ಶಿವಮೊಗ್ಗ: ರಾಜ್ಯದ ರೈತರ ಹಿತವನ್ನು ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಒಬ್ಬ ನೀರಿನ ಕಳ್ಳ, ಅಯೋಗ್ಯ ಉಪಮುಖ್ಯಮಂತ್ರಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S Eshwarappa ) ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಾಗದೇ ಭೀಕರ ಬರಗಾಲ ಎದುರಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಹ ಎದುರಾಗಲಿದೆ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ ಹರಿಸಿ ರಾಜ್ಯದ ಜನರಿಗೆ ದ್ರೋಹ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಕೆಶಿ
ಕಾಂಗ್ರೆಸ್‍ನವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಹಂಬಲದಲ್ಲಿದ್ದಾರೆ. I.N.D.I.A ಮೈತ್ರಿ ಕೂಟವನ್ನು ತೃಪ್ತಿ ಪಡಿಸುವ ಸಲುವಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದಾರೆ. ಡಿಕೆಶಿ ಒಬ್ಬ ನೀರಿನ ಕಳ್ಳ ಎಂದರೆ ತಪ್ಪಾಗಲಾರದು. ನಮ್ಮ ರಾಜ್ಯದ ರೈತರಿಗೆ ಅವರು ದ್ರೋಹ ಮಾಡಿದ್ದಾರೆ ಎಂದು ಅವರು ಕುಟುಕಿದ್ದಾರೆ.
ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಟ್ಟಿಲ್ಲ ಎಂದು ಹೇಳುತ್ತಲೇ ಪ್ರತಿನಿತ್ಯ ನೀರು ಹರಿಸುತ್ತಿದ್ದಾರೆ. ತಮಿಳುನಾಡನ್ನು I.N.D.I.A ಒಕ್ಕೂಟದ ತೆಕ್ಕೆಯಲ್ಲಿ ಇಟ್ಟುಕೊಳ್ಳಬೇಕು ಎಂಬ ಉದ್ದೇಶದಿಂದ ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಿಧಾನಸಭೆಯೊಳಗೆ ಮಾತ್ರ ಗಲಾಟೆ, ಹೊರಗಡೆ ಎಲ್ಲರೂ ಸ್ನೇಹಿತರೇ ಆಗಿರ್ತಾರೆ: ಯು.ಟಿ. ಖಾದರ್
Web Stories