ಬೀದರ್: ಮೋದಿ ಯಾರು..? ಮೊನ್ನೆ ಮೊನ್ನೆ ತಾನೆ ಬಂದಿದ್ದಾರೆ. ಹೇಗೆ ಬಂದಿದ್ದಾರೋ ಹಾಗೇ ಎಲ್ಲವನ್ನೂ ಸುತ್ತಿಕೊಂಡ ಮನೆಗೆ ಹೋಗುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವ್ಯಂಗ್ಯವಾಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆ ಸಿದ್ಧತೆ ಉದ್ದೇಶದಿಂದ ನಗರದಲ್ಲಿ ಇಂದು ರಾಜ್ಯ ಮಟ್ಟದ ಅಲ್ಪಸಂಖ್ಯಾತ ವಿಭಾಗದಿಂದ ಸಭೆ ಆಯೋಜಿಸಲಾಗಿತ್ತು. ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಈಶ್ವರ್ ಖಂಡ್ರೆ ಅವರು, ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಅಚಾನಕ್ಕಾಗಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಈ ಬಾರಿ ಅವರು ಆಯ್ಕೆಯಾಗುವ ಸಾಧ್ಯತೆಗಳೇ ಇಲ್ಲ ಎಂದರು.
ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿಯ ಟೈಪಿಸ್ಟ್ ಬಳಿ ಲಕ್ಷಾಂತರ ಹಣ ಪತ್ತೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತು ತನಿಖೆ ನಡೆಯುತ್ತಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ. ಆದರೆ ಈ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲ. ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುವುದು ಸರಿಯಲ್ಲ ಎಂದು ಗುಡುಗಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv