ಲಂಡನ್: ದೇಶದ ಜನತೆಗೆ ಕೊರೊನಾ ಬಗ್ಗೆ ಅರಿವು ಮೂಡಿಸುತ್ತಿದ್ದ ಇಂಗ್ಲೆಂಡ್ ಆರೋಗ್ಯ ಸಚಿವೆಗೂ ಕೊರೊನಾ ವೈರಸ್ ಬಂದಿರುವುದು ಹೆಲ್ತ್ ಚೆಕಪ್ ವೇಳೆ ದೃಢಪಟ್ಟಿದೆ.
ಇಂಗ್ಲೆಂಡ್‍ನ ಆರೋಗ್ಯ ಸಚಿವೆ ನಾಡಿನ್ ಡೋರಿಸ್‍ಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. ವಿಷಯ ತಿಳಿದು ಬಂದ ಕೂಡಲೇ ಸ್ವತಃ ನಾಡಿನ್ ಡೋರಿಸ್ ಅವರೇ ಮನೆಯಿಂದ ಹೊರಗೆ ಬರೆದೇ ಗೃಹ ಬಂಧನದಲ್ಲಿದ್ದಾರೆ.
Advertisement
Advertisement
ನಾಡಿನ್ ಡೋರಿಸ್ ಅವರಿಗೆ ಕಳೆದ ಗುರುವಾರ ರೋಗದ ಲಕ್ಷಣಗಳು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಆದರೆ ರೋಗದ ಲಕ್ಷಣ ಕಾಣಿಸಿಕೊಂಡ ದಿನವೇ ನಾಡಿನ್ ಅವರು ಇಂಗ್ಲೆಂಡ್ ಪ್ರಧಾನ ಮಂತ್ರಿಯವರು ಆಯೋಜನೆ ಮಾಡಿದ್ದ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದ್ದರಿಂದ ಅವರ ಬಳಿ ಸಂಪರ್ಕದಲ್ಲಿ ಇದ್ದ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
Advertisement
Thanks for so many good wishes. It’s been pretty rubbish but I hope I’m over the worst of it now. More worried about my 84yo mum who is staying with me and began with the cough today. She is being tested tomorrow. Keep safe and keep washing those hands, everyone.
— Rt Hon Nadine Dorries MP (@NadineDorries) March 10, 2020
Advertisement
ಈ ಬಗ್ಗೆ ಟ್ವೀಟ್ ಮಾಡಿರುವ ನಾಡಿನ್ ಡೋರಿಸ್ ಅವರು, ನನಗೆ ಕೊರೊನಾ ಇರುವುದು ತಿಳಿದ ನಂತರ ಗುಣಮುಖರಾಗಿ ಎಂದು ಶುಭಕೊರಿದ ಎಲ್ಲರಿಗು ಧನ್ಯವಾದಗಳು. ಮುಂದೆ ಎಲ್ಲ ಸರಿ ಹೋಗುತ್ತದೆ. ಆದರೆ ನನ್ನ ಜೊತೆಯಲ್ಲೇ ಇದ್ದ ನನ್ನ 84 ವರ್ಷದ ಅಮ್ಮನಿಗೆ ಕೂಡ ಇಂದು ಕೆಮ್ಮು ಕಾಣಿಸಿಕೊಂಡಿದೆ. ಆಕೆಯನ್ನು ನಾಳೆ ವೈದ್ಯರು ಪರೀಕ್ಷಿಸಲಿದ್ದಾರೆ. ಎಲ್ಲರೂ ಸುರಕ್ಷಿತವಾಗಿರಿ ಮತ್ತು ಎಲ್ಲರೂ ಸದಾ ಕೈಗಳನ್ನು ತೊಳಿದುಕೊಳ್ಳುತ್ತಿರಿ ಎಂದು ಬರೆದುಕೊಂಡಿದ್ದಾರೆ.
ಡಿಸೆಂಬರ್ ತಿಂಗಳಲ್ಲಿ ಚೀನಾದಲ್ಲಿ ಕಾಣಿಸಿಕೊಂಡ ಈ ವೈರಸ್ ಈಗ ವಿಶ್ವದೆಲ್ಲೆಡೆ ಕಾಣಿಸಿಕೊಂಡಿದೆ. ಚೀನಾದಲ್ಲಿ 80,778 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಭಾರತದಲ್ಲಿ ಸುಮಾರು 61 ಮಂದಿಗೆ ಕೊರೊನಾ ತಗುಲಿದ್ದು, ಕರ್ನಾಟಕದಲ್ಲಿ 4 ಮಂದಿ ಕೊರೊನಾ ತುತ್ತಾಗಿರುವುದು ದೃಢಪಟ್ಟಿದೆ. ಇತ್ತ ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿ ಒಟ್ಟು 14 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿದೆ.
ಇತ್ತ ಇರಾನ್‍ನಲ್ಲಿ ಕೂಡ ಕೊರೊನಾ ಮರಣಮೃದಂಗ ಬಾರಿಸುತ್ತಿದೆ. 291 ಮಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದು, 8,042 ಮಂದಿಗೆ ಸೋಂಕು ತಗುಲಿದೆ. ಈ ಮಧ್ಯೆ ಇರಾನ್‍ನಲ್ಲಿ ಇದ್ದ 58 ಭಾರತೀಯರನ್ನು ಭಾರತೀಯ ವಾಯುಪಡೆ ತಾಯ್ನಾಡಿಗೆ ವಾಪಸ್ ಕರೆತಂದಿದೆ. ಮಹಾಮಾರಿ ಕೊರೊನಾಗೆ ಭಾರತೀಯರೊಬ್ಬರು ಸಾವನ್ನಪ್ಪಿದ್ದಾರೆ. ಭಾರತೀಯ ಮೂಲದ ಬ್ರಿಟನ್‍ನಲ್ಲಿದ್ದ ಮನೋಹರ್ ಕೃಷ್ಣ ಪ್ರಭು(80) ಮೃತರಾಗಿದ್ದಾರೆ. ಇವರು ವ್ಯಾಟ್‍ಫೋರ್ಡ್ ಜನರಲ್ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ.