ಬೀದರ್: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದಂತೆ, ವಿವಾದಾತ್ಮಕ ಹೇಳಿಕೆ ನೀಡಿರುವ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದರು.
ಭಾಲ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿ ರಾತ್ರಿ ಹೊತ್ತಿನಲ್ಲಿ ಅಲ್ಲಿಗೆ ಯಾಕೆ ಹೊಗಬೇಕಿತ್ತು ಎಂದು ಗೃಹ ಸಚಿವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರು ಗೃಹ ಸಚಿವ ಸ್ಥಾನಕ್ಕೆ ಅರ್ಹರಿದ್ದಾರಾ ಎಂದು ಸಿಎಂ ಆಲೋಚನೆ ಮಾಡಬೇಕು. ಈ ರೀತಿ ಹೇಳಿಕೆ ನೀಡೋದು ಒಂದು ಅಪರಾಧವಾಗಿದ್ದು, ಅವರು ಸಚಿವ ಸ್ಥಾನದಲ್ಲಿ ಇರಲು ಯೋಗ್ಯರಲ್ಲ ಎಂದು ಕಿಡಿ ಕಾರಿದರು. ಇದನ್ನೂ ಓದಿ: ನೀಚ ಕೃತ್ಯ ಮಾಡುವವರಿಗೆ ಪೊಲೀಸರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ: ಅರಗ ಜ್ಞಾನೇಂದ್ರ
ಗೃಹ ಸಚಿವರು ಇಂಥ ಹೇಳಿಕೆ ಕೊಟ್ಟಿದ್ದು ಅತ್ಯಂತ ಆಘಾತಕಾರಿಯಾಗಿದ್ದು, ನಾಗರಿಕ ಸಮಾಜ ಒಪ್ಪುವಂತಹದ್ದಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಖಂಡ್ರೆ ತೀವ್ರ ವಾಗ್ದಾಳಿ ನಡೆಸಿದರು.