ಮುಂಬೈ: ಬಾಲಿವುಡ್ ನಟಿ ಇಶಾ ಗುಪ್ತಾ ಅವರು ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ತಿಳಿಸುವ ಬದಲು ಗಣರಾಜ್ಯೋತ್ಸವಕ್ಕೆ ಶುಭಾಶಯ ತಿಳಿಸಿದ್ದಾರೆ. ಈ ಟ್ವೀಟ್ ನೋಡಿ ಜನರು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.
ಇಂದು ಬೆಳಗ್ಗೆ ಇಶಾ ತಮ್ಮ ಟ್ವಿಟ್ಟರಿನಲ್ಲಿ, “ಎಲ್ಲರಿಗೂ ಗಣರಾಜ್ಯೋತ್ಸವ ದಿನದ ಶುಭಾಶಯಗಳು . ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದಾರೆ. ಇಶಾ ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಅಭಿಮಾನಿಗಳು ಅವರ ವಿರುದ್ಧ ಗರಂ ಆಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಶಾ ಅವರ ಪೋಸ್ಟ್ ಗೆ ಅಭಿಮಾನಿಯೊಬ್ಬರು, “ರಾತ್ರಿ ಕುಡಿದಿದ್ದು ಇನ್ನು ಇಳಿದಿಲ್ಲ ಎಂದು ನನಗೆ ಅನಿಸುತ್ತಿದೆ” ಎಂದು ಕೋಪದಿಂದ ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು, “ನೀವು ಅಲಿಯಾ ಭಟ್‍ಗಿಂತಲೂ ದೊಡ್ಡವರು” ಎಂದು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು “ಹುಚ್ಚು ಮಹಿಳೆ” ಎಂದು ಕಮೆಂಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
https://twitter.com/eshagupta2811/status/1161852594119200768
ಟ್ರೋಲ್ ಆಗುತ್ತಿದ್ದಂತೆ ಇಶಾ ತಮ್ಮ ಟ್ವೀಟ್ ಡಿಲೀಟ್ ಮಾಡಿಕೊಂಡಿದ್ದಾರೆ. ಟ್ವೀಟ್ ಡಿಲೀಟ್ ಮಾಡಿದ ನಂತರವೂ ಅವರು ಮತ್ತೆ ಗಣರಾಜ್ಯೋತ್ಸವ ದಿನದ ಶುಭಾಶಯಗಳು ಎಂದು ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.