ಲಂಡನ್: ಭಾರತದ ವಿರುದ್ಧ ನಾಳೆಯಿಂದ ಆರಂಭವಾಗಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದೆ.
Advertisement
ಎಡ್ಜ್‌ಬಾಸ್ಟನ್‌ನಲ್ಲಿ ನಾಳೆಯಿಂದ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಇಂಗ್ಲೆಂಡ್ ತಂಡದ ಪಂದ್ಯ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ಪ್ಲೇಯಿಂಗ್ 11 ಪ್ರಕಟಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಹೊರ ನಡೆದಿದ್ದ ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆಂಡರ್ಸನ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ ಫೋಕ್ಸ್ ಕೊರೊನಾದಿಂದಾಗಿ ತಂಡದಿಂದ ಹೊರಗುಳಿದಿದ್ದು ಅವರ ಬದಲಿಗೆ ಸ್ಯಾಮ್ ಬಿಲ್ಲಿಂಗ್ಸ್ ವಿಕೆಟ್ ಕೀಪರ್ ಆಗಿ ಆಯ್ಕೆ ಗೊಂಡಿದ್ದಾರೆ.
Advertisement
ತಂಡ ಹೀಗಿದೆ:
ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಓಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (C), ಸ್ಯಾಮ್ ಬಿಲ್ಲಿಂಗ್ಸ್ (WK), ಮ್ಯಾಥ್ಯೂ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್. ಇದನ್ನೂ ಓದಿ: ನಾಳೆಯಿಂದ ಭಾರತ – ಇಂಗ್ಲೆಂಡ್ ಹೈವೋಲ್ಟೇಜ್ ಟೆಸ್ಟ್ ಕ್ರಿಕೆಟ್: ಬುಮ್ರಾಗೆ ನಾಯಕನ ಪಟ್ಟ
Advertisement
Our XI for the fifth LV= Insurance Test with @BCCI ????
More here: https://t.co/uXHG3iOVCA
???????????????????????????? #ENGvIND ???????? pic.twitter.com/xZlULGsNiB
— England Cricket (@englandcricket) June 30, 2022
Advertisement
ಕಳೆದ ವರ್ಷ 5 ಪಂದ್ಯಗಳ ಟೆಸ್ಟ್ ಸರಣಿಯ ವೇಳೆ ತಂಡದಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿತ್ತು. ಕೋವಿಡ್ ಹೆಚ್ಚಾದ ಬಳಿಕ 5ನೇ ಪಂದ್ಯ ನಡೆಸದೆ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದೀಗ ಈ ಪಂದ್ಯವನ್ನು ಮುಂದುವರಿಸುತ್ತಿದ್ದು, ಏಕೈಕ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭವಾಗುತ್ತಿದೆ. ಈಗಾಗಲೇ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 2-1 ಅಂತರದ ಮುನ್ನಡೆ ಪಡೆದುಕೊಂಡಿದೆ. ನಾಳೆ ಮಧ್ಯಾಹ್ನ 3:00 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. ಇದನ್ನೂ ಓದಿ: ರ್‍ಯಾಂಕಿಂಗ್‌ನಲ್ಲಿ ಕೊಹ್ಲಿಯ ಅಪರೂಪದ ವಿಶ್ವ ದಾಖಲೆ ಮುರಿದ ಬಾಬರ್ ಅಜಮ್
ಈ ನಡುವೆ ಭಾರತ ತಂಡಕ್ಕೆ ಕೊರೊನಾ ಅಡ್ಡಿಯಾಗುತ್ತಿದೆ. ಕೊರೊನಾ ಕಾಣಿಸಿಕೊಂಡ ಪರಿಣಾಮ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಂಡದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ರೋಹಿತ್ ಅನುಪಸ್ಥಿತಿಯಲ್ಲಿ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಂಡವನ್ನು ನಾಯಕನಾಗಿ ಮುನ್ನಡೆಸುವ ಸಾಧ್ಯತೆ ಇದೆ. ಆದರೆ ರೋಹಿತ್ ಶರ್ಮಾ ಕೊರೊನಾ ವರದಿ ಇಂದು ಸಂಜೆ ನೆಗೆಟಿವ್ ಬಂದರೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುಳಿವು ಕೋಚ್ ರಾಹುಲ್ ದ್ರಾವಿಡ್ ನೀಡಿದ್ದಾರೆ.