ಅಹಮದಾಬಾದ್: 2023ನೇ ಸಾಲಿನ ಐಸಿಸಿ ಏಕದಿನ ವಿಶ್ವಕಪ್ (World Cup 2023) ಟೂರ್ನಿಯು ಗುರುವಾರದಿಂದ (ಅ.5) ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ತಂಡವು (England Team) ಹೊಸ ಇತಿಹಾಸ ಸೃಷ್ಟಿಸಿದೆ.
ಆರಂಭಿಕ ಆಟಗಾರನಿಂದ ಹಿಡಿದು ಕೊನೆಯ ಬ್ಯಾಟ್ಸ್ಮ್ಯಾನ್ ವರೆಗೂ ಪ್ರತಿಯೊಬ್ಬರು ಎರಡಂಕಿಯ ರನ್ಗಳನ್ನು ದಾಖಲಿಸುವ ಮೂಲಕ ಇಂಗ್ಲೆಂಡ್ ತಂಡವು ವಿಶೇಷ ಸಾಧನೆ ಮಾಡಿದೆ. ಇದನ್ನೂ ಓದಿ: ICC World Cup 2023: ಇಂದಿನಿಂದ ವಿಶ್ವಕಪ್ ಮಹಾಸಮರ – ಇಂದು ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಸೆಣಸಾಟ
ಈ ಪಂದ್ಯದಲ್ಲಿ ಟಾಸ್ ಸೋತ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. 50 ಓವರ್ಗಳ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 282 ರನ್ ಗಳಿಸಿ, ಎದುರಾಳಿ ತಂಡಕ್ಕೆ 283 ರನ್ಗಳ ಗುರಿ ನೀಡಿತು. ಇಂಗ್ಲೆಂಡ್ ಪರ ಆರಂಭಿಕರಾಗಿ ಕಣ್ಕಿಳಿದ ಜಾನಿ ಬೈರ್ಸ್ಟೋವ್ 33 ರನ್, ಡೇವಿಡ್ ಮಲಾನ್ 14 ರನ್ ಗಳಿಸಿ ಔಟಾಗುತ್ತಿದ್ದಂತೆ ಕಣಕ್ಕಿಳಿದ ಜೋ ರೂಟ್ 86 ಎಸೆತಗಳಲ್ಲಿ 77 ರನ್ ಸಿಡಿಸಿದರು.
ಇದರೊಂದಿಗೆ ಹ್ಯಾರಿ ಬ್ರೂಕ್ 25 ರನ್, ಮೋಯಿನ್ ಅಲಿ 11 ರನ್ ಗಳಿಸಿದ್ರೆ, ಜೋಸ್ ಬಟ್ಲರ್ 42 ಎಸೆತಗಳಲ್ಲಿ 43 ರನ್, ಲಿಯಾಮ್ ಲಿವಿಂಗ್ಸ್ಟೋನ್ 22 ಎಸೆತಗಳಲ್ಲಿ 20 ರನ್, ಸ್ಯಾಮ್ ಕರ್ರನ್ 14 ರನ್, ಕ್ರಿಸ್ ವೋಕ್ಸ್ 11 ರನ್ಗಳ ಕೊಡುಗೆ ನೀಡಿದರು. ಕೊನೆಯಲ್ಲಿ ಆದಿಲ್ ರಶೀದ್ 15 ರನ್ ಹಾಗೂ ಮಾರ್ಕ್ ವುಡ್ 13 ರನ್ ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ಇಂಗ್ಲೆಂಡ್ ತಂಡವು 50 ಓವರ್ಗಳಲ್ಲಿ 282 ರನ್ ಗಳಿಸಿತು. ಇದನ್ನೂ ಓದಿ: Asian Games 2023- ಗ್ರೀಕೊ ರೋಮನ್ ಕುಸ್ತಿಯಲ್ಲಿ ಭಾರತಕ್ಕೆ 13 ವರ್ಷಗಳ ಬಳಿಕ ಪದಕ
ನ್ಯೂಜಿಲೆಂಡ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ ಮ್ಯಾಟ್ ಹೆನ್ರಿ 3 ವಿಕೆಟ್ ಪಡೆದರೆ, ಗ್ಲೆನ್ ಫಿಲಿಪ್ಸ್ ಮತ್ತು ಮಿಚೆಲ್ ಸ್ಯಾಂಟ್ನರ್ ತಲಾ ಎರಡೆರಡು ಹಾಗೂ ಟ್ರೆಂಟ್ ಬೌಲ್ಟ್ ಮತ್ತು ರಚಿನ್ ರವೀಂದ್ರ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಇಂಗ್ಲೆಂಡ್ ಪ್ಲೇಯಿಂಗ್ 11: ಜಾನಿ ಬೈರ್ಸ್ಟೋವ್, ಡಾವಿಡ್ ಮಲಾನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್(ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಮೊಯೀನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್ ಇದನ್ನೂ ಓದಿ: ಹೈದರಾಬಾದ್ ಬಿರಿಯಾನಿಯಿಂದಾಗಿ ಸ್ವಲ್ಪ ಸ್ಲೋ – ಅಭ್ಯಾಸ ಪಂದ್ಯದ ಸೋಲಿಗೆ ಪಾಕ್ ಆಟಗಾರನ ಪ್ರತಿಕ್ರಿಯೆ
ನ್ಯೂಜಿಲೆಂಡ್ ಪ್ಲೇಯಿಂಗ್ 11: ಡಿವೋನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಟಾಮ್ ಲಾಂಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮ್ಯಾಟ್ ಹೆನ್ರಿ, ಮಿಚೆಲ್ ಸ್ಯಾಂಟ್ನರ್, ಜೇಮ್ಸ್ ನೀಶಮ್, ಟ್ರೆಂಟ್ ಬೌಲ್ಟ್.
Web Stories