರಣ ತಿಳಿದುಬಂದಿಲ್ಲ ಎನ್ನುತ್ತಿದ್ದಾರೆ. ಇತ್ತ ಮೃತಳ ಪೋಷಕರು, ಏನಾಗಿದೆ ಎಂಬುದು ನಮಗೂ ಗೊತ್ತಿಲ್ಲ. ಕಾಲೇಜಿನವರು ನಿಮ್ಮ ಮಗಳಿಗೆ ತುಂಬಾ ಹುಷಾರಿಲ್ಲ ಬೇಗ ಬನ್ನಿ ಎಂದು ಹೇಳಿದರು. ನಾವು ಬಂದಾದ ಮೇಲೆ ಮೃತಪಟ್ಟಿದ್ದಾಳೆ ಎಂದು ತಿಳಿಸಿದರು ಎಂದು ಹೇಳಿದ್ದಾರೆ. ಈ ಕುರಿತು ಮೃತ ವಿದ್ಯಾರ್ಥಿನಿಯ ತಂದೆ ವಿಜಯಪುರ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಹೆಚ್ಚುತ್ತಿರುವ ಅಪಘಾತ ತಪ್ಪಿಸಲು ಎಕ್ಸ್‌ಪ್ರೆಸ್‌ವೇನಲ್ಲಿ Interceptor ಬಳಕೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]