ಡಿಕೆಶಿ, ಸಿದ್ದರಾಮಯ್ಯ ಸಿಎಂ ಆಗೋ ಕನಸಿನ ಲೋಕದಲ್ಲಿದ್ದಾರೆ: ಕೆ.ಎಸ್ ಈಶ್ವರಪ್ಪ

Public TV
1 Min Read
Eshwarappa 2

ರಾಯಚೂರು: ಹಿಜಬ್ ವಿವಾದದಿಂದ ಕಾಂಗ್ರೆಸ್‍ನವರು ಮುಸ್ಲಿಂ ಓಟು ಪಡೆಯುವ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಹಿಜಬ್ ಪರ ಮಾತನಾಡುತ್ತಾರೆ. ಅವರಲ್ಲೇ ಎರಡು ಗುಂಪು ಗಳಾಗಿವೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸಿಎಂ ಆಗುವ ಕನಸಿನ ಲೋಕದಲ್ಲಿದ್ದಾರೆ ಅಂತ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

SIDDARAMAIHA

ರಾಯಚೂರಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯು.ಟಿ.ಖಾದರ್ ಮತ್ತು ಕೆಲವು ಶಾಸಕರು ಹಿಜಬ್ ವಿವಾದದ ಹಿಂದೆ ಎಸ್‍ಡಿಪಿಐ, ಪಿಎಫ್‍ಐ ಕೈವಾಡವಿದ್ದು, ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ

DKSHI ESHWARAPPA 1

ಗೋವಾ ಚುನಾವಣೆ ವೇಳೆ ಕರ್ನಾಟಕಕ್ಕೆ ಹನಿ ನೀರು ಕೊಡಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಇಲ್ಲಿ ಮಹಾದಾಯಿ, ಮೇಕೆದಾಟು ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಹೋರಾಟ ನಡೆಸುವ ಮೂಲಕ ದ್ವಂದ್ವ ನಿಲುವು ಪ್ರದರ್ಶಿಸುತ್ತಾರೆ. ಮಾಡಲು ಕೆಲಸವಿಲ್ಲದೇ ಕಾಂಗ್ರೆಸ್ ನವರು ಪಾದಯಾತ್ರೆ ಮಾಡುತ್ತಿದ್ದಾರೆ. ಈಗಾಗಲೇ ಒಂದು ಹಂತದ ಹೋರಾಟ ಮಾಡಿದ್ದಾಗಿ ಹೇಳಿದ್ದಾರೆ. ಈಗ ಮತ್ತೇ ಪಾರ್ಟ್-2 ನಾಟಕ ಶುರು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

Mekedatu 2

ಶಿವಮೊಗ್ಗದಲ್ಲಿ ಕೊಲೆಯಾಗಿರುವ ಭಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಸ್ಥರಿಗೆ ಶಿವಮೊಗ್ಗ ಬಿಜೆಪಿ ಟಿಕೆಟ್ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಬ್ಬ ಹಿಂದೂಗೆ ನಾನು ನನ್ನ ಸ್ಥಾನ ಬಿಟ್ಟು ಕೊಡಲು ಸಿದ್ದನಿದ್ದೇನೆ. ಮುಸ್ಲಿಂರಿಗೆ ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ. ನಮ್ಮ ಪಕ್ಷ ಹೇಳಿದರೆ ಪಕ್ಷದ ತೀರ್ಮಾನಕ್ಕೆ ಬದ್ದನಾಗಿರುತ್ತೇನೆ. ಹರಿಪ್ರಸಾದ್ ತಮ್ಮ ವಿರೋಧ ಪಕ್ಷ ನಾಯಕ ಸ್ಥಾನ ಸಿಎಂ ಇಬ್ರಾಹಿಂಗೆ ಬಿಟ್ಟು ಕೊಡುತ್ತಾರಾ ಎಂದು ಪ್ರಶ್ನಿಸುವ ಮೂಲಕ ಟಾಂಗ್ ನೀಡಿದರು.

harsha smg

ಮುಸ್ಲಿಂರನ್ನು ಕಾಂಗ್ರೆಸ್ ಓಟ್ ಬ್ಯಾಂಕ್‍ಗಾಗಿ ಬಳಕೆ ಮಾಡಿಕೊಳ್ಳುತ್ತದೆ. ಆದರೆ ಯಾವುದೇ ಸ್ಥಾನ ಮಾನ ಕೊಡುವುದಿಲ್ಲ. ನಾವು ಮತಕ್ಕಾಗಿ ಮುಸ್ಲಿಂರ ಹಿಂದೆ ಬೀಳುವುದಿಲ್ಲ. ಮುಂದೆ ಅವರಿಗೆ ಅರ್ಥವಾಗುತ್ತದೆ ಎಂದರು. ಇದನ್ನೂ ಓದಿ: ನಮ್ಮ ಸ್ವಂತ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

Share This Article
Leave a Comment

Leave a Reply

Your email address will not be published. Required fields are marked *