ವಿಜಯಪುರ: ಎಂಬಿ ಪಾಟೀಲ್ ಅವರು ತಮ್ಮ ನೀರಾವರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮ ಒಡೆಯುವ ಕೆಲಸ ಮುಂದುವರೆಸಲಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಎಂಬಿ ಪಾಟೀಲ್ ಅವರು ಜನರ ಕಷ್ಟಕ್ಕೆ ಸ್ಪಂದಿಸೋದು ಬಿಟ್ಟು ಧರ್ಮ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮಗಳನ್ನು ಒಡೆಯುವ ಕೆಲಸಗಳನ್ನೇ ಮುಂದುವರೆಸಲಿ ಎಂದು ಕಿಡಿಕಾರಿದ್ದಾರೆ.
Advertisement
ಪ್ರಧಾನಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲ್ಲ ಅನ್ನೋದು ತಪ್ಪು. ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರ ಆಟವನ್ನು ಜನರು ನೋಡಿರುತ್ತಾರೆ. ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗಿಯಾಗೋದಿಲ್ಲ ಅನ್ನೋದು ಪ್ರಜಾಪ್ರಭುತ್ವ ವಿರೋಧಿ. ಸಿದ್ದರಾಮಯ್ಯನವರ ಉದ್ಧಟತನ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಧಾನಿ ಕಾರ್ಯಕ್ರಮಕ್ಕೆ ಹೋಗಿ ರಾಜ್ಯದ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಬೇಕು. ಈ ವಿಚಾರದಲ್ಲಿ ಸಿಎಂ ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಹೇಳಿದರು.
Advertisement
ಮುಂದಿನ ಸಿಎಂ ಅಭ್ಯರ್ಥಿ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಬಿಜೆಪಿ ಅಧ್ಯಕ್ಷ ಅಮೀತ್ ಶಾ ಈ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಹಾಗೂ ಅನಂತ ಕುಮಾರ್ ಹೆಗಡೆ ಸಿಎಂ ಅಭ್ಯರ್ಥಿ ಅಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ. ಸಚಿವರು ಹಾಗೂ ಅಧಿಕಾರಿಗಳನ್ನು ರಕ್ಷಣೆ ಮಾಡಲು ಎಸಿಬಿ ರಚನೆ ಮಾಡಲಾಗಿದೆ. ವಿರೋಧಿಗಳ ವಿರುದ್ಧ ಕೇಸ್ ದಾಖಲಿಸಲು ಎಸಿಬಿ ರಚಿಸಲಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.