ಬೆಂಗಳೂರು: ಬಿಜೆಪಿಯವರು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ನವರು ದೇಶಕ್ಕಾಗಿ ಬಲಿದಾನ ಕೊಟ್ಟವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಯೂಥ್ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ಅವರಿಗೆ ಪ್ರಧಾನಿಯಾಗುವ ಅವಕಾಶ ಇದ್ದರೂ, ದೇಶಕ್ಕಾಗಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಆಧುನಿಕ ಭಾರತ ನಿರ್ಮಾಣ ಮಾಡಿದ ಶ್ರೇಯಸ್ಸು ಕಾಂಗ್ರೆಸ್ಸಿಗೆ ಸಲ್ಲುತ್ತದೆ. ಯುವಕರನ್ನು ದಾರಿ ತಪ್ಪಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಇತಿಹಾಸ ತಿಳಿಸುವ ಕೆಲಸ ನಮ್ಮ ಕಾರ್ಯಕರ್ತರು ಮಾಡಬೇಕು. ಬಿಜೆಪಿಯವರು ಸುಳ್ಳು ಹೇಳುವುದನ್ನು ಬಿಟ್ಟು ಇನ್ನೇನು ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ದೇಶದಲ್ಲಿ ಹಸಿರು ಕ್ರಾಂತಿ ತಂದಿದ್ದು ಕಾಂಗ್ರೆಸ್, ಸ್ಮಾರ್ಟ್ ಫೋನ್ ಯುಗ ಪ್ರಾರಂಭವಾಗಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ. ನೆರೆ ಸಂತ್ರಸ್ತರ ನೋವಿಗೆ ಪ್ರಧಾನಿ ಮೋದಿ ಸ್ಪಂದನೆ ಮಾಡಿಲ್ಲ. 18 ವರ್ಷದ ಯುವಕರಿಗೆ ಮತದಾನ ಹಕ್ಕು ಕೊಟ್ಟಿದ್ದು ರಾಜೀವ್ ಗಾಂಧಿ. ಆಹಾರ ಭದ್ರತೆ ದೇಶದಲ್ಲಿ ತಂದಿದ್ದು ಕಾಂಗ್ರೆಸ್. ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಅಪಾರ. ಬಿಜೆಪಿಯವರು ಏನು ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.
Advertisement
ಕಾಶ್ಮೀರ ಭಾರತಕ್ಕೆ ಸೇರಿಸುತ್ತಿದ್ದೇವೆ ಎನ್ನುತ್ತಾರೆ. ಅದು ಸುಳ್ಳು ಸ್ವಾತಂತ್ರ್ಯದಿಂದಲೂ ಕಾಶ್ಮೀರ ಭಾರತದಲ್ಲೇ ಇದೆ. ಈ ವಿಚಾರದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ. ನೆರೆಯಿಂದ ಜನರ ಬದುಕು ಹಾಳಾಗಿದೆ. ಸರ್ಕಾರ ಯಾವುದೇ ಸಹಾಯ ಮಾಡಿಲ್ಲ. ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಿಲ್ಲ. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಕೇಂದ್ರದ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದರ ವಿರುದ್ಧ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದರು.
Advertisement
ಬಿಜೆಪಿ ಸೇರುವಂತೆ ಸಂಸ್ಥೆಗಳನ್ನು ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ. ಮೋದಿಯವರದ್ದು ಸರ್ವಾಧಿಕಾರಿ ಧೋರಣೆ. ಅಚ್ಛೇ ದಿನ ಬಂದಿಲ್ಲ. ರೈತರ ವಿರೋಧಿ, ಯುವಕ ವಿರೋಧಿ ಮೋದಿ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.