ಬೀದರ್: ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ ನೋಟಿಸ್ ಕಾನೂನು ಬಾಹಿರವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತೀವ್ರ ವಾಗ್ದಾಳಿ ನಡೆಸಿದರು.
ಪಿಎಸ್‍ಐ ಅಕ್ರಮ ನೇಮಕಾತಿ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಸಿಐಡಿ ನೋಟಿಸ್ ನೀಡಿರುವ ವಿಚಾರದ ಬಗ್ಗೆ ಭಾಲ್ಕಿ ಪಟ್ಟಣದಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ಸರ್ಕಾರ ದಮನಕಾರಿ ನೀತಿ ಅನಿಸರಿಸುತ್ತಿದ್ದು, ನಮ್ಮ ಧ್ವನಿ ಅಡಗಿಸಲು ಈ ಸರ್ಕಾರದಿಂದ ಸಾಧ್ಯವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
Advertisement
ಪಿಎಸ್‍ಐ ಪರೀಕ್ಷೆ ಅಕ್ರಮದಲ್ಲಿ ಸಚಿವರು ಹಾಗೂ ದೊಡ್ಡ ದೊಡ್ಡವರಿದ್ದು, ಸಮರ್ಪಕವಾಗಿ ಯಾಕೆ ತನಿಖೆ ನಡೆಸುತ್ತಿಲ್ಲ ಎಂದು ಸರ್ಕಾರಕ್ಕೆ ಪ್ರಶ್ನಿಸಿದ ಅವರು, ಬಡವರನ್ನು ಮಾತ್ರ ತನಿಖೆ ನಡೆಸುತ್ತಿದೆ. ರಾಜ್ಯದಲ್ಲಿ ಎಲ್ಲರಿಗೂ ಒಂದೇ ಕಾನೂನು ಇದೆ. ಆದರೆ ಇಲ್ಲಿ ಒಬ್ಬರಿಗೊಂದು ಇನ್ನೊಬ್ಬರಿಗೆ ಒಂದು ಕಾನೂನು ಮಾಡಲಾಗುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ಅಳವಡಿಸುವುದು ಕಡ್ಡಾಯ: ಸುಧಾಕರ್
Advertisement
Advertisement
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿರುವ ಸಿಎಂ ಸ್ಥಾನಕ್ಕೆ 2,500 ಕೋಟಿ ರೂ. ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ರಾಜ್ಯವನ್ನು ಬಿಜೆಪಿ ಯಾವ ತರಹ ಲೂಟಿ ಮಾಡುತ್ತಿದೆ ಎಂಬುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯೇ ಸಾಕ್ಷಿ ಎಂದು ಸರ್ಕಾರವನ್ನು ಟೀಕಿಸಿದರು. ಇದನ್ನೂ ಓದಿ: ರಾಜಕೀಯ ಪಕ್ಷ ಅಧಿಕಾರ ಹಿಡಿಯಲು ‘ಆಪರೇಷನ್ ಕಮಲ’ ಅನಿವಾರ್ಯ: ಕಟೀಲ್