ಚಾಮರಾಜನಗರ: ಸುಳ್ಳಿಗೆ ಇನ್ನೊಂದು ಹೆಸರೇ ಸಿದ್ದರಾಮಯ್ಯ, ಮುಂದಿನ ಚುವಾಣೆಯಲ್ಲಿ ಎಲ್ಲರೂ ಸೇರಿಕೊಂಡು ಸಿದ್ದರಾಮಯ್ಯ ಅವರನ್ನು ಸೋಲಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಇಂದು ಚಾಮರಾಜನಗರದಲ್ಲಿ ಬಿಜೆಪಿಯಿಂದ ಜನ ಸ್ವರಾಜ್ ಸಮಾವೇಶ ನಡೆಯಿತು. ಚಾಮರಾಜನಗರದ ಸೂರ್ಯೋದಯ ಕಲ್ಯಾಣ ಮಂಟಪದಲ್ಲಿ ನಡೆದ ಸಮಾವೇಶದ ನೇತೃತ್ವ ವಹಿಸಿದ್ದ ಕೆ.ಎಸ್. ಈಶ್ವರಪ್ಪ, ಸಮಾವೇಶ ಉದ್ಘಾಟಿಸಿ ತಮ್ಮ ಭಾಷಣದುದ್ದಕ್ಕೂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕೊಹ್ಲಿ ಅಲ್ಲ ಗುಪ್ಟಿಲ್ ಈಗ ಟಿ20 ಕ್ರಿಕೆಟ್‍ನ ಕಿಂಗ್
Advertisement
Advertisement
ಶುಕ್ರವಾರ ತಮ್ಮ ಮುಖಂಡರೊಬ್ಬರಿಗೆ ಟಿಕೆಟ್ ಕೇಳಲು ಹೋದ ಕಾಂಗ್ರೆಸ್ ಕಾರ್ಯಕರ್ತರನ್ನು ತಮ್ಮನ್ನು ಸೋಲಿಸಿದ್ದರೆಂದು ಸಿದ್ದರಾಮಯ್ಯ ಬೈದ ಪ್ರಕರಣ ಪ್ರಸ್ತಾಪಿಸಿದ ಅವರು, ಮುಂದಿನ ಚುನಾವಣೆಯಲ್ಲಿ ಎಲ್ಲರೂ ಸೇರಿಕೊಂಡು ಸಿದ್ದರಾಮಯ್ಯ ಅವರನ್ನು ಸೋಲಿಸುತ್ತಾರೆ. ಬಾದಾಮಿ ಕ್ಷೇತ್ರದಲ್ಲೂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾಯುತ್ತಿದ್ದಾರೆ ಎಂದರು.
Advertisement
ಉಪ ಚುನಾವಣೆಯಲ್ಲಿ ಕುರುಬರ ನಾಯಕ ನಾನೇ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದರು. ಸಿಂದಗಿಯಲ್ಲಿ 35 ಸಾವಿರ ಕುರುಬರ ಓಟ್ ಇದೆ. ಆದರೂ ಸಿಂದಗಿಯಲ್ಲಿ ಬಿಜೆಪಿ ಗೆದ್ದಿತು ಎಂದು ಲೇವಡಿ ಮಾಡಿದರು. ಸುಳ್ಳಿಗೆ ಇನ್ನೊಂದೇ ಹೆಸರೇ ಸಿದ್ದರಾಮಯ್ಯ ಎಂದು ಆರೋಪಿಸಿದರು. ಕಾಂಗ್ರೆಸ್‍ನಲ್ಲಿ ಎರಡು ಗುಂಪುಗಳಿವೆ ಅಲ್ಪಸಂಖ್ಯಾತರ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಇದು ಜಗಜ್ಜಾಹೀರಾಗಿದೆ. ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ರಾಜ್ಯದ ಜನರು ದುರಹಂಕಾರದ ಕಾಂಗ್ರೆಸ್‍ಗೆ ಬುದ್ಧಿ ಕಲಿಸಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಈಶ್ವರಪ್ಪ ಟೀಕಿಸಿದರು. ಇದನ್ನೂ ಓದಿ: ನಿನ್ನಿಂದಲೇ ನಾನು ಹುಷಾರಾಗಿದ್ದು, ನಿನ್ನ ಹಾರೈಕೆಯಿಂದಲೇ ಹೊಸ ಚೈತನ್ಯ ಸಿಕ್ಕಿದ್ದು: ರಾಘಣ್ಣ
Advertisement
ವಿಧಾನಪರಿಷತ್ ಚುನಾವಣೆಯಲ್ಲಿ 25 ಸ್ಥಾನಗಳ ಪೈಕಿ 15 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಲಸಿಕೆ ಹಾಕಿಸಿಕೊಂಡ್ರೆ ಗಂಡಸ್ತನ ಹೋಗುತ್ತೆ ಎಂದು ಕಾಂಗ್ರೆಸ್‍ನವರು ಅಪಪ್ರಚಾರ ಮಾಡಿದ್ದರು. ನಂತರದ ದಿನಗಳಲ್ಲಿ ಕಾಂಗ್ರೆಸ್‍ನವರೇ ಕದ್ದು ಮುಚ್ಚಿ ಕ್ಯೂ ನಿಂತು ಲಸಿಕೆ ಹಾಕಿಸಿಕೊಂಡ್ರು ಎಂದು ಲೇವಡಿ ಮಾಡಿದರು.