ಬೆಂಗಳೂರು: ರಾವಣ ಹನುಮಂತನ ಬಾಲಕ್ಕೆ ಬೆಂಕಿ ಇಟ್ಟ ತಪ್ಪಿನಿಂದ ಇಡೀ ಲಂಕೆಯೇ ಸುಟ್ಟು ಹೋಯ್ತು. ನೀವು ಚಡ್ಡಿಗೆ ಬೆಂಕಿ ಹಚ್ಚಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಾಂಗ್ ನೀಡಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ವಿರುದ್ಧ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಹೇಳಿಕೆ ನೀಡಿದ್ದರು. ಟ್ವಿಟ್ಟರ್ನಲ್ಲಿ ತೀವ್ರ ವಾಗ್ದಾಳಿ ನಡೆಸಿದ ಈಶ್ವರಪ್ಪ ಸಿದ್ದರಾಮಯ್ಯ ಅವರಿಗೆ ನಿಮ್ಮ ಬುಡವೇ ಸುಟ್ಟು ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪಠ್ಯ-ಪುಸ್ತಕ ಸಮಿತಿ ವಿಸರ್ಜನೆ ಆಗಿದೆ, ಸಮಿತಿಯನ್ನು ರದ್ದು ಮಾಡಿಲ್ಲ: ಬೊಮ್ಮಾಯಿ
Advertisement
ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ…. ಲಂಕೆಯೇ ಸುಟ್ಟು ಹೋಯಿತು ….. ಕಾಂಗ್ರೇಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ … ಆ ಕೆಲಸ ನಿಮಗಿಂತ ಚನ್ನಾಗಿ ಇನ್ಯಾರು ಮಾಡಲು ಸಾಧ್ಯ …. ಚಡ್ಜಿಗೆ ನೀವು ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ RSS ತಂಟೆಗೆ ಬರಬೇಡಿ…ಹುಷಾರ್#siddaramaiah
— K S Eshwarappa (@ikseshwarappa) June 4, 2022
Advertisement
ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಈಶ್ವರಪ್ಪ, ರಾವಣ ಬಾಲಕ್ಕೆ ಬೆಂಕಿ ಹಚ್ಚಿದ, ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ. ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ, ಚಡ್ಡಿಗೆ ನೀವು ಬೆಂಕಿ ಹಚ್ಚಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್ಎಸ್ಎಸ್ ತಂಟೆಗೆ ಬರಬೇಡಿ, ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬೀದರ್ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್, ಆಂದೋಲನ ಶ್ರೀಗಳಿಗೆ ಬ್ಯಾನ್
Advertisement
Advertisement
ಸಿದ್ದರಾಮಯ್ಯ ಶುಕ್ರವಾರ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿ, ಆರ್ಎಸ್ಎಸ್ನವರು ಹಿಂದೆ ಚಡ್ಡಿ ಹಾಕುತ್ತಿದ್ದರು. ಈಗ ಪ್ಯಾಂಟ್ ಹಾಕುತ್ತಿದ್ದಾರೆ. ನಮ್ಮವರು ಪ್ರತಿಭಟನೆ ಸಂದರ್ಭ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಹಾಗೂ ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ ಎಂದು ಹೇಳಿಕೆ ನೀಡಿದ್ದರು.