ಶ್ರೀನಗರ: ಲಷ್ಕರ್ ಶಾಖೆಯ ಟಿಆರ್‌ಎಫ್ (TRF) ಭಯೋತ್ಪಾದಕ ಗುಂಪು ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸೇನಾ ಸಮವಸ್ತ್ರ ಧರಿಸಿ ಬಂದ ಉಗ್ರರು ಮಾತನಾಡಿರುವ ನೆಪದಲ್ಲಿ ಬಂದು ಗುಂಡು ಹಾರಿಸಿದ್ದಾರೆ.
ಮೊದಲು ನೀವು ಮುಸಲ್ಮಾನರಾ? (Muslims) ಎಂದು ಕೇಳಿದ ಉಗ್ರರು, ಗುಂಡು ಹಾರಿಸುವುದಕ್ಕೂ ಮುನ್ನ ಪುರುಷರಿಗೆ ಇಸ್ಲಾಂನ ʻಕಲಿಮಾʼ (Kalima) ಪಠಿಸುವಂತೆ ಬೆದರಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ
ʻಕಲಿಮಾʼ ಅಥವಾ ಶಹದಾ ಅಂದ್ರೆ ಏನು?
ಕಲಿಮಾ ಅಥವಾ ಶಹದಾ ಅನ್ನೋದು ನಂಬಿಕೆಯ ಇಸ್ಲಾಮಿಕ್ (Islamic) ಘೋಷಣೆ. ಇದು ಇಸ್ಲಾಂ ನಂಬಿಕೆಯ ಐದು ಸ್ತಂಭಗಳಲ್ಲಿ ಒಂದೆಂದು ನಂಬುತ್ತಾರೆ. ಅರೇಬಿಕ್‌ನಲ್ಲಿ ‘ಅಶ್ಹದು ಆನ್ ಲಾ ಇಲಾಹ ಇಲ್ಲಲ್ಲಾಹ್, ವ ಅಶ್ಹದು ಅನ್ನ ಮುಹಮ್ಮದುರ್ ರಸುಲುಲ್ಲಾಹ್’ ಎಂದು ಬಣ್ಣಿಸುತ್ತಾರೆ. ಇದನ್ನು ಪ್ರಾಮಾಣಿಕವಾಗಿ ಪಠಿಸಿದವರು ಮುಸ್ಲಿಂ ಅನುಯಾಯಿಗಳಾಗುತ್ತಾರೆ, ಅವರು ಇಸ್ಲಾಂ ಧರ್ಮದ ಮಡಿಲಿಗೆ ಬರುತ್ತಾರೆ ಅನ್ನೋದು ನಂಬಿಕೆ. ಆದ್ದರಿಂದಲೇ ಪ್ರವಾಸಿಗರಿಗೆ ಗುಂಡು ಹಾರಿಸುವುದಕ್ಕೂ ಮುನ್ನ ಕಲಿಮಾ ಪಠಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗ ಮಂಜುನಾಥ್ ರಾವ್ ಯಾರು?
ಸೂಕ್ತ ಕ್ರಮಕ್ಕೆ ಅಮಿತ್ ಶಾಗೆ ಸೂಚಿಸಿದ ಮೋದಿ:
ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದಿಂದಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆ ಅಮಿತ್ ಶಾ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಐಬಿ ಗೃಹ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಈ ಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ | ಸೌದಿಯಿಂದಲೇ ಮೋದಿ ಕರೆ, ಸ್ಥಳಕ್ಕೆ ಹೊರಟ ಅಮಿತ್ ಶಾ
ಸದ್ಯ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ದಾಳಿಯನ್ನು ಖಂಡಿಸಿದ್ದು, ಪ್ರವಾಸಿಗರ ಮೇಲೆ ದಾಳಿ ನಡೆಸುವುದು ಅತ್ಯಂತ ಹೇಯ ಕೃತ್ಯ ಎಂದು ಎಂದು ಕಿಡಿ ಕಾರಿದ್ದಾರೆ. ಈ ನಡುವೆ ಭಯೋತ್ಪಾದಕರನ್ನು ಹಿಡಿಯಲು ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿವೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ – ಶಿವಮೊಗ್ಗದ ಉದ್ಯಮಿ ಸಾವು, 12 ಮಂದಿಗೆ ಗಾಯ