ಲಂಡನ್: ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್ ಇಂದು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
2021ರ ಐಪಿಎಲ್ ನಂತರ ಸತತ ಬ್ಯಾಟಿಂಗ್ ವೈಫಲ್ಯದಿಂದ ಹಿನ್ನಡೆ ಕಂಡಿದ್ದ ಇಯಾನ್ ಮಾರ್ಗನ್ ತಮ್ಮ 16 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಪಯಣಕ್ಕೆ ಪೂರ್ಣ ವಿರಾಮ ಹಾಕಿದ್ದಾರೆ.
Advertisement
Advertisement
13 ವರ್ಷಗಳ ಇಂಗ್ಲೆಂಡ್ ತಂಡದ ಪಯಣದಲ್ಲಿ ಐಯಾನ್ ಮಾರ್ಗನ್ ಅಮೋಘ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ. ಇಯಾನ್ ಮಾರ್ಗನ್ ನಾಯಕತ್ವದ ಇಂಗ್ಲೆಂಡ್ ತಂಡ 2019ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಟ್ರೋಫಿಯನ್ನು ಮೊಟ್ಟ ಮೊದಲ ಬಾರಿಗೆ ಗೆದ್ದು ಸಂಭ್ರಮಿಸಿತ್ತು. 2010ರಲ್ಲಿ ಐಸಿಸಿ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದಲ್ಲಿ ಮಾರ್ಗನ್ ಆಡಿದ್ದರು. 2021ರ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನೊಂದಿಗೆ ಸೆಣಸಾಡಿ ಕೆಕೆಆರ್ ತಂಡಕ್ಕೆ ರನ್ನರ್‌ಅಪ್ ಪ್ರಶಸ್ತಿ ತಂದುಕೊಡುವಲ್ಲಿ ಮಾರ್ಗನ್ ಅವರ ಪಾತ್ರ ಅಪಾರವಾಗಿತ್ತು.
Advertisement
Advertisement
2006ರಲ್ಲಿ ಐರ್ಲೆಂಡ್ ಪರ ಇಯಾನ್ ಮಾರ್ಗನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. 3 ವರ್ಷಗಳ ಬಳಿಕ ಇಂಗ್ಲೆಂಡ್ ತಂಡಕ್ಕೆ ಸೇರ್ಪಡೆಯಾದರು. ಹಲವು ವರ್ಷಗಳ ಕಾಲ ಮಾರ್ಗನ್ ನಾಯಕತ್ವದಲ್ಲಿ ಇಂಗ್ಲೆಂಡ್ ತಂಡವು ಐಸಿಇ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನೂ ಕಾಯ್ದುಕೊಂಡಿತ್ತು.
ಇಯಾನ್ ಮಾರ್ಗನ್ ಈವರೆಗೆ 225 ಏಕದಿನ, 73 ಟಿ20 ಪಂದ್ಯಗಳನ್ನಾಡಿದ್ದಾರೆ. ಏಕದಿನ ಪಂದ್ಯಗಳಲ್ಲಿ 13 ಶತಕಗಳೊಂದಿಗೆ 39.75ರ ಸರಾಸರಿಯಲ್ಲಿ 6,957 ರನ್ ದಾಖಲಿಸಿದ್ದಾರೆ. ಅದರಲ್ಲೂ ಅವರು 126 ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸಿದ್ದು, ಇದರಲ್ಲಿ 76 ರಲ್ಲಿ ಗೆಲುವು ತಂದುಕೊಟ್ಟಿದ್ದಾರೆ.