ಕಲಬುರಗಿ: ಜನ ವಿರೋಧಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ಕರೆದಿದ್ದರೂ, ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ಜನರಿಗೆ ಮಾರಕವಾದ ವಿಧೇಯಕ (ಮತಾಂತರ ನಿಷೇಧ ಮಸೂದೆ) ತಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.
- Advertisement -
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ಉದ್ದೇಶದಿಂದಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಏರ್ಪಡಿಸಲಾಗಿತ್ತು. ಆದರೆ ಜನ ವಿರೋಧಿ ಬಿಜೆಪಿ ಸರ್ಕಾರವು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚೆಗೆ ಅವಕಾಶ ನೀಡಲಿಲ್ಲ. ಅಧಿವೇಶನ ವಿಸ್ತರಣೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದರೂ ಯಾವುದೇ ನಿರ್ಧಾರ ತಿಳಿಸಿಲ್ಲ. ಸರ್ಕಾರದ ವೈಫಲ್ಯಗಳನ್ನು ಮರೆಮಾಚಿ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆದಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸದಸ್ಯರ ವರ್ತನೆಯಿಂದ ರಾಜೀನಾಮೆಗೆ ಮುಂದಾಗಿದ್ದೆ: ಹೊರಟ್ಟಿ ಬೇಸರ
- Advertisement -
ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿ, ಬಿಜೆಪಿಯಲ್ಲಿ ಅಸ್ಥಿರತೆ ಇದೆ. ಅಲ್ಲಿ ಬಹಳಷ್ಟು ಅತೃಪ್ತಿ ಇದೆ. ಮುಖ್ಯಮಂತ್ರಿ ಬದಲಾವಣೆ ಆಗೋದು ಬಿಡೋದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಬಿಜೆಪಿ ಸರ್ಕಾರ ಇದ್ದೂ ಇಲ್ಲದಂತಿದೆ. ಆಡಳಿತ ವೈಫಲ್ಯವಾದ ಮೇಲೆ ಇಂತಹ ಸರ್ಕಾರ ಇದ್ದರೆಷ್ಟು ಬಿಟ್ಟರೆಷ್ಟು. ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಜೆಪಿಯವರ ತೀರ್ಮಾನ ಎಂದು ಮಾತನಾಡಿದ್ದಾರೆ.
- Advertisement -
- Advertisement -
ಎಂಇಎಸ್ ಗಲಭೆ ಕುರಿತು ಪ್ರತಿಕ್ರಿಯಿಸಿ, ಗಡಿ ಸಮಸ್ಯೆ ಮುಗಿದು ಹೋಗಿರುವ ವಿಚಾರ. ಇದರಲ್ಲಿ ಎಂಇಎಸ್ ಕೂಡ ಪುಂಡಾಟಿಕೆ ಮಾಡಬಾರದು. ನಮ್ಮ ಭಾಷೆ, ನಾಡು-ನುಡಿ ರಕ್ಷಣೆ ಮಾಡುವುದಕ್ಕೆ ನಾವು ಬದ್ಧರಾಗಿದ್ದೇವೆ. ಎಂಇಎಸ್ ಪುಂಡಾಟಿಕೆ ಇಲ್ಲಿ ನಡೆಯುವುದಿಲ್ಲ. ಪುಂಡಾಟಿಕೆ ಮಾಡಿದರೆ ಮುಂದೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಕಾನೂನು ಹೋರಾಟಕ್ಕೆ SDPI ನಿರ್ಧಾರ