CinemaDistrictsKarnatakaLatestMain PostSandalwood

ರೆಬಲ್ ಸ್ಟಾರ್ ಅಂಬರೀಶ್ ಸಹೋದರಿಯ ಮಗ ಸಿನಿ ರಂಗಕ್ಕೆ ಎಂಟ್ರಿ

ನಿರ್ಮುಕ್ತ ಸಿನಿಮಾದ ಮೂಲಕ ರೆಬಲ್ ಸ್ಟಾರ್ ಅಂಬರೀಶ್ ಅವರ ಸಹೋದರಿಯ ಪುತ್ರ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ರಮ್ಯ ಶ್ರೀನಿವಾಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಮೂಲಕ ಅಭಿಷೇಕ್ ಸ್ಯಾಂಡಲ್ ವುಡ್ ಎಂಟ್ರಿ ಕೊಟ್ಟಿದ್ದಾರೆ. ಅಂಬರೀಶ್ ಪುತ್ರನ ಹೆಸರು ಮತ್ತು ಸಹೋದರಿಯ ಮಗನ ಹೆಸರು ಅಭಿಷೇಕ್ ಎಂದೇ ಇರುವುದು ವಿಶೇಷ. ಇದನ್ನೂ ಓದಿ : ಇನ್‌ಸ್ಟಾಗ್ರಾಮ್‌ ಪ್ರಭಾವಿ ಪಟ್ಟಿಯಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ – ದಕ್ಷಿಣದ ಸ್ಟಾರ್‌ಗಳಿಗೂ ಇಲ್ಲ ಪಟ್ಟ

ನಿರ್ದೇಶಕರೆ, ಈ ಸಿನಿಮಾ ಕಥೆ, ಚಿತ್ರಕಥೆ ಬರೆದಿದ್ದು, ರೂಪಸ್ವಾಮಿ ಅವರೊಡಗೂಡಿ ನಿರ್ಮಾಣವನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಸಮಾರಂಭ ನೆರವೇರಿತು. ಸಂಸದೆ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು. ಇದನ್ನೂ ಓದಿ : ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್‌ಗೆ ಭಯಂಕರ ಬೇಡಿಕೆ ಇಟ್ಟ ಫ್ಯಾನ್ಸ್

ಈ ಚಿತ್ರದ ನಾಯಕನ‌ ಹೆಸರು ಕೂಡ ಅಭಿಷೇಕ್. ಇವರು ರೆಬಲ್ ಸ್ಟಾರ್ ಅಂಬರೀಶ್ ಅವರ ತಂಗಿ ರಂಜನಿ ಅವರ ಪುತ್ರ. ನವ್ಯ ಪೂಜಾರಿ ಈ ಚಿತ್ರದ ನಾಯಕಿ. ಇದು ನಮ್ಮ ಕುಟುಂಬದ ಸಮಾರಂಭ. ಏನು ಮಾತನಾಡಬೇಕೊ ತಿಳಿಯುತ್ತಿಲ್ಲ. ಅಂಬರೀಶ್ ಅವರ ತಾತಾ ಚೌಡಯ್ಯ ಅವರು. ಸಂಗೀತ ಕ್ಷೇತ್ರದಲ್ಲಿ ಅವರದೇ ಹೆಸರು. ನಂತರ ಅಂಬರೀಶ್ ಸಿನಿಮಾದಲ್ಲಿ ಹೆಸರು ಮಾಡಿದರು. ಆನಂತರ ನಮ್ಮ ಅಭಿಷೇಕ್. ಈಗ ಈ ಅಭಿಷೇಕ್. ಸಂತೋಷವಾಗುತ್ತಿದೆ ಎಲ್ಲರನ್ನು ನೋಡಿ. ಅಭಿಷೇಕ್ ಸಿ.ಕೆ  ಸಹ ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಮಾಡಲಿ ಎಂದರು ಸುಮಲತಾ ಅಂಬರೀಶ್.  ಇದನ್ನೂ ಓದಿ : ಹಿಂದಿ ಬದಲು ಸಂಸ್ಕೃತ ರಾಷ್ಟ್ರ ಭಾಷೆಯಾಗಲಿ: ಕಂಗನಾ ರಣಾವತ್

ಟೀಸರ್ ನೋಡಿದೆ. ಚೆನ್ನಾಗಿದೆ. ಅಭಿಷೇಕ್ ಸಿ.ಕೆ ನನ್ನ ಬ್ರದರ್. ಅವರಿಗೆ ಶುಭವಾಗಲಿ ಎಂದು ಅಭಿಷೇಕ್ ಅಂಬರೀಶ್ ಹಾರೈಸಿದರು.  ಚಿತ್ರತಂಡಕ್ಕೆ ಶುಭಕೋರಿದ ರಾಕ್ ಲೈನ್ ವೆಂಕಟೇಶ್, ಅಂಬರೀಶ್ ಅವರನ್ನು ನೆನೆದು ಭಾವುಕರಾದರು. ಇದೊಂದು ಮೆಡಿಕಲ್ ಕಾಲೇಜ್ ನಲ್ಲಿ ನಡೆಯುವ ಕಥೆ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿದೆ. ನಾನು ನಿರ್ದೇಶನ ಮಾಡಲು ಸಹಕಾರ ನೀಡಿದವರು ನನ್ನ ಪತಿ ಶ್ರೀನಿವಾಸ್. ಬಂದಿರುವ ಗಣ್ಯರಿಗೆ , ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕಿ ರಮ್ಯ ಶ್ರೀನಿವಾಸ್. ಹಾಡು ಬರೆದಿರುವ ಸ್ವಾಮಿ ಹಾಗೂ ಸಂಗೀತ ನೀಡಿರುವ ಸಾಮ್ರಾಟ್ “ನಿರ್ಮುಕ್ತ” ಚಿತ್ರದ ಬಗ್ಗೆ ಮಾತನಾಡಿದರು.

Leave a Reply

Your email address will not be published.

Back to top button