ಬೀದರ್: ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು (Bidar) ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್ (Congress) ಶಾಸಕರಿಗೆ ಬಿಜೆಪಿ 100 ಕೋಟಿ ರೂ. ಆಫರ್ ವಿಚಾರವಾಗಿ ಮಾತನಾಡಿದ ಅವರು, ಅಧಿಕಾರದ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಬಿಜೆಪಿಯವರು. ಯಾವ ಮಟ್ಟಕ್ಕೂ ಇಳಿಯಲು ತಯಾರಾಗಿರುತ್ತಾರೆ. ಈ ರಾಜ್ಯದ ಜನರಿಗೆ ಬಿಜೆಪಿ (BJP) ನಾಯಕರು ಉತ್ತರ ನೀಡಲಿ. 15 ಜನ ಶಾಸಕರನ್ನು ಖರೀದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಸಿಎಂ ಆಗಲು 2500 ಕೋಟಿ ರೂ. ಕೊಡಬೇಕು ಎಂದು ಸ್ವತಃ ಯತ್ನಾಳ್ ಹೇಳಿದ್ದರು. ಇನ್ನೂ ಸಚಿವರಾಗಲು 500 ಕೋಟಿ ಕೊಡಬೇಕು ಎಂದು ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್‌ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ? ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ವೇದಘೋಷಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ
Advertisement
Advertisement
ಬಿಜೆಪಿ ಕಾರ್ಡ್ ರದ್ದು ವಿಚಾರ:
ಬಿಜೆಪಿ ಕಾರ್ಡ್ ರದ್ದು ವಿಚಾರವಾಗಿ ಬಹಳಷ್ಟು ದೂರುಗಳಿವೆ. ಸಾಹುಕಾರರು, ಮನೆ ಇದ್ದವರು, ಸರ್ಕಾರಿ ನೌಕರರು, ಟ್ಯಾಕ್ಸ್ ಕಟ್ಟುವವರು ಬಿಪಿಎಲ್ ಕಾರ್ಡ್ ತೆಗೆದುಕೊಂಡಿದ್ದಾರೆ. ಬಡತನ ರೇಖೆಗಿಂತ ಕೆಳಗಿದ್ದವರಿಗೆ ಬಿಜೆಪಿ ಕೊಡಬೇಕು ಎಂಬ ನಿಯಮವಿದೆ. ಒಂದೊಂದು ಜಿಲ್ಲೆಯಲ್ಲಿ ಶೇ.95 ರಷ್ಟು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ನೈಜವಾಗಿ ಯಾರು ಬಡತನದಲ್ಲಿ ಇದ್ದು, ಬಿಪಿಎಲ್ ಕಾರ್ಡ್ ಪಡೆದಿದ್ದರೆ ಅವರಿಗೆ ಯಾವುದೇ ವಂಚನೆಯಗುವುದಿಲ್ಲ ಎಂದರು.
Advertisement
ವರಿಷ್ಠರ ತೀರ್ಮಾನ
ಕೇಂದ್ರ ಸಚಿವ ಹೆಚ್‌ಡಿಕೆಗೆ ಸಚಿವ ಜಮೀರ್ ಖಾನ್ ಕರಿಯಾ ಎಂಬ ಪದ ಬಳಕೆ ಪಕ್ಷಕ್ಕೆ ಡ್ಯಾಮೇಜ್ ಆಗಿದೀಯಾ ಎನ್ನುವ ವಿಚಾರವಾಗಿ ಈಗಾಗಲೇ ಸಿಎಂ, ಡಿಸಿಎಂ ಹಾಗೂ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ನಮ್ಮ ಪಕ್ಷದಲ್ಲಿ ಒಂದು ವ್ಯವಸ್ಥೆ ಇದೆ. ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾ? ಶಿಸ್ತು ಪಾಲನಾ ಸಮಿತಿಗೆ ನೀಡಬೇಕಾ ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
Advertisement
ಬಿಜೆಪಿ ಅವಧಿಯಲ್ಲೇ ನೋಟಿಸ್
ಬಿಜೆಪಿಯಲ್ಲಿ ಒಂದು ಮನೆ ನೂರು ಬಾಗಿಲು ಆಗಿವೆ. ಪಶ್ಚಾತ್ತಾಪ ಮಾಡಿಕೊಳ್ಳಲು ಬಿಜೆಪಿಯವರು ಪಾದಯಾತ್ರೆ ಮಾಡಲಿ. ವಕ್ಫ್ ವಿವಾದ ಹುಟ್ಟು ಹಾಕಿದ್ದು, ಮೊದಲು ನೋಟಿಸ್ ನೀಡಿದ್ದು ಬಿಜೆಪಿಯವರು. ಅಪರಾಧ ಮಾಡುವವರು, ದೂರು ನೀಡುವವರು, ವಿಚಾರಣೆ ಮಾಡುವವರು, ತೀರ್ಪು ನೀಡುವವರು ಎಲ್ಲವೂ ಬಿಜೆಪಿಯವರೇ. ಇದನ್ನೂ ಜನ ಅರ್ಥ ಮಾಡಿಕೊಳ್ಳುತ್ತಾರೆ. ಬಿಜೆಪಿ ಮುಗಿದ ಅಧ್ಯಾಯ, ಚರ್ಚೆ ಮಾಡಿ ಸಮಯ ಹಾಳು ಮಾಡಲಿ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: ಆಪ್‌ಗೆ ರಾಜೀನಾಮೆ ನೀಡಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿಗೆ ಸೇರ್ಪಡೆ