ರಾಮನಗರ: ಬ್ರ್ಯಾಂಡ್ ಬೆಂಗಳೂರು (Brand Bengaluru) ಹೆಸರಲ್ಲಿ ರಾಮನಗರದ (Ramanagara) ಇತಿಹಾಸ ಅಳಿಸುವ ಕೆಲಸ ಆಗುತ್ತಿದೆ. ಜಿಲ್ಲೆಯ ಜನತೆ ಇದರ ವಿರುದ್ಧವಾಗಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ರಾಮನಗರ ಹೆಸರು ಬದಲಾವಣೆಗೆ ಸಂಪುಟ ಅನುಮೋದನೆ ಕುರಿತು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ರಾಮನ ಪಾದಸ್ಪರ್ಶದ ಪುಣ್ಯಕ್ಷೇತ್ರ. ಆದರೆ ರಾಜಕೀಯ ಉದ್ದೇಶಕ್ಕೆ ಹೆಸರು ಬದಲಾವಣೆ ಮಾಡಲಾಗುತ್ತಿದೆ. ರಾಮನಗರ ಜಿಲ್ಲೆ ಸ್ಥಾಪನೆ ಆದಾಗಾ ಯಾರೂ ಇದಕ್ಕೆ ನಕಾರ ಎತ್ತಲಿಲ್ಲ. ರಾಮನಗರ ಹೆಸರಿಗೆ ಯಾರೂ ವಿರೋಧ ಮಾಡಲಿಲ್ಲ ಎಂದರು. ಇದನ್ನೂ ಓದಿ: Paris Olympics 2024: ಭಾರತದ ಮನು ಭಾಕರ್ ಫೈನಲ್‌ಗೆ ಎಂಟ್ರಿ – 20 ವರ್ಷಗಳ ಬಳಿಕ ವಿಶೇಷ ಸಾಧನೆ!
ಹೆಸರು ಬದಲಾವಣೆ ಆದರೆ ಜನರಿಗೆ ಸಾಕಷ್ಟು ಸಮಸ್ಯೆ ಆಗಲಿದೆ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ರೆವೆನ್ಸೂ ದಾಖಲಾತಿ ಬದಲಾವಣೆ ಮಾಡಬೇಕು. ಸಾಕಷ್ಟು ಟೆಕ್ನಿಕಲ್ ಸಮಸ್ಯೆಗಳು ಎದುರಾಗುತ್ತವೆ. ಜನತೆ ನಿತ್ಯ ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಾಗುತ್ತದೆ. ಈ ಬಗ್ಗೆ ದೊಡ್ಡಮಟ್ಟದ ಹೋರಾಟಕ್ಕೆ ಚರ್ಚೆ ಮಾಡುತ್ತಿದ್ದೇವೆ. ಭಾನುವಾರ (ಜು.28) ಕೇಂದ್ರ ಸಚಿವ ಕುಮಾರಣ್ಣ ಹಾಗೂ ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರು ಲೇಡಿಸ್ ಪಿಜಿಯಲ್ಲಿ ಯುವತಿಯ ಹತ್ಯೆ – ಆರೋಪಿ 10 ದಿನ ಪೊಲೀಸ್ ಕಸ್ಟಡಿಗೆ
ಹೆಸರು ಬದಲಾವಣೆಗೆ ಹಾಸನದವರ ವಿರೋಧ ಎಂಬ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರ ಕುರಿತು ಮಾತನಾಡಿದ ಅವರು, ಜನರ ಅಭಿಪ್ರಾಯ ತಿಳಿಯದೇ ಏಕಾಏಕಿ ಆದೇಶ ಮಾಡೋದು ಸರಿಯಲ್ಲ. ಈ ಬಗ್ಗೆ ರಾಮನಗರದ ಟೋಕನ್ ಶಾಸಕರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಗಾಳಿಯಲ್ಲಿ ಗುಂಡುಹೊಡೆಯೋದು ಬಿಟ್ಟು ಮೊದಲು ಜನರ ಕೆಲಸ ಮಾಡಲಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಬೆಂಗಳೂರಿನ ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್‌ಗಳಿಗೆ ಹೊಸ ರೂಲ್ಸ್ – ಇಲ್ಲಿದೆ ಡೀಟೆಲ್ಸ್