– ಬಿಜೆಪಿ ರಾಷ್ಟ್ರೀಯ ನಾಯಕರು ಮಾತುಕತೆ ನಡೆಸಲಿದ್ದಾರೆ ಎಂದ ಕೇಂದ್ರ ಸಚಿವ
ಹುಬ್ಬಳ್ಳಿ: ಲೋಕಸಭೆ (Lok Sabha) ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಈಶ್ವರಪ್ಪ (KS Eshwarappa) ಅವರಿಗೆ ಬೇಸರ ಆಗಿರಬಹುದು. ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.
Advertisement
ಹುಬ್ಬಳ್ಳಿಯಲ್ಲಿ (Hubballi) ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರ ಜೊತೆ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಸ್ಥಳೀಯ ನಾಯಕರು ಮಾತುಕತೆ ನಡೆಸಿ ಬೇಸರ ದೂರ ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಿಂದ ಲಕ್ಷ್ಮಣ್, ಚಾಮರಾಜನಗರದಿಂದ ಹೆಚ್.ಸಿ.ಮಹದೇವಪ್ಪ ಪುತ್ರನಿಗೆ ʼಕೈʼ ಟಿಕೆಟ್ ಫೈನಲ್?
Advertisement
Advertisement
ನಾನೂ ಭೇಟಿ ಮಾಡುವೆ:
ಈಶ್ವರಪ್ಪ ಅವರು ಅತ್ಯಂತ ಹಿರಿಯ ನಾಯಕರು. ನನಗಿಂತ ಮೊದಲೇ ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿ ಇದ್ದವರು. ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಅನ್ಯ ಯೋಚನೆ ಮಾಡಲಾರರು. ಈಶ್ವರಪ್ಪ ಅವರನ್ನು ಸದ್ಯದಲ್ಲೇ ಭೇಟಿ ಮಾಡಿ ಮಾತನಾಡುವೆ. ಅವರ ಮನವೊಲಿಸುವ ವಿಶ್ವಾಸವಿದೆ. ಪಕ್ಷದ ಹಿರಿಯ ನಾಯಕರಾಗಿ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ – ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು
Advertisement
ಟಿಕೆಟ್ ಸಿಗದೇ ಇದ್ದಾಗ ಸಹಜವಾಗಿಯೇ ಎಲ್ಲರಿಗೂ ಬೇಸರ ಆಗುತ್ತದೆ. ಹಾಗಾಗಿ ಪರ-ವಿರೋಧ ಅಭಿಪ್ರಾಯ ಸಾಮಾನ್ಯವಾಗಿರುತ್ತದೆ. ಆದರೆ ಪಕ್ಷದ ಹೈಕಮಾಂಡ್ ಅದೆಲ್ಲವನ್ನೂ ಸರಿಪಡಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಈಶ್ವರಪ್ಪ ವೈಯಕ್ತಿಕವಾಗಿ ನನ್ನ ಮೇಲೆ ಆರೋಪ ಮಾಡ್ತಿದ್ದಾರೆ: ಬಿಎಸ್‌ವೈ