ಶಿವಮೊಗ್ಗ: ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ಕುಟುಂಬಕ್ಕೆ ಒಂದು ಜಾಬ್ ಕಾರ್ಡ್ ಮಾತ್ರ ನೀಡಲಾಗುತ್ತಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‍ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಮನ್ರೇಗಾ ಯೋಜನೆಯಡಿ ಜಾಬ್ ಕಾರ್ಡ್ ವಿತರಣೆ ಮತ್ತು ಕೂಲಿ ಹಣ ಪಾವತಿ ಬಗ್ಗೆ ಮಾನ್ಯ ವಿರೋಧ ಪಕ್ಷದ ನಾಯಕರಾದ
ಶ್ರೀ ಸಿದ್ದರಾಮಯ್ಯನವರು ಆರೋಪಿಸಿರುವ ಅಂಶಗಳ ಬಗ್ಗೆ ಈ ಕೆಳಕಂಡ ಸ್ಪಷ್ಟೀಕರಣಗಳನ್ನು ನೀಡಲು ಬಯಸುತ್ತೇನೆ.
— K S Eshwarappa (@ikseshwarappa) May 8, 2020
Advertisement
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂದು ಕಾರ್ಡ್ ಗೆ ಒಬ್ಬರಿಗೆ ಉದ್ಯೋಗ ಎಂಬ ನಿರ್ಬಂಧವಿಲ್ಲ. ಒಂದು ಕುಟುಂಬದ ಅರ್ಹ ಸದಸ್ಯರೆಲ್ಲರೂ ಜಾಬ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಕಾರ್ಡ್ ನೀಡಲಾಗುವುದು ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.
Advertisement
1.ಪ್ರತೀ ಕುಟುಂಬಕ್ಕೆ ಒಂದು ಜಾಬ್ ಕಾರ್ಡ್ ನೀಡುತ್ತಿದ್ದು, ಈ ಕಾರ್ಡ್ನಲ್ಲಿ 18ವರ್ಷ ಮೀರಿದ ಆ ಕುಟುಂಬದ ಎಲ್ಲಾ ಸದಸ್ಯರ ಹೆಸರು ನಮೂದಿಸಲಾಗಿರುತ್ತದೆ.ಎಲ್ಲರೂ ಸಹ ಮನ್ರೆಗಾ ಯೋಜನೆಯಡಿ ಕಾಮಗಾರಿಗಳಲ್ಲಿ ಉದ್ಯೋಗ ಪಡೆಯಬಹುದಾಗಿರುತ್ತದೆ. ಇದಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ.
— K S Eshwarappa (@ikseshwarappa) May 8, 2020
Advertisement
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಂದು ಕುಟುಂಬದ ಜಾಬ್ ಕಾರ್ಡ್ ಗೆ ಒಬ್ಬರಿಗೆ ಉದ್ಯೋಗ ನೀಡುತ್ತಿದ್ದಾರೆ. ಉಳಿದವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುತ್ತಿಲ್ಲ ಎಂದು ಟ್ವೀಟ್ ಮಾಡಿದ್ದರು. ಸಿದ್ದರಾಮಯ್ಯನವರು ನರೇಗಾದ ಬಗ್ಗೆ ತಪ್ಪು ತಿಳಿದುಕೊಂಡಿದ್ದಾರೆ. ಸರ್ಕಾರಿ ನೌಕರರು, ಜನಪ್ರತಿನಿಧಿಗಳು ಮತ್ತು ಆದಾಯ ತೆರಿಗೆದಾರರನ್ನು ಹೊರತುಪಡಿಸಿ ಯಾರು ಬೇಕಾದರೂ ಜಾಬ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದೀಗ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಜನರು ಉದ್ಯೋಗಕ್ಕಾಗಿ ಮುಂದೆ ಬರುತ್ತಿದ್ದು, 15 ದಿನಗಳ ಒಳಗಾಗಿ ಕೂಲಿ ಮೊತ್ತವನ್ನು ಪಾವತಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟನೆ ನೀಡಿದರು.
Advertisement
2.01.04.2020ರಿಂದ ಈ ತಹಲ್ವರೆಗೆ 40,745 ಹೆಚ್ಚುವರಿ ಜಾಬ್ ಕಾರ್ಡ್ಗಳನ್ನು ವಿತರಣೆ ಮಾಡಲಾಗಿರುತ್ತದೆ.
3.ಮನ್ರೆಗಾ ಯೋಜನೆಯಡಿಯಲ್ಲಿ ಕಾರ್ಮಿಕರಾಗಿ ಕೂಡಲೇ ನೋಂದಾಯಿಸಿಕೊಳ್ಳಲು ಎಲ್ಲಾ ಅರ್ಹರಿಗೂ ಅವಕಾಶ ಕಲ್ಪಿಸಲು ದಿನಾಂಕ: 30.04.2020ರಂದು ಕಾಯಕ ಮಿತ್ರ ಮೊಬೈಲ್ ಆಪ್ ಬಿಡುಗಡೆ ಮಾಡಲಾಗಿರುತ್ತದೆ.
— K S Eshwarappa (@ikseshwarappa) May 8, 2020