ಚಿಕ್ಕೋಡಿ: ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಅರಣ್ಯ ಸಚಿವ ದಿವಂಗತ ಉಮೇಶ್ ಕತ್ತಿ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ದಿ. ಉಮೇಶ್ ಕತ್ತಿ ನಿವಾಸಕ್ಕೆ ಭೇಟಿ ನೀಡಿದ ಅವರು, ಸಹೋದರ ರಮೇಶ್ ಕತ್ತಿ ಅವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಉಮೇಶ್ ಕತ್ತಿ ಜೊತೆಗಿನ ಒಡನಾಟ ಹಾಗೂ ಅವರ ನೇರ ವ್ಯಕ್ತಿತ್ವದ ಕುರಿತು ನೆನಪಿಸಿಕೊಂಡರು. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಬರಲ್ಲ: ಎಸ್.ಟಿ.ಸೋಮಶೇಖರ್
ಉಮೇಶ್ ಕತ್ತಿ ಒಬ್ಬ ಸರಳ ವ್ಯಕ್ತಿತ್ವದ ಮನುಷ್ಯ. ಅಧಿಕಾರದಲ್ಲಿ ಇರಲಿ ಅಥವಾ ಇಲ್ಲದಿರಲಿ ಅವರು ಯಾವತ್ತೂ ಬದಲಾಗಲಿಲ್ಲ. ಎಲ್ಲರ ಜೊತೆಗೆ ಸ್ನೇಹದಿಂದ ಇರುತ್ತಿದ್ದರು. ಯಾವುದೇ ಸಂಕಷ್ಟದ ಪರಿಸ್ಥಿತಿ ಬಂದರೂ, ಹಾಸ್ಯದ ಮೂಲಕ ಅದನ್ನು ತಿಳಿಗೊಳಿಸುವ ಶಕ್ತಿ ಇವರಿಗಿತ್ತು. ಉತ್ತರ ಕರ್ನಾಟಕದ ಗಟ್ಟಿ ಧ್ವನಿ ನಮ್ಮೆಲ್ಲರನ್ನು ಬಿಟ್ಟು ಹೋಗಿದ್ದು ನೋವಿನ ಸಂಗತಿ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ಥಗಿತಗೊಳಿಸಿದ ಟೋಯಿಂಗ್ ವ್ಯವಸ್ಥೆ ಪುನಃ ಜಾರಿ ಇಲ್ಲ: ಆರಗ ಜ್ಞಾನೇಂದ್ರ
ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ, ಆನಂದ ನ್ಯಾಮಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.