ನವದೆಹಲಿ: ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಿಡ್ನಿಯಲ್ಲಿ ಹೇಳಿದ್ದಾರೆ.
ಸಿಡ್ನಿ ಡೈಲಾಗ್‍ನಲ್ಲಿ ಭಾಷಣ ಮಾಡಿದ ಮೋದಿ ಅವರು, ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವುದು ಅತ್ಯಗತ್ಯ. ರಾಷ್ಟ್ರೀಯ ಹಕ್ಕುಗಳನ್ನು ಗುರುತಿಸುವ ಮೂಲಕ ವ್ಯಾಪಾರ, ಹೂಡಿಕೆ ಮತ್ತು ದೊಡ್ಡ ಸಾರ್ವಜನಿಕ ಒಳಿತನ್ನು ಉತ್ತೇಜಿಸಬೇಕು ಎಂದು ಹೇಳಿದರು. ಈ ವೇಳೆ ಉದಾಹರಣೆ ಕೊಟ್ಟ ಅವರು, ಕ್ರಿಪ್ಟೋ-ಕರೆನ್ಸಿ ವಿಚಾರದಲ್ಲಿ ಎಲ್ಲ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು. ಅಲ್ಲಿ ತಪ್ಪು ಆಗದಂತೆ ನೋಡಿಕೊಳ್ಳುವುದು ಮುಖ್ಯ ಎಂದು ಹೇಳಿದರು. ಇದನ್ನೂ ಓದಿ: ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟ ಮಾಡಿದ ಪೊಲೀಸ್ – ವೀಡಿಯೋ ವೈರಲ್
Advertisement
Addressing The Sydney Dialogue. https://t.co/AYQ5xajhRD
— Narendra Modi (@narendramodi) November 18, 2021
Advertisement
ಭಾರತದಲ್ಲಿ ತಂತ್ರಜ್ಞಾನ ಅಭಿವೃದ್ಧಿ ಮತ್ತು ಕ್ರಾಂತಿ ಬಗ್ಗೆಯೂ ಮಾತನಾಡಿದ ಅವರು, ದೇಶವು ಪ್ರಸ್ತುತ ಐದು ಪ್ರಮುಖ ಪರಿವರ್ತನೆಗಳಿಗೆ ಸಾಕ್ಷಿಯಾಗಿದೆ. ಅವುಗಳು ಸಬಲೀಕರಣ, ಸಂಪರ್ಕ, ಪ್ರಯೋಜನಗಳ ವಿತರಣೆ ಮತ್ತು ಕಲ್ಯಾಣ ಸೇರಿದಂತೆ ಆಡಳಿತದಲ್ಲಿ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗಿದೆ. ಈ ಮೂಲಕ ಜನರ ಜೀವನದ ಪರಿವರ್ತಿನೆಯಲ್ಲಿ ಭಾರತದ ಪ್ರಯತ್ನಗಳನ್ನು ನೆನಪಿಸಿಕೊಂಡು ಶ್ಲಾಘಿಸಿದರು.
Advertisement
Advertisement
ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನ ಎಂಬುದು ಬಹುದೊಡ್ಡ ಸಾಧನವಾಗಿದೆ. ಅಂತಾರಾಷ್ಟ್ರೀಯ ಮಟ್ಟದ ವ್ಯವಸ್ಥೆಗಳಿಗೆ ಭವಿಷ್ಯದಲ್ಲಿ ರೂಪಕೊಡಲು ಅತ್ಯಂತ ಮುಖ್ಯ ಅಂಶವಾಗಿದೆ. ಟೆಕ್ನಾಲಜಿ ಮತ್ತು ಡಾಟಾ (ತಂತ್ರಜ್ಞಾನ ಮತ್ತು ದತ್ತಾಂಶ) ಗಳು ಬರಬರುತ್ತಾ ಎಲ್ಲ ಕ್ಷೇತ್ರಗಳಲ್ಲೂ ಮುಖ್ಯ ಅಸ್ತ್ರಗಳಾಗುತ್ತಿವೆ. ನಾವಿದಕ್ಕೆ ಮುಕ್ತವಾಗಿ ತೆರೆದುಕೊಳ್ಳುತ್ತಿದ್ದೇವೆ. ಪ್ರಜಾಪ್ರಭುತ್ವದ ದೊಡ್ಡ ಬಲವೆಂದರೆ ಅದು ಮುಕ್ತತೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ಈ ಮುಕ್ತತೆಯನ್ನು ದುರುಪಯೋಗಪಡಿಸಿಕೊಳ್ಳಲು ಬಿಡಬಾರದು ಎಂದು ಹೇಳಿದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ – ರೆಡ್ ಅಲರ್ಟ್ ಫೋಷಣೆ