ಶಾಂತಿ ಸ್ಥಾಪಿಸಿ, ಇಲ್ಲದಿದ್ರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತೆ – ಇರಾನ್‌ಗೆ ಟ್ರಂಪ್ ಖಡಕ್ ವಾರ್ನಿಂಗ್

Public TV
2 Min Read
Donald Trump

– ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ದಾಳಿ ಬಳಿಕ ಎಚ್ಚರಿಕೆ

ವಾಷಿಂಗ್ಟನ್: ಈಗಲಾದರೂ ಇರಾನ್ ಶಾಂತಿ ಸ್ಥಾಪಿಸಲಿ, ಇಲ್ಲವಾದರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಖಡಕ್ ವಾರ್ನಿಂಗ್ ನೀಡಿದ್ದಾರೆ.

Iran America

ಭಾನುವಾರ ನಸುಕಿನಲ್ಲಿ ಇರಾನ್ (Iran) ಮೇಲೆ ಅಮೆರಿಕ (America) ನಡೆಸಿದ ವೈಮಾನಿಕ ದಾಳಿ (Air Strike) ಬಳಿಕ ಶ್ವೇತಭವನದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಇರಾನ್ ಮೇಲಿನ ವೈಮಾನಿಕ ದಾಳಿ ಯಶಸ್ವಿಯಾಗಿದೆ. ಈಗಲಾದರೂ ಇರಾನ್. ಇಸ್ರೇಲ್ ಜೊತೆಗಿನ ಯುದ್ಧಕ್ಕೆ ವಿರಾಮ ಘೋಷಿಸಿ, ಶಾಂತಿ ಸ್ಥಾಪಿಸಲಿ. ಇಲ್ಲವಾದರೆ ಭವಿಷ್ಯದಲ್ಲಿ ಭಾರೀ ಪ್ರಮಾಣದ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: Pahalgam Attack | ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಶನಿವಾರ ರಾತ್ರಿ ವೈಮಾನಿಕ ದಾಳಿ ಮೂಲಕ ಇರಾನ್‌ನ ಪರಮಾಣು ಸ್ಥಾವರಗಳು ಹಾಗೂ ಪರಮಾಣು ಬಾಂಬ್‌ಗಳನ್ನು ತಯಾರಿಕೆಯನ್ನು ನಿಲ್ಲಿಸುವುದು ನಮ್ಮ ಮೂಲ ಉದ್ದೇಶವಾಗಿತ್ತು ಹಾಗೂ ಈ ಮೂಲಕ ಇಸ್ರೇಲ್‌ಗೆ ಯುದ್ಧ ಬೆದರಿಕೆ ಹಾಕುತ್ತಿರುವ ಇರಾನ್ ಅನ್ನು ಬುಡಸಮೇತ ಅಲುಗಾಡಿಸುವುದು ಮುಖ್ಯ ಗುರಿಯಾಗಿತ್ತು. ಈ ವೈಮಾನಿಕ ದಾಳಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ನೀಡಿದ ಸಹಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ.

ದಾಳಿಯಲ್ಲಿ ಇರಾನ್‌ನ ಪ್ರಮುಖ ಪರಮಾಣು ಸ್ಥಾವರಗಳಾದ ಫೋರ್ಡೊ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ದಾಳಿ ನಡೆಸಿ, ಅವುಗಳನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ. ಈ ವೇಳೆ ಫೋರ್ಡೊನಲ್ಲಿದ್ದ 30,000 ಪೌಂಡ್‌ನ ಬಂಕರ್ ಬಸ್ಟರ್ ಬಾಂಬ್‌ಗಳನ್ನು ಧ್ವಂಸಮಾಡಲಾಗಿದೆ. ಈ ಮೂಲಕ ವೈಮಾನಿಕ ದಾಳಿ ಭರ್ಜರಿ ಯಶಸ್ಸನ್ನು ಕಂಡಿದೆ ಎಂದು ನಾನು ಜಗತ್ತಿಗೆ ಹೇಳಲು ಬಯಸುತ್ತೇನೆ. ಇದರಿಂದಾಗಿ ಇಸ್ರೇಲ್‌ಗಿದ್ದ ಒಂದು ದೊಡ್ಡ ಅಪಾಯವನ್ನು ತಪ್ಪಿಸಿದ್ದೇವೆ ಎಂದು ಹೆಮ್ಮೆಯಿಂದ ಹೇಳಲು ಬಯಸುತ್ತೇನೆ ಎಂದಿದ್ದಾರೆ.ಇದನ್ನೂ ಓದಿ: ಇಸ್ರೇಲ್‌ ಮೇಲೆ ಮತ್ತೆ ಬ್ಯಾಲಿಸ್ಟಿಕ್ ಮಿಸೈಲ್‌ಗಳ ಸುರಿಮಳೆ – ಅಮೆರಿಕ ದಾಳಿಗೂ ಜಗ್ಗದ ಇರಾನ್‌

Iran America 2

ಕಳೆದ 40 ವರ್ಷಗಳಿಂದ ಇರಾನ್ ಇಸ್ರೇಲ್ ಹಾಗೂ ಅಮೆರಿಕಕ್ಕೆ ಸಾವಿನ ಬೆದರಿಕೆ ಹಾಕುತ್ತಲೇ ಬಂದಿದೆ. ಜನರಲ್ ಖಾಸಿಮ್ ಸೊಲೈಮಾನಿ ಸೇರಿ ಈಗಾಗಲೇ ಎಷ್ಟೋ ಜನರನ್ನು ಬಲಿ ತೆಗೆದುಕೊಂಡಿದ್ದಾರೆ. ಇದೇ ಮುಂದುವರಿಯಲು ಬಿಡುವುದಿಲ್ಲ ಎಂದು ಹೇಳಿದರು.

Iran America 1

ಈ ಮೊದಲೇ ಡೊನಾಲ್ಡ್ ಟ್ರಂಪ್ ಶಾಶ್ವತ ಯುದ್ಧ ಬೇಡ ಎಂದಿದ್ದರು. ಆದರೆ ಈದೀಗ ಇರಾನ್ ಮತ್ತು ಇಸ್ರೇಲ್ ಮಧ್ಯೆ ಅಮೆರಿಕ ಪ್ರವೇಶಿರುವುದು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವ ಸಾಧ್ಯತೆಯಿದೆ.

ಶ್ವೇತಭನದ ಪರಿಸ್ಥಿತಿ ಹೇಗಿತ್ತು?
ಇರಾನ್ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಸಂದರ್ಭದಲ್ಲಿ ಶ್ವೇತಭವನದ ಪರಿಸ್ಥಿತಿ ಹೇಗಿತ್ತು ಅನ್ನೋದರ ಒಂದಿಷ್ಟು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಕಂಡುಬಂದಿವೆ. ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಶ್ವೇತಭವನದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ದಾಳಿಯ ಪ್ರತಿ ಕ್ಷಣದ ಮಾಹಿತಿಯನ್ನು ಹೇಗೆ ಕಲೆಹಾಕುತ್ತಿದ್ದರು. ಇದಕ್ಕೆ ದುಗುಡ ಏನಿತ್ತು? ಇದಕ್ಕೆ ಟ್ರಂಪ್ ಅವರ ಪ್ರತಿಕ್ರಿಯೆ ಹೇಗಿತ್ತು ಎಂಬೆಲ್ಲ ಚಿತ್ರಣವನ್ನು ಈ ಫೋಟೋಗಳು ಕಟ್ಟಿಕೊಟ್ಟಿವೆ.ಇದನ್ನೂ ಓದಿ: ಅಮೆರಿಕನ್ನರು ಹಿಂದೆಂದೂ ನೋಡಿರದ ದಾಳಿ ಎದುರಿಸಲು ಸಿದ್ಧರಾಗಿ – ಖಮೇನಿ ಬಿಗ್‌ ವಾರ್ನಿಂಗ್‌

Share This Article