ಜಾತಿ ಕಾರಣಕ್ಕೆ ನಮ್ಮನ್ನ ಚನ್ನಕೇಶವ ದೇಗುಲದ ಗರ್ಭಗುಡಿಗೆ ಬಿಟ್ಟಿರಲಿಲ್ಲ – ಕನಕ ಪೀಠದ ಈಶ್ವರಾನಂದಪುರಿ ಶ್ರೀ ಬೇಸರ

Public TV
1 Min Read
Eshwarananda Puri Swamiji 2

ಚಿತ್ರದುರ್ಗ: ಬಾಗೂರು ಗ್ರಾಮದ ಚನ್ನಕೇಶವ ದೇಗುಲಕ್ಕೆ ಭೇಟಿ ನೀಡಿದಾಗ ಜಾತಿ ಕಾರಣಕ್ಕೆ ನಮ್ಮನ್ನ ದೇವಸ್ಥಾನದ ಗರ್ಭಗುಡಿಯ ಒಳಗೆ ಬಿಟ್ಟಿರಲಿಲ್ಲ ಎಂದು ಕನಕ ಪೀಠದ ಈಶ್ವರಾನಂದಪುರಿ ಶ್ರೀಗಳು (Eshwarananda Puri Swamiji) ಬೇಸರ ಹೊರಹಾಕಿದ್ದಾರೆ.

ಚಿತ್ರದುರ್ಗ (Chitradurga) ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಗ್ರಾಮದಲ್ಲಿ ನಡೆದ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ʻಪರಿವರ್ತನೆಯ ಹಾದಿಯಲ್ಲಿ ಮಠಗಳುʼ ವಿಚಾರ ಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಬಿಜೆಪಿಯಿಂದ ಕೋಟಿ ಕೋಟಿ ಆಫರ್‌ – ಆರೋಪ ಮಾಡಿದ್ದ ಕೇಜ್ರಿವಾಲ್‌ಗೆ ಕಂಟಕ – ದೆಹಲಿ ಕ್ರೈಂಬ್ರ್ಯಾಂಚ್‌ ನೋಟಿಸ್‌

ಈ ಹಿಂದೆ ಬಾಗೂರು ಗ್ರಾಮದ ಚನ್ನಕೇಶವ ದೇಗುಲಕ್ಕೆ (Channakesava Temple) ಭೇಟಿ ನೀಡಿದಾಗ ನಮ್ಮನ್ನ ದೇವಸ್ಥಾನದ ಗರ್ಭಗುಡಿಗೆ ಬಿಟ್ಟಿರಲಿಲ್ಲ. ನಾವು ದೇಗುಲಕ್ಕೆ ಹೋಗಿ ಬಂದ ಮೇಲೆ ಕುರುಬರ ಸ್ವಾಮೀಜಿ ಒಳಗೆ ಬಂದರೆಂದು ದೇಗುಲವನ್ನೇ ಸ್ವಚ್ಛಗೊಳಿಸಿದ್ದರು. ಇದರಿಂದ ಅಲ್ಲಿನವರು ನಾವು ಹೋಗಿದ್ದಕ್ಕೆ ಸ್ವಚ್ಛವಾಯಿತು ಎಂದು ವ್ಯಂಗ್ಯವಾಡಿದ್ದರು. ಹಾಗಾಗಿ ನಾವು ಚನ್ನಕೇಶವ ದೇಗುಲಕ್ಕೆ ನಾವು ಹೋಗಲ್ಲ ಎಂದು ನಿರ್ಧಾರ ತೆಗೆದುಕೊಂಡೆವು ಎಂದು ಕಹಿ ಅನುಭವ ಹಂಚಿಕೊಂಡಿದ್ದಾರೆ.

ಅದು ಮುಜರಾಯಿ ದೇಗುಲ ಎಂದು ಗೊತ್ತಿದ್ದರೆ ಉಡುಪಿಯಲ್ಲಿ ಕನಕದಾಸರು ಪ್ರತಿಭಟಿಸಿದಂತೆ ಅಂದೇ ಪ್ರತಿಭಟಿಸುತ್ತಿದ್ದೆವು. ಆಗ ನಮಗೆ ಮುಜರಾಯಿ ದೇಗುಲ ಎಂಬುದು ತಿಳಿದಿರಲಿಲ್ಲ. ಅದರಲ್ಲೂ ವೈಕುಂಠ ಏಕಾದಶಿಗೆ ಹೋದಾಗ ನರಕ ತೋರಿಸಿಬಿಟ್ಟರು. ಅಲ್ಲಿನ ಪೂಜಾರಿ ಹೆಣ್ಣು ಮಕ್ಕಳಿಗೆಲ್ಲಾ ಗರ್ಭಗುಡಿಗೆ ಬಿಟ್ಟಿದ್ದರು, ಆದ್ರೆ ಮಠಾಧೀಶರಾದ ನಮನ್ನ ಗರ್ಭಗುಡಿಯ ಹೊರಗೇ ನಿಲ್ಲಿಸಿದ್ದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ – ಫೆ.7 ರಂದು ದೆಹಲಿಯಲ್ಲಿ ಕರ್ನಾಟಕ ಸರ್ಕಾರದಿಂದ ಪ್ರತಿಭಟನೆ ಎಂದ ಡಿಕೆಶಿ

ವಿಚಾರ ಗೋಷ್ಠಿಯಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಡಾ.ಪಂಡಿತಾರಾಧ್ಯಶ್ರೀ, ಶಿವಶರಣ ಮಾದಾರ ಚನ್ನಯ್ಯ ಮಠದ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ, ಕುಂಚಿಟಿಗ ಮಠದ ಶಾಂತವೀರಶ್ರೀ, ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಶ್ರೀ ಉಪಸ್ಥಿತರಿದ್ದರು. ಇದನ್ನೂ ಓದಿ: ಬಸ್‌ ಡಿಕ್ಕಿ, ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು – ಬೈಕ್‌ ಸ್ಕಿಡ್‌ ಆಗಿದ್ದರಿಂದ ದುರ್ಘಟನೆ ಎಂದ ಬಿಎಂಟಿಸಿ

Share This Article