– ಜೈಶ್ರೀರಾಮ್ ಘೋಷಣೆಯೊಂದಿಗೆ ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಆಕ್ರೋಶ
ಮಂಡ್ಯ: ರಾತ್ರೋರಾತ್ರಿ ಹನುಮ ಧ್ವಜ (Hanuma Flag) ತೆರವಿಗೆ ಅಧಿಕಾರಿಗಳು ಆಗಮಿಸಿದ ಸಂದರ್ಭ ರೊಚ್ಚಿಗೆದ್ದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧವೇ ತಿರುಗಿಬಿದ್ದ ಘಟನೆ ಮಂಡ್ಯ (Mandya) ಜಿಲ್ಲೆಯಲ್ಲಿ ನಡೆದಿದೆ.
Advertisement
Advertisement
ಅಧಿಕಾರಿಗಳು ಭಾನುವಾರ (ಜ.28) ಮುಂಜಾನೆ 3 ಗಂಟೆ ವೇಳೆಗೆ ಗ್ರಾಮಕ್ಕೆ ಆಗಮಿಸಿ ಧ್ವಜ ತೆರವಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಿಂದ ಮಂಡ್ಯ ತಾಲೂಕಿನ ಕೆರೆಗೋಡು (Keregodu) ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಹನುಮ ಧ್ವಜ ತೆರವು ಮಾಡದಂತೆ ನೂರಾರು ಜನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: 6,000 ಕ್ವಿಂಟಾಲ್ ಪಡಿತರ ಅಕ್ಕಿ ಕಳ್ಳತನ ಕೇಸ್ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಅರೆಸ್ಟ್
Advertisement
Advertisement
ಮಂಡ್ಯ ಎಸಿ ಶಿವಮೂರ್ತಿ, ತಹಸಿಲ್ದಾರ್ ಶಿವಕುಮಾರ್ ಬಿರಾದರ್ ನೇತೃತ್ವದಲ್ಲಿ ಧ್ವಜ ಇಳಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ಜೈ ಶ್ರೀರಾಮ್, ಜೈ ಹನುಮ ಘೋಷಣೆ ಕೂಗಿ ಪ್ರತಿಭಟನೆ ಆರಂಭಿಸಿದ್ದು, ಧ್ವಜ ಕಂಬದ ಬಳಿಯೇ ಮಹಿಳೆಯರು ಹಾಗೂ ಯುವಕರು ಕುಳಿತಿದ್ದಾರೆ. ಅಲ್ಲದೇ ಕೆರೆಗೋಡು ಗ್ರಾಮಸ್ಥರಿಗೆ ಸಾಥ್ ನೀಡಲು ಹಲವು ಹಿಂದೂ ಸಂಘಟನೆಗಳು ಧಾವಿಸಿವೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿಂದು ಶೋಷಿತ ಸಮುದಾಯಗಳ ಬೃಹತ್ ಸಮಾವೇಶ – 2 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ
ಹನುಮನ ಧ್ವಜ ಉಳಿವಿಗಾಗಿ ಮಹಿಳೆಯರು ಕಣ್ಣೀರು ಹಾಕಿದ್ದಾರೆ. ಹಿಂದೂ ಧರ್ಮದ ಪ್ರತೀಕ ಹನುಮ ಧ್ವಜ. ನಾವು ಧ್ವಜವನ್ನು ಯಾವುದೇ ಕಾರಣಕ್ಕೂ ಇಳಿಸಲ್ಲ. ರಾತ್ರಿ ಎಲ್ಲಾ ಊಟ, ನಿದ್ದೆ ಬಿಟ್ಟು ಹನುಮ ಧ್ವಜ ಕಾದಿದ್ದೇವೆ. ಕಾರಣವನ್ನು ಹೇಳದೆ ಧ್ವಜ ಇಳಿಸಲು ಬಂದಿದ್ದಾರೆ. ಹನುಮ ಧ್ವಜ ಇಳಿಸಲು ಬಂದವರಿಗೆ ಶಾಪ ತಟ್ಟದೇ ಬಿಡಲ್ಲ ಎಂದು ಮಹಿಳೆಯರು `ಪಬ್ಲಿಕ್ ಟಿವಿ’ಯೊಂದಿಗೆ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ನಾಪೋಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ