ಬೆಂಗಳೂರು: ನಟಿ ರಮ್ಯಾ (Ramya) ಅವರು ಸದಾಶಿವನಗರ ಆಗಮಿಸಿ ಎಸ್ಎಂ ಕೃಷ್ಣ (SM Krishna) ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈಗ ನಾನು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿ ತೆರಳಿದರು.
ರಮ್ಯಾ ಅವರನ್ನು ರಾಜಕಾರಣಕ್ಕೆ (Politics) ಕರೆತಂದಿದ್ದೆ ಎಸ್ಎಂಕೆ. ಈ ಕಾರಣದಿಂದ ಹಲವಾರು ಬಾರಿ ರಮ್ಯಾ ಅವರು ಎಸ್ಎಂಕೆ ನಿವಾಸಕ್ಕೆ ತೆರಳಿ ಮಾತನಾಡಿ ಸಲಹೆಗಳನ್ನು ಪಡೆಯುತ್ತಿದ್ದರು. ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಜಾನ್ ಎಫ್ ಕೆನಡಿ ಪ್ರೇರಣೆಯಿಂದ ರಾಜಕೀಯ ಸೇರಿದ್ದ ಎಂಸ್ಎಂಕೆ
Advertisement
Advertisement
ಎಸ್.ಎಂ.ಕೃಷ್ಣ ಅವರ ನೇತೃತ್ವದಲ್ಲೇ ರಾಜಕಾರಣಕ್ಕೆ ಕಾಲಿಟ್ಟ ರಮ್ಯಾ ಅವರು ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಶೀಘ್ರವಾಗಿ ಬೆಳೆದರು. ತಮ್ಮ ಸೆಲೆಬ್ರಿಟಿ ಇಮೇಜ್ನಿಂದಾಗಿ ಹೈಕಮಾಂಡ್ನಲ್ಲಿ ಶೀಘ್ರವಾಗಿ ಗುರುತಿಸಿಕೊಂಡಿದ್ದರು.
Advertisement
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಹೈಕಮಾಂಡ್ನ ಪ್ರಭಾವಶಾಲಿ ನಾಯಕರ ಜೊತೆ ನೇರವಾಗಿ ಸಂಪರ್ಕ ಸಾಧಿಸಬಲ್ಲ ರಾಜ್ಯದ ಕೆಲವೇ ಕಾಂಗ್ರೆಸ್ಸಿಗರಲ್ಲಿ ರಮ್ಯಾ ಕೂಡ ಒಬ್ಬರಾಗಿದ್ದರು.
Advertisement
ಕೃಷ್ಣ ಅವರನ್ನು ಅಂಕಲ್ ಎಂದೇ ಕರೆಯುತ್ತಿದ್ದ ರಮ್ಯಾ, ಕೃಷ್ಣ ಅವರ ಮಾರ್ಗದರ್ಶನದಲ್ಲೇ ರಾಜಕೀಯ ನಡೆಗಳನ್ನು ಇಟ್ಟವರು. ಮಂಡ್ಯ ಜಿಲ್ಲೆಯ ಕಾಂಗ್ರೆಸ್ನ ಒಳ ರಾಜಕಾರಣವನ್ನು ಭೇದಿಸಿ ಸಂಸದರಾಗಲು ಈ ಮಾರ್ಗದರ್ಶನವೇ ಅವರಿಗೆ ರಕ್ಷೆಯಾಗಿತ್ತು.