Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾಯಿ & ನಾಲ್ಕು ಮರಿ ಹುಲಿಗಳ ಸಂಚಾರದ ಬಗ್ಗೆ ಸತತ ನಿಗಾಕ್ಕೆ ಈಶ್ವರ ಖಂಡ್ರೆ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಾಯಿ & ನಾಲ್ಕು ಮರಿ ಹುಲಿಗಳ ಸಂಚಾರದ ಬಗ್ಗೆ ಸತತ ನಿಗಾಕ್ಕೆ ಈಶ್ವರ ಖಂಡ್ರೆ ಆದೇಶ

Bengaluru City

ತಾಯಿ & ನಾಲ್ಕು ಮರಿ ಹುಲಿಗಳ ಸಂಚಾರದ ಬಗ್ಗೆ ಸತತ ನಿಗಾಕ್ಕೆ ಈಶ್ವರ ಖಂಡ್ರೆ ಆದೇಶ

Public TV
Last updated: December 23, 2025 7:23 pm
Public TV
Share
3 Min Read
Eshwara Khandre 1
SHARE

– ಜನರ ಜೀವದ ಸುರಕ್ಷತೆ ಪರಮೋಚ್ಚ, ವನ್ಯಜೀವಿಗಳ ರಕ್ಷಣೆಯೂ ಅಷ್ಟೇ ಮುಖ್ಯ: ಅರಣ್ಯ ಸಚಿವ

ಬೆಂಗಳೂರು: ಚಾಮರಾನಗರದ ನಂಜೆದೇವಪುರದಲ್ಲಿ ಕಾಣಿಸಿಕೊಂಡಿರುವ 5 ಹುಲಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಮೊದಲಿಗೆ ಬೋನುಗಳನ್ನು ಅಳವಡಿಸಲು ಮತ್ತು ಅಗತ್ಯ ಬಿದ್ದರೆ ಅರವಳಿಕೆ ನೀಡಿ ಸೆರೆ ಹಿಡಿಯಲು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ (Eshwara Khandre) ಸೂಚನೆ ನೀಡಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಅವರು, ಹುಲಿಗಳು ಖಾಸಗಿ ಜಮೀನಿನಲ್ಲಿ ಕಾಣಿಸಿಕೊಂಡಿರುವ ಕಾರಣ ಜನರು ಭಯಭೀತರಾಗಿದ್ದು, ಅಮೂಲ್ಯವಾದ ಜೀವಹಾನಿ ಆಗದ ರೀತಿಯಲ್ಲಿ ಮತ್ತು ವನ್ಯಜೀವಿಗಳಿಗೂ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಇದನ್ನೂ ಓದಿ: ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತ ಲಾಕ್ – 3 ಗಂಟೆ ಒದ್ದಾಟದ ಬಳಿಕ ಸ್ಥಳೀಯರಿಂದ ರಕ್ಷಣೆ

ಹುಲಿಗಳ ಚಲನವಲನದ ಮೇಲೆ ಸತತ ನಿಗಾ ಇಡುವುದು ಅತ್ಯಗತ್ಯವಾಗಿದ್ದು, ಡ್ರೋನ್ ಕ್ಯಾಮೆರಾಗಳು, ಥರ್ಮಲ್ ಕ್ಯಾಮೆರಾಗಳನ್ನು ಬಳಸಿ ಹುಲಿಗಳು ಎಲ್ಲಿವೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದು ಗ್ರಾಮಗಳಿಗೆ ಬಂದರೆ ಗ್ರಾಮಸ್ಥರಿಗೆ ಕೂಡಲೇ ಮಾಹಿತಿ ನೀಡಬೇಕು. ಅಲ್ಲಿಗೆ ಅರಣ್ಯ ಇಲಾಖೆಯ ತಂಡಗಳನ್ನು ಕಳುಹಿಸಿ ಯಾವುದೇ ಅನಾಹುತ ಆಗದಂತೆ ಕ್ರಮ ವಹಿಸಬೇಕು ಎಂದರು.

eshwara khandre meeting

5 ಹುಲಿಗಳ ಕಾರ್ಯಾಚರಣೆ ಸುಲಭದ ಕಾಯಕವಲ್ಲ ಎಂಬುದು ತಮಗೂ ಅರಿವಿದೆ. ಹುಲಿಗಳನ್ನು ಹಿಡಿಯುವಾಗ ಹುಲಿಗಳು ಕಾರ್ಯಾಚರಣೆ ತಂಡದ ಮೇಲೆ ದಾಳಿ ಮಾಡದಂತೆ ಮತ್ತು ಬಡಗಲಪುರದಲ್ಲಿ ಹುಲಿ ರಕ್ಷಣೆ ಕಾರ್ಯಾಚರಣೆ ವೇಳೆ ವ್ಯಕ್ತಿಯ ಮೇಲೆ ದಾಳಿ ಆದಂತಹ ಪ್ರಕರಣಗಳು ಮರುಕಳಿಸದಂತೆ ಹಿರಿಯ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ತಿಳಿಸಿದರು.

ಹೆಚ್ಚುವರಿ ಆನೆ, ಪಶುವೈದ್ಯರ ನಿಯೋಜನೆಗೂ ಸೂಚನೆ
5 ಹುಲಿಗಳ ರಕ್ಷಣೆ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲ ಸಲಕರಣೆ, ಹೆಚ್ಚುವರಿ ಪಶುವೈದ್ಯರು, ಶಾರ್ಪ್ ಶೂಟರ್‌ಗಳನ್ನು ಸಹ ನಿಯೋಜನೆ ಮಾಡುವಂತೆ ಹಾಗೂ ಹೆಚ್ಚುವರಿಯಾಗಿ ಆನೆಗಳನ್ನು ತಕ್ಷಣವೇ ತರಿಸಿಕೊಳ್ಳುವಂತೆಯೂ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟವಾಗಿ ತಿಳಿಸಿದರು. ಇದನ್ನೂ ಓದಿ: ಚಾಮರಾಜನಗರಲ್ಲಿ 5 ಹುಲಿಗಳು ಪ್ರತ್ಯಕ್ಷ ಪ್ರಕರಣ – ನಿಷೇಧಾಜ್ಞೆ ಜಾರಿ, ಜನರಲ್ಲಿ ಭೀತಿ

ಜನರ ಜೀವ ಪರಮೋಚ್ಚ
ಜನರ ಜೀವದ ಸುರಕ್ಷತೆ ಅತ್ಯಂತ ಪರಮೋಚ್ಚವಾದ್ದು, ಅದೇ ವೇಳೆ ವನ್ಯಜೀವಿಗಳ ರಕ್ಷಣೆಯೂ ಅಷ್ಟೇ ಮುಖ್ಯ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಾಚರಣೆ ನಡೆಸಬೇಕು. ಸಿಬ್ಬಂದಿಯ ಸುರಕ್ಷತೆಗೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಜೊತೆಗೆ ಜನರು ಯಾರೂ ಕಾರ್ಯಾಚರಣೆ ಸ್ಥಳಕ್ಕೆ ಬಾರದಂತೆ ಸೆಕ್ಷನ್ 144 ನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಿದರು. ಇ-ಗಸ್ತು ಹೆಚ್ಚಿಸಬೇಕು. ಎಲ್ಲ ಅರಣ್ಯ ಗಸ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಮೊಬೈಲ್‌ನಲ್ಲಿ ಈ ಆಪ್ ಅಳವಡಿಸಿ, ಗಸ್ತಿನ ಮೇಲೆ ಕೇಂದ್ರ ಕಚೇರಿಯಿಂದ ನಿಗಾ ಇಡಬೇಕು. ಗಸ್ತಿನಲ್ಲಿ ಯಾವುದೇ ಲೋಪ ಆಗದಂತೆ ಪೂರ್ಣ ಪ್ರಮಾಣದಲ್ಲಿ ಎಚ್ಚರಿಕೆ ವಹಿಸಬೇಕು ಹಾಗೂ ಕಮಾಂಡ್ ಕೇಂದ್ರಗಳನ್ನು ವಿಳಂಬವಿಲ್ಲದೆ ಎಲ್ಲೆಡೆ ಕಾರ್ಯಾರಂಭ ಮಾಡಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗ ನಾವು ಕೈಗೊಳ್ಳುತ್ತಿರುವುದೆಲ್ಲವೂ ತಾತ್ಕಾಲಿಕ ಕ್ರಮಗಳಾಗಿದ್ದು, ವನ್ಯಜೀವಿಗಳು ಕಾಡಿನಿಂದ ನಾಡಿನತ್ತ ಬಾರದಂತೆ ಶಾಶ್ವತ ಪರಿಹಾರ ಏನು ಎಂಬ ಬಗ್ಗೆ ಅಧಿಕಾರಿಗಳು ತಜ್ಞರೊಂದಿಗೆ ಚರ್ಚಿಸಿ ರೂಪುರೇಶೆ ತಯಾರಿಸಿ ವರದಿ ಸಲ್ಲಿಸಲು ಸೂಚಿಸಿದರು. ತುರುವೇಕೆರೆಯಲ್ಲಿ ಮಹಿಳೆಯ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆ, ಮಹಿಳೆಯ ದೇಹದ ಮಾಂಸ ಭಕ್ಷಣೆ ಮಾಡಿರುವ ಕಾರಣ ಅದನ್ನು ಸೆರೆ ಹಿಡಿದು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಿಗೆ ಮಾಹಿತಿ ನೀಡಲಾಯಿತು. ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಹಿರಿಯ ಅಧಿಕಾರಿಗಳಾದ ಮನೋರ್ ರಾಜನ್, ಬಿಸ್ವಜಿತ್ ಮಿಶ್ರಾ ಮತ್ತು ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಮತ್ತಿತರರು ಪಾಲ್ಗೊಂಡಿದ್ದರು.

TAGGED:bengaluruChamarajanagaraEshwara Khandretigerಈಶ್ವರ ಖಂಡ್ರೆಚಾಮರಾಜನಗರಬೆಂಗಳೂರುಹುಲಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Vishwakarma Mahasamsthana Mutt 2
Bengaluru City

ವಿಶ್ವಕರ್ಮ ಮಹಾಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ, ಶಿಷ್ಯ ಸ್ವೀಕಾರ ಸಮಾರಂಭ

Public TV
By Public TV
17 minutes ago
Ramanagar Robbery
Districts

ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ – ಖದೀಮರು ಎಸ್ಕೇಪ್

Public TV
By Public TV
33 minutes ago
Madikeri Accident 2
Crime

ಮಡಿಕೇರಿ | 20 ಅಡಿ ಆಳದ ಗದ್ದೆಗೆ ಉರುಳಿದ ಕಾರು; ತಾಯಿ – ಮಗ ಸೇಫ್‌

Public TV
By Public TV
34 minutes ago
Assam Gang Rape
Crime

ಗೆಳೆಯನ ಮುಂದೆಯೇ 28 ರ ಮಹಿಳೆ ಮೇಲೆ 7 ಕಾಮುಕರಿಂದ ಗ್ಯಾಂಗ್‌ ರೇಪ್‌ – 10 ಸಾವಿರ ಕಸಿದು ಎಸ್ಕೇಪ್‌

Public TV
By Public TV
46 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-02-2026

Public TV
By Public TV
2 hours ago
Harry Brook
Cricket

ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?