ಹಾಸನ: ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವಕ್ಕೆ ಸಾರ್ವಜನಿಕರಿಗೆ ಈ ಬಾರಿಯೂ ಅವಕಾಶ ಕಲ್ಪಿಸಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ನಗರದಲ್ಲಿ ಮಂಗಳವಾರ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯ ನಂತರ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ನಿಯಂತ್ರಣದಲ್ಲಿದೆ. ಜನರ ಧಾರ್ಮಿಕ ಭಾವನೆಯನ್ನು ಗೌರವಿಸಬೇಕಾಗಿರುವುದರಿಂದ ಈ ಅವಕಾಶ ಕಲ್ಪಿಸಲಾಗಿದೆ. ದೇವಾಲಯದ ಬಾಗಿಲು ತೆರೆಯುವ ದಿನವಾದ ಅ.28 ಹಾಗೂ ಬಾಗಿಲು ಮುಚ್ಚುವ ದಿನವಾದ ನ.6 ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 8 ಗಂಟೆವರೆಗೆ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
Advertisement
Advertisement
ಹಾಸನಾಂಬ ದರ್ಶನೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು. ಪ್ರತಿಯೊಬ್ಬರೂ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಗಿಣಿ ಕೇಸ್ ಉಲ್ಲೇಖ, ಆರ್ಯನ್‍ಗೆ ಜಾಮೀನು ನೀಡಿ – ಮುಕುಲ್ ರೊಹ್ಟಗಿ ವಾದ
Advertisement
ದೇವರ ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು. ಅದಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹೊಂದಿರಬೇಕು ಎಂದು ಹೇಳಿದರು.
Advertisement
ಪ್ರತಿ ವರ್ಷದಂತೆ ಈ ವರ್ಷವೂ ವಿಶೇಷ ದರ್ಶನಕ್ಕೆ ಅವಕಾಶವಿದೆ. 300 ರೂ. ಹಾಗೂ 1000 ರೂ.ಗೆ ಪಾಸ್‍ಗಳನ್ನು ವಿತರಿಸಲಾಗುವುದು. ಸಾಮಾನ್ಯ ದರ್ಶನಕ್ಕೆ ಸೂಕ್ತ ಮೂಲಸೌಕರ್ಯ ಕಲ್ಪಿಸಲು ಅವಕಾಶ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: JDSಗೆ ಬದ್ದತೆ ಇಲ್ಲ, ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ: ದಿನೇಶ್ ಗುಂಡೂರಾವ್
ಇದೇ ವೇಳೆ ಶಾಸಕ ಪ್ರೀತಮ್ ಗೌಡ, ನಗರಸಭೆ ಅಧ್ಯಕ್ಷ ಮೋಹನ್, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹಾಜರಿದ್ದರು.