ಬೆಂಗಳೂರು: ಯುವಜನರನ್ನು ಉದ್ಯೋಗಕ್ಕೆ (Employment) ಅರ್ಹರನ್ನಾಗಿ ಮಾಡುವ ನಿಟ್ಟಿನಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇನ್ನೂ 10 ಲ್ಯಾಂಗ್ವೇಜ್ ಲ್ಯಾಬ್ಗಳನ್ನು (ಭಾಷಾ ಕಲಿಕೆಯ ಪ್ರಯೋಗಾಲಯ) (Language Lab) ಸ್ಥಾಪಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ (CN Ashwath Narayan) ಭರವಸೆ ನೀಡಿದರು.
ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ ಇರುವ ಸರ್ಕಾರಿ ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು (Government College) ಆವರಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಅಶ್ವಿನ್, ಶಮಿ ಸ್ಪಿನ್ ದಾಳಿಗೆ ಮಕಾಡೆ ಮಲಗಿದ ಕಾಂಗರೂ ಪಡೆ – ಭಾರತಕ್ಕೆ 1-0 ಜಯದ ಮುನ್ನಡೆ
Advertisement
ದೇಶದಲ್ಲೇ ‘ಅತ್ಯಂತ ಭರವಸೆಯ ನಗರವಾಗಿರುವ ನಮ್ಮ ಬೆಂಗಳೂರು’ ಹಾಗೂ ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದ ಉದ್ಯೋಗ ಸೃಷ್ಟಿಯಾಗುತ್ತಿದೆ.
ಸ್ಕಿಲ್ ಕನೆಕ್ಟ್ ಪೋರ್ಟಲ್, ಇಂಡಸ್ಟ್ರಿ ಲಿಂಕೇಜ್ ಸೆಲ್, IMCK, PMKKY, CMKKY, ಸಹಿತ ವಿವಿಧ ವೇದಿಕೆಗಳ ಮೂಲಕ ಕೌಶಲ್ಯ, ಉದ್ಯೋಗಾವಕಾಶ ಕಲ್ಪಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ.
2/2 pic.twitter.com/za0ESG2F60
— Dr. Ashwathnarayan C. N. (@drashwathcn) February 11, 2023
Advertisement
ಕರ್ನಾಟಕದಲ್ಲಿ ಉದ್ಯೋಗ (Employment) ಅವಕಾಶಗಳಿಗೆ ಕೊರತೆ ಇಲ್ಲ. ಮುಖ್ಯಮಂತ್ರಿಗಳ ಮತ್ತು ಪ್ರಧಾನ ಮಂತ್ರಿಗಳ ಕೌಶಲ್ಯ ವಿಕಾಸ ಯೋಜನೆಯಡಿ 18 ರಿಂದ 35 ವರ್ಷಗಳ ಒಳಗಿನ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕೊಟ್ಟು, ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.
Advertisement
ಸ್ಕಿಲ್ ಪೋರ್ಟಲ್ (Skill Portal) ವೇದಿಕೆಯಲ್ಲಿ ಈಗಾಗಲೇ 250 ಕಂಪನಿಗಳು ನೋಂದಣಿ ಆಗಿವೆ. ಹಾಗೆಯೇ ಸ್ಕಿಲ್ ಕನೆಕ್ಟ್ ಉಪಕ್ರಮದಡಿ 25 ಸಾವಿರ ಉದ್ಯೋಗ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಒಂದೇ ತಿಂಗಳಲ್ಲಿ 6,085 ಕೋಟಿ GST ಸಂಗ್ರಹ – ಸಿಎಂ ಬೊಮ್ಮಾಯಿ
Advertisement
ಯುವ ಜನತೆಗೆ ಅವರ ಕನಸಿನ ಉದ್ಯೋಗ ಕಲ್ಪಿಸುವ ಜತೆ ಅಗತ್ಯ ಕೌಶಲ್ಯ ಕಲಿಸುವ ಸದುದ್ದೇಶದಿಂದ ನಮ್ಮ ಮಲ್ಲೇಶ್ವರದಲ್ಲಿಂದು ವಿಶೇಷವಾಗಿ “ಕೌಶಲ್ಯ ಉದ್ಯೋಗ ಮೇಳ” ಹಮ್ಮಿಕೊಳ್ಳಲಾಗಿದೆ.
100ಕ್ಕೂ ಹೆಚ್ಚು ಕಂಪನಿಗಳು ಆಗಮಿಸಿದ್ದು, ಹಲವಾರು ಉದ್ಯೋಗಾಸಕ್ತರು ಅತಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.#ಉದ್ಯೋಗಮಲ್ಲೇಶ್ವರ
1/2 pic.twitter.com/jaBLVMpIQ5
— Dr. Ashwathnarayan C. N. (@drashwathcn) February 11, 2023
ಇದೀಗ ಬೆಂಗಳೂರು ದೇಶದ ಜ್ಞಾನ, ಆರ್ಥಿಕ, ಸ್ಟಾರ್ಟಪ್ ಮತ್ತು ಅಗ್ರಿಟೆಕ್ ರಾಜಧಾನಿಯಾಗಿ ಹೊರಹೊಮ್ಮಿದೆ. ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿರುವ ಬೆಂಗಳೂರಿನಲ್ಲಿ (Bengaluru) ಯುವಜನರ ಉಜ್ವಲ ಭವಿಷ್ಯ ಅಡಗಿದೆ. ಹೀಗಾಗಿ ಲಕ್ಷಾಂತರ ಯುವಜನತೆಗೆ ಕೌಶಲ್ಯಗಳನ್ನು ಕಲಿಸಲಾಗುತ್ತಿದೆ. ಇವೆಲ್ಲದರ ಪರಿಣಾಮದಿಂದಲೇ ರಾಜ್ಯದಲ್ಲಿ ನಿರುದ್ಯೋಗ ಪರಿಣಾಮ ಕಡಿಮೆಯಾಗಿದೆ ಎಂದು ವಿವರಿಸಿದರು.
ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಲು ವಿಫಲರಾಗುವ ವಿದ್ಯಾರ್ಥಿಗಳಿಗೂ ಸರ್ಕಾರ ವಿಶೇಷ ತರಬೇತಿಗೆ ವ್ಯವಸ್ಥೆ ಮಾಡಿದೆ. ಸರ್ವರಿಗೂ ಉದ್ಯೋಗ ಎನ್ನುವುದೇ ಸರ್ಕಾರದ ನೀತಿ. ಪ್ರಸ್ತತ ದಿನದ ಉದ್ಯೋಗ ಮೇಳದಲ್ಲಿ 125 ಕಂಪನಿಗಳು ಪಾಲ್ಗೊಂಡಿದ್ದು, 28 ಸಾವಿರ ಉದ್ಯೋಗ ಅವಕಾಶಗಳು ಲಭ್ಯವಿವೆ. ಎಸ್ಸೆಸ್ಸೆಲ್ಸಿಯಿಂದ ಎಂಜಿನಿಯರಿಂಗ್ ಪದವೀಧರರವರೆಗೆ ಇಲ್ಲಿ ಅವಕಾಶ ಒದಗಿಸಲಾಗಿದೆ ಎಂದು ತಿಳಿಸಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k