CinemaDistrictsKarnatakaLatestMain PostSandalwood

ಕ್ರಿಕೆಟ್ ಪಂದ್ಯದ ಮಧ್ಯ ಗಮನ ಸೆಳೆದಿದ್ದ ಈ ಸುಂದರಿ, ಸಿನಿಮಾ ರಂಗಕ್ಕೆ ಎಂಟ್ರಿ

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಹೈ ಸ್ಕೋರ್ ಪಂದ್ಯ ಅಭಿಮಾನಿಗಳನ್ನು ಸೀಟಿನ ತುದಿಗೆ ತಂದು ಕುರಿಸಿತ್ತು. ಈ ಪಂದ್ಯದ ಮಧ್ಯೆ ಎಲ್ಲರ ಗಮನಸೆಳೆದಿದ್ದು ಆ ಬ್ಯೂಟಿ. ಅವ್ರೇ ಆರ್ತಿ ಬೇಡಿ. ಈ ಪಂದ್ಯದಲ್ಲಿ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾದ ಆರ್ತಿ ಬೇಡಿ ರಾತ್ರೋ ರಾತ್ರಿ ಸೆನ್ಸೇಷನಲ್ ಸ್ಟಾರ್ ಆಗಿಬಿಟ್ಟರು‌. ಇಂಟರ್ ನೆಟ್ ಜಗತ್ತಿನಲ್ಲಿ ಎಲ್ಲೆಡೆ ಆರ್ತಿ ಬೇಡಿ ಪಟಗಳು ವೈರಲ್ ಆದ ನಂತ್ರ ಈಕೆ ನ್ಯಾಷನಲ್ ಕ್ರಶ್ ಆಫ್ ಇಂಡಿಯಾ ಆಗಿಬಿಟ್ಟರು. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

ಆರ್ತಿ ಬೇಡಿ ಖ್ಯಾತಿ ಈಗ ದುಪ್ಪಟ್ಟಾಗಿದೆ. ಈ ನಡುವೆ ಸಿನಿಮಾ ಲೋಕಕ್ಕೆ ಎಂಟ್ರಿ ಕೊಡಲು ಈ ಬ್ಯೂಟಿ ತಯಾರಾಗ್ತಿದ್ದಾಳೆ. ಹಲವು ನಿರ್ಮಾಪಕರು, ನಿರ್ದೇಶಕರನ್ನು ಅಪ್ರೋಚ್ ಆಗಿರುವ ಆರ್ತಿ ಕಂಟೆಂಟ್ ಹಾಗೂ ಕ್ವಾಲಿಟಿ ಸಿನಿಮಾ ಮಾಡುವ ಉತ್ಸಾಹದಲ್ಲಿದ್ದು, ಈಗಾಗಲೇ ಕೆಲ ಕಥೆಗಳನ್ನು ಓದುತ್ತಿದ್ದು, ಆ ಕಥೆಗಳು ಇಷ್ಟವಾದಲ್ಲಿ ಬಣ್ಣ ಹಚ್ಚಿ ಕ್ಯಾಮೆರಾ ಎದುರು ಹಾಜರಾಗಲಿದ್ದಾರೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

ಆರ್ತಿ ಬೇಡಿ ಹಿಮಾಲಯ, ಒಲಾ, ಐಸಿಐಸಿಐ ಬ್ಯಾಂಕ್, ವೈಲ್ಡ್ ಸ್ಟೋನ್ ನಂತಹ 35-40ಕ್ಕೂ ಜಾಹೀರಾತುಗಳಲ್ಲಿ ನಟಿಸ್ತಿದ್ದಾರೆ. ಸದ್ಯ ಆರ್ತಿ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿಯಾಗಲು ಅಖಾಡ ಸಿದ್ಧ ಮಾಡಿಕೊಳ್ತಿದ್ದು, ಯಾವ ರೀತಿ ಸಿನಿಮಾವನ್ನು ಚ್ಯೂಸ್ ಮಾಡ್ತಾರೆ ಅನ್ನೋದು ಸದ್ಯಕ್ಕಿರುವ ಕುತೂಹಲ.

Leave a Reply

Your email address will not be published.

Back to top button