Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 150 ವರ್ಷದ ಬಳಿಕ ಬೆಂಗಳೂರಿನಲ್ಲಿ ಬೃಹತ್ ಜೈವಿಕ ಉದ್ಯಾನವನ ನಿರ್ಮಾಣ: ಈಶ್ವರ್ ಖಂಡ್ರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 150 ವರ್ಷದ ಬಳಿಕ ಬೆಂಗಳೂರಿನಲ್ಲಿ ಬೃಹತ್ ಜೈವಿಕ ಉದ್ಯಾನವನ ನಿರ್ಮಾಣ: ಈಶ್ವರ್ ಖಂಡ್ರೆ

Bengaluru City

150 ವರ್ಷದ ಬಳಿಕ ಬೆಂಗಳೂರಿನಲ್ಲಿ ಬೃಹತ್ ಜೈವಿಕ ಉದ್ಯಾನವನ ನಿರ್ಮಾಣ: ಈಶ್ವರ್ ಖಂಡ್ರೆ

Public TV
Last updated: June 2, 2025 6:18 pm
Public TV
Share
4 Min Read
Eshwar Khandre
SHARE

– 154 ಎಕ್ರೆ ಅರಣ್ಯ ಭೂಮಿಯಲ್ಲಿ ಉದ್ಯಾನವನ ಅಭಿವೃದ್ಧಿ

ಬೆಂಗಳೂರು: ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ (Madappanahalli) 153.39 ಎಕ್ರೆ ಅರಣ್ಯ ಭೂಮಿಯಲ್ಲಿ ಬೃಹತ್ ಜೈವಿಕ ಉದ್ಯಾನವನ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದರು.

Eshwar Khandre 1

ಮಾದಪ್ಪನಹಳ್ಳಿ ನೆಡುತೋಪಿನಲ್ಲಿ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ವಶದಲ್ಲಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ವಿಧ್ಯುಕ್ತವಾಗಿ ಹಿಂಪಡೆಯಲು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಉದ್ಯಾನ ಮುಂಬರುವ ದಿನಗಳಲ್ಲಿ ಉತ್ತರ ಬೆಂಗಳೂರಿಗೆ ಮಹತ್ವದ ಶ್ವಾಸ ತಾಣವಾಗಲಿದೆ ಎಂದರು. ಇದನ್ನೂ ಓದಿ: ಟೆಸ್ಲಾಗೆ 2 ಶೋ ರೂಂ ತೆರೆಯುವ ಆಸಕ್ತಿ ಇದೆ, ಆದ್ರೆ ಭಾರತದಲ್ಲೇ ಕಾರು ಉತ್ಪಾದಿಸುವ ಆಸಕ್ತಿ ಇಲ್ಲ: ಹೆಚ್‌ಡಿಕೆ

ಇಲ್ಲಿ ಕೆಎಫ್‌ಡಿಸಿ ನೀಲಗಿರಿ ಮರ ಬೆಳೆಸಿದ್ದು, ಈ ಎಲ್ಲ ಮರಗಳನ್ನೂ ತೆರವು ಮಾಡಿ, ಸ್ಥಳೀಯ ಪ್ರಭೇದದ ಬಿಲ್ವ, ಮಹಾಬಿಲ್ವ, ಹೊನ್ನೆ, ನೇರಳೆ, ಮತ್ತಿ, ಆಲ, ಅರಳಿಯ ಜೊತೆಗೆ ಪಶ್ಚಿಮಘಟ್ಟದಲ್ಲಿ ಬೆಳೆಯುವ ವಿವಿಧ ಪ್ರಭೇದದ ಸಸ್ಯಗಳನ್ನೂ ಬೆಳೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ʻಥಗ್‌ ಲೈಫ್‌ʼ ಸಿನಿಮಾಗೆ ಬ್ಯಾನ್‌ ಬಿಸಿ – ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್

ಪ್ರಸ್ತುತ ಈ 154 ಎಕ್ರೆ ಪ್ರದೇಶದಲ್ಲಿ ನೀಲಗಿರಿಯ ಜೊತೆಗೆ ಹೊನ್ನೆ, ಬೀಟೆ, ಜಾಲಿ, ಕಗ್ಗಲಿ, ಎಲಚಿ, ಚಿಗರೆ, ಹೊಳೆಮತ್ತಿ, ಮತ್ತಿ, ಕರಿಮತ್ತಿ ಮೊದಲಾದ 800 ಮರಗಳಿದ್ದು, ಅವುಗಳನ್ನು ಸಂರಕ್ಷಿಸಲಾಗುವುದು ಎಂದರು.

ಎಲ್ಲಾ 154 ಎಕ್ರೆ ಅರಣ್ಯ ಭೂಮಿಗೂ ಕಾಂಪೌಂಡ್ ಹಾಕಲಾಗಿದ್ದು, ಒತ್ತುವರಿ ಆಗದಂತೆ ರಕ್ಷಿಸಲಾಗಿದೆ. ಈ ಪ್ರದೇಶದಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನವನ, ವಿಶ್ವಗುರು ಬಸವಣ್ಣ ದಿವ್ಯೌಷಧೀಯ ಸಸ್ಯವನ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪಕ್ಷಿ ಲೋಕ, ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ ಹಾಗೂ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ನಿರ್ಮಾಣ ಮಾಡಲು ಸಲಹೆ ಬಂದಿದೆ. ಈ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್

ಅರಣ್ಯೇತರ ಉದ್ದೇಶಕ್ಕೆ ಬಳಕೆ ಇಲ್ಲ:
ಇದೇ ಸಂದರ್ಭದಲ್ಲಿ ಉದ್ಯಾನದ ಸ್ವರೂಪದ ಬಗ್ಗೆ ಹಿರಿಯ ಅಧಿಕಾರಿಗಳು, ಸ್ಥಳೀಯ ನಿವಾಸಿಗಳು ಮತ್ತು ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಅವರು, ಮೀಸಲು ಅರಣ್ಯದಲ್ಲಿ ಅವಕಾಶವಿರುವ ಚಟುವಟಿಕೆಗಳನ್ನು ಮಾತ್ರ ಮಾಡಲಾಗುವುದು. ಅಗತ್ಯಬಿದ್ದರೆ ತೀರುವಳಿ ಅನುಮತಿ ಪಡೆದು ಮುಂದಿನ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.

ಅತ್ಯಗತ್ಯವಾದ ಶ್ವಾಸ ತಾಣ:
ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರು ಲಾಲ್ ಬಾಗ್ ಇರುವ ಸ್ಥಳದಲ್ಲಿ ಒಂದು ಹೂವಿನ ತೋಟ ಮಾಡಿ, ಅಲ್ಲಿ ಗೋಪುರ ನಿರ್ಮಿಸಿದ್ದರು. ನಂತರದ ದಿನಗಳಲ್ಲಿ ಅಂದರೆ 1760ರಲ್ಲಿ ಹೈದರಾಲಿ ಆ ಹೂತೋಟವನ್ನು ಲಾಲ್ ಬಾಗ್ ಆಗಿ ಅಭಿವೃದ್ಧಿಪಡಿಸಿದರು. ಇದು 240 ಎಕ್ರೆ ಪ್ರದೇಶದಲ್ಲಿದೆ. ಲಾಲ್ ಬಾಗ್ 265 ವರ್ಷಗಳ ಹಿಂದೆ ನಿರ್ಮಾಣವಾಗಿದೆ ಎಂದರು. ಇದನ್ನೂ ಓದಿ: ಆರ್‌ಸಿಬಿ ಗೆಲ್ಲಲೆಂದು ಚಾಮುಂಡೇಶ್ವರಿಯಲ್ಲಿ ವಿಶೇಷ ಪ್ರಾರ್ಥನೆ ಮಾಡ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್

ಇನ್ನು ಬೆಂಗಳೂರಿನಲ್ಲಿರುವ ಮತ್ತೊಂದು ಬೃಹತ್ ಉದ್ಯಾನವನ ಕಬ್ಬನ್ ಪಾರ್ಕ್. ಅಂದಿನ ಮೈಸೂರು ಸಂಸ್ಥಾನದ ಕಮಿಷನರ್ ಆಗಿದ್ದ ಜಾನ್ ಮೀಡ್ ಅವರು ಮುಖ್ಯ ಎಂಜಿನಿಯರ್ ಆಗಿದ್ದ ರಿಚರ್ಜ್ ಸ್ಯಾಂಕಿ ಅವರಿಂದ 1870ರಲ್ಲಿ ಕಬ್ಬನ್ ಪಾರ್ಕ್ನ ವಿನ್ಯಾಸ ಮಾಡಿಸಿದ್ದರು. 155 ವರ್ಷಗಳ ಹಿಂದೆ ನಿರ್ಮಾವಾಗಿರುವ ಕಬ್ಬನ್ ಪಾರ್ಕ್, 197 ಎಕ್ರೆ ಪ್ರದೇಶದಲ್ಲಿದ್ದು, ಜನಾಕರ್ಷಣೆಯ ತಾಣವಾಗಿದೆ. ಆದಾದ ಬಳಿಕ ಬೆಂಗಳೂರಿನಲ್ಲಿ ಹಲವು ಸಣ್ಣ ಉದ್ಯಾನವನಗಳ ನಿರ್ಮಾಣವಾಗಿದೆ. ಆದರೂ ಬೃಹತ್ ಉದ್ಯಾನವನ ನಿರ್ಮಾಣ ಆಗಿಲ್ಲ ಎಂದು ತಿಳಿಸಿದರು.

ಬಹುತೇಕ ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣದ ಕಲ್ಪನೆ ಸಾಕಾರವಾಗುತ್ತಿದೆ. ಇಂದು ಅಧಿಕೃತವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ಪಡೆಯಲಾಗಿದ್ದು, ನೀಲಗಿರಿ ತೆರವು ಮಾಡಿ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿ, ಮುಂದಿನ 2 ತಿಂಗಳಲ್ಲಿ ಸಿಎಂ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಂದ ಉದ್ಯಾನವನಕ್ಕೆ ಶಂಕುಸ್ಥಾಪನೆ ಮಾಡಿಸಲಾಗುವುದು ಎಂದರು. ಇದನ್ನೂ ಓದಿ: ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ – ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್

ಇಲ್ಲಿಗೆ 4-5 ಕಿ.ಮೀ ದೂರದಲ್ಲಿ ಬಿಡಿಎ ಅಭಿವೃದ್ಧಿಪಡಿಸುತ್ತಿರುವ ಶಿವರಾಮ ಕಾರಂತ ಬಡಾವಣೆಯೂ ಇದೆ. ಇತ್ತ ಸಿಂಗನಾಯಕನಹಳ್ಳಿ ಆರ್.ಟಿ.ಓ ಕಚೇರಿ ಕೂಡಾ ಇದೆ. ಈ ಉದ್ಯಾನವನ ಅಭಿವೃದ್ಧಿ ಆದ ಬಳಿಕ ಇದೊಂದು ಪ್ರೇಕ್ಷಣೀಯ ಸ್ಥಳವಾಗಲಿದೆ ಎಂಬ ಪೂರ್ಣ ವಿಶ್ವಾಸ ನನಗಿದೆ ಎಂದು ಹೇಳಿದರು.

ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಸಿಎಸ್‌ಆರ್ ನಿಧಿ ಬಳಕೆ:
ಈ ಉದ್ಯಾನವನದ ನಿರ್ಮಾಣಕ್ಕೆ ಆರಂಭಿಕವಾಗಿ 20 ಕೋಟಿ ರೂ. ಹಣ ಮಂಜೂರು ಮಾಡಿ ಡಿಪಿಆರ್ ಮತ್ತು ಆರಂಭಿಕ ಕಾಮಗಾರಿ ಆರಂಭಿಸಲಾಗುವುದು. ಜೊತೆಗೆ ಸಾಂಸ್ಥಿಕ ಕಂಪನಿಗಳು ಕೈಜೋಡಿಸಿ ಸಿಎಸ್‌ಆರ್ ನಿಧಿ ನೀಡಿದರೆ, ಮುಂದಿನ 3 ವರ್ಷದೊಳಗೆ ಈ ಉದ್ಯಾನವನ ಪೂರ್ಣಗೊಳಿಸಿ, ಇದೇ ಸರ್ಕಾರದ ಅವಧಿಯಲ್ಲಿ ಉದ್ಘಾಟಿಸುವುದು ತಮ್ಮ ಗುರಿಯಾಗಿದೆ. ಈ ಉದ್ಯಾನವನದ ಸಮೀಪದಲ್ಲೇ ವಿಮಾನ ನಿಲ್ದಾಣವೂ ಇದೆ. ವೈಮಾನಿಕ ಪ್ರದರ್ಶನ ತಾಣವೂ ಇದೆ. ಇಲ್ಲಿ ಉದ್ಯಾನವನ ನಿರ್ಮಾಣ ಮಾಡುವುದರಿಂದ ಪರಿಸರ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ ಲಭಿಸಲಿದೆ ಎಂದರು. ಇದನ್ನೂ ಓದಿ: ಏಕದಿನಕ್ಕೆ ಆಸೀಸ್‌ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ದಿಢೀರ್‌ ನಿವೃತ್ತಿ

ವನ್ಯಜೀವಿ ಸಪ್ತಾಹದ ಸಮಾರೋಪದ ದಿನ ಮಾದಪ್ಪನಹಳ್ಳಿಯ 153.39 ಎಕ್ರೆ ಪ್ರದೇಶದ ಬಗ್ಗೆ ತಿಳಿಸಲಾಯಿತು. ಕೂಡಲೇ ಉತ್ತರ ಬೆಂಗಳೂರಿನಲ್ಲಿ ಲಾಲ್ ಬಾಗ್ ರೀತಿ ಒಂದು ಉದ್ಯಾನ ಮಾಡಬೇಕು ಎಂಬ ಆಲೋಚನೆ ಹೊಳೆಯಿತು. ಕೂಡಲೇ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಾರೋಪ ಸಮಾರಂಭದಲ್ಲೇ ಇದನ್ನು ಪ್ರಕಟಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾ ವಾಯುನೆಲೆ ಮೇಲೆ ಉಕ್ರೇನ್ ಡ್ರೋನ್ ದಾಳಿ – ಅದ್ಭುತ ಕಾರ್ಯಾಚರಣೆ ಎಂದು ಶ್ಲಾಘಿಸಿದ ಝೆಲೆನ್ಸ್ಕಿ

ಇದು ನಮ್ಮ ಕನಸಿನ ಯೋಜನೆಯಾಗಿದ್ದು, ಯಲಹಂಕ ಸುತ್ತಮುತ್ತ ಇರುವ ನೂರಾರು ವಸತಿ ಬಡಾವಣೆಗಳ ಜನರಿಗೆ ಇದು ಉತ್ತಮ ಶ್ವಾಸತಾಣ ಮತ್ತು ಜನಾಕರ್ಷಣೆಯ ಕೇಂದ್ರವೂ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಲಿಮಿಟೆಡ್ ಅಧ್ಯಕ್ಷ ಮನೋಹರ್, ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಸುಭಾಷ್ ಮಾಲ್ಕಡೆ, ಕೆಎಫ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಶಿರೂರ್, ಹಿರಿಯ ಅರಣ್ಯಾಧಿಕಾರಿಗಳಾದ ಸೀಮಾ ಗಾರ್ಗ್, ಶಾಶ್ವತಿ ಮಿಶ್ರಾ, ಕುಮಾರ್ ಪುಷ್ಕರ್, ಶ್ರೀನಿವಾಸ್, ಸಿವಸಂಕರ್, ರವೀಂದ್ರ ಕುಮಾರ್, ಸುರೇಶ್ ಸೇರಿ ಹಲವರು ಉಪಸ್ಥಿತರಿದ್ದರು.

TAGGED:bengaluruBiological Parkeshwar khandreMadappanahalliಈಶ್ವರ್ ಖಂಡ್ರೆಜೈವಿಕ ಉದ್ಯಾನವನಬೆಂಗಳೂರುಮಾದಪ್ಪನಹಳ್ಳಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

firing on lawyers house in belgaum
Belgaum

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Public TV
By Public TV
8 minutes ago
mann ki baat
Dharwad

56gw ದಾಟಿದ ಭಾರತದ ಪವನಶಕ್ತಿ ಉತ್ಪಾದನೆ ಸಾಮರ್ಥ್ಯಕ್ಕೆ ಮೋದಿ ಶ್ಲಾಘನೆ: ಜೋಶಿ

Public TV
By Public TV
30 minutes ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
35 minutes ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
37 minutes ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
40 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
43 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?