– ಕೋವಿಡ್ ವೇಳೆ 2000 ಇಂಜೆಕ್ಷನ್ 30,000ಕ್ಕೆ ಕಾಳ ಸಂತೆಯಲ್ಲಿ ಮಾರಾಟ; ಸಚಿವರ ಆರೋಪ
ಹುಬ್ಬಳ್ಳಿ: ಬಿಜೆಪಿ (BJP) ಭಾರತೀಯ ಜನತಾ ಪಾರ್ಟಿ ಅಲ್ಲಾ, ಭಾರತೀಯ ಜೂಟಾ ಪಾರ್ಟಿ ಎಂದು ಸಚಿವ ಈಶ್ವರ ಖಂಡ್ರೆ (Eshwar Khandre) ವಾಗ್ದಾಳಿ ನಡೆಸಿದ್ದಾರೆ.
Advertisement
ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್‌ನಲ್ಲಿ ಮೃತ ಪಟ್ಟ ಕುಟುಂಬಸ್ಥರ ಶಾಪ ಬಿಜೆಪಿಗೆ ತಟ್ಟುತ್ತದೆ. ಕೇಂದ್ರ ಬಿಜೆಪಿ ಸರ್ಕಾರ ಸರ್ವಾಧಿಕಾರಿ. ಸಿಬಿಐ, ಐಟಿ, ಚುನಾವಣೆ ಆಯೋಗ ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದೆ. ಈಗ ನ್ಯಾಯಾಂಗದಲ್ಲೂ ಹಸ್ತಕ್ಷೇಪ ಮಾಡುವುದಕ್ಕೆ ಹೊರಟಿದ್ದಾರೆ. ಬಿಜೆಪಿಯ ಹಿಟ್ಲರ್ ಶಾಹಿ ಮುಂದೆ ನಡೆಯುವುದಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಉಡುಪಿ| ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು
Advertisement
Advertisement
ಕೋವಿಡ್ ಹಗರಣ ತನಿಖೆ ವಿಚಾರ ಬಗ್ಗೆ ಮಾತನಾಡಿ, ಕೋವಿಡ್‌ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. 2000 ಇಂಜೆಕ್ಷನ್ 30 ಸಾವಿರಕ್ಕೆ ಕಾಳ ಸಂತೆಯಲ್ಲಿ ಮಾರಾಟ ಆಗಿದೆ. ಯಾರ ಕಾಲದಲ್ಲಿ ಇದೆಲ್ಲಾ ಆಗಿದ್ದು ಎಂದು ನಿಮಗೆಲ್ಲಾ ಗೊತ್ತಿದೆ. ಇವರ ದುರಾಡಳಿತದಿಂದ ಸಾವಿರಾರು ಜನ ಮೃತಪಟ್ಟಿದ್ದಾರೆ. ಜನರ ಶಾಪ ಬಿಜೆಪಿಯವರಿಗೆ ತಟ್ಟುತ್ತದೆ ಎಂದರು. ಇದನ್ನೂ ಓದಿ: ಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಯೋಗೇಶ್ವರ್ ಗೆಲುವಿಗೆ ಪತ್ನಿಯಿಂದ ಹೋಮ
Advertisement
ಮೋದಿ, ಅಮಿತ್ ಶಾ, ಬಿಜೆಪಿ ವಿರುದ್ಧ ಮಾತನಾಡಿದವರನ್ನು ಜೈಲಿಗೆ ಹಾಕಿದ್ದನ್ನು ನೋಡಿದ್ದೇವೆ. ಕಾಂಗ್ರೆಸ್ ಆ ರೀತಿ ಮಾಡುವುದಿಲ್ಲ, ಮಾಡಿದರೆ ಪ್ರಜಾಪ್ರಭುತ್ವ ಉಳಿಯುತ್ತಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಈ ವಾರ ಎಲಿಮಿನೇಟ್ ಆಗೋದು ಯಾರು?: ದೊಡ್ಮನೆಯಲ್ಲಿ ಬಿಗ್ ಟ್ವಿಸ್ಟ್
ಯಡಿಯೂರಪ್ಪ (B S Yediyurappa) ಕೊಲೆ ಪ್ರಯತ್ನ ಚರ್ಚೆ ವಿಚಾರವಾಗಿ ಮಾತನಾಡಿ, ಯಡಿಯೂರಪ್ಪ ನಮ್ಮ ರಾಜ್ಯದ ಅತ್ಯಂತ ಹಿರಿಯ ಮುಖಂಡರು. ಕಾಂಗ್ರೆಸ್ (Congress) ಆಗಲಿ, ಅವರನ್ನ ಕೊಲೆ ಮಾಡುವ ಪ್ರಶ್ನೆಯೇ ಉದ್ಭವ ಆಗಲ್ಲ. ಸುಳ್ಳೇ ಸತ್ಯ ಎಂಬ ರೀತಿಯಲ್ಲಿ ಬಿಂಬಿಸುತ್ತಾರೆ. ರಾಜ್ಯದ ಮೂರು ಉಪಚುನಾವಣೆಯಲ್ಲಿ ಭಾರಿ ಅಂತರದಿಂದ ಕಾಂಗ್ರೆಸ್ ಗೆಲುವು ಸಾಧಿಸುತ್ತಾರೆ. ಶಿಗ್ಗಾಂವಿಯಲ್ಲಿ 4 ಬಾರಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೂ ಅಭಿವೃದ್ಧಿ ಆಗಲಿಲ್ಲ. ಬೊಮ್ಮಾಯಿ ಮುಖ್ಯಮಂತ್ರಿ ಆದಾಗಲೂ ಅಭಿವೃದ್ಧಿ ಆಗಲಿಲ್ಲ. ಕ್ರೀಡಾಂಗಣ ನಿರ್ಮಾಣ ಮಾಡುವುದಕ್ಕೆ ಆಗಗಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಅಂದಿದ್ದರು. ಗ್ಯಾಸ್, ಸಿಲೆಂಡರ್, ಸಬ್ಸಿಡಿ ಎಂದು ಹೇಳಿ ಮತ ಪಡೆದಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹಿಂದೂಗಳ ಮೇಲೆ ದಾಳಿ – ಕೆನಡಾ ರಾಯಭಾರ ಕಚೇರಿ ಎದುರು ಹಿಂದೂ ಸಿಖ್ ಗ್ಲೋಬಲ್ ಫೋರಂ ಪ್ರತಿಭಟನೆ