ಮಂಗಳೂರಿನಲ್ಲಿ ಕೋಮು ದ್ವೇಷ ನಿಗ್ರಹ ದಳ ಸ್ಥಾಪನೆ: ಜಿ.ಪರಮೇಶ್ವರ್

Public TV
1 Min Read

ಮಂಗಳೂರು: ನೈತಿಕ ಪೊಲೀಸ್ ಗಿರಿ (Moral Policing) ತಡೆಯಲು ಮಂಗಳೂರು (Mangaluru) ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸದಾಗಿ ಕೋಮು ದ್ವೇಷ ನಿಗ್ರಹ (Anti Communal Wing) ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwara) ಭರವಸೆ ನೀಡಿದ್ದಾರೆ.

ಮಂಗಳೂರಿನಲ್ಲಿ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಒಳ್ಳೆಯ ಜನರಿದ್ದಾರೆ ಎಂದು ಇಡೀ ದೇಶವೇ ನಂಬಿದೆ. ಆದರೆ ಅದರ ಜೊತೆಗೆ ಇಲ್ಲಿ ಶಾಂತಿ ಇಲ್ಲ, ಕೋಮು ಸಾಮರಸ್ಯ ಇಲ್ಲ ಎಂಬ ಮಾತು ಕೇಳಿಬರುತ್ತಿದೆ. ನಾನು ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದಾಗ ಇಪ್ಪತ್ತು ಸಂಸ್ಥೆಗಳ ಮುಖ್ಯಸ್ಥರ ಜೊತೆ ಮಾತನಾಡಿದ್ದೇನೆ. ಆಗ ಅವರೂ ಇಲ್ಲಿ ಶಾಂತಿ ಕೊಡಿ ಎಂಬ ಮಾತನ್ನಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ: ರೇಣುಕಾಚಾರ್ಯ

ಕರಾವಳಿಯಲ್ಲಿ ಇಂದು ಭಯದ ವಾತಾವರಣ ಇದೆ ಎಂದು ಜನ ಮಾತಾನಾಡಿಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿಯನ್ನು ನಾವು ತಡೆಯುತ್ತೇವೆ. ನೈತಿಕ ಪೊಲೀಸ್‌ಗಿರಿ ಇಲ್ಲಿ ಜಾಸ್ತಿಯಾಗಿದೆ. ಇದೆಲ್ಲವನ್ನೂ ನಾವು ತಡೆಯದೇ ಇದ್ದರೆ ಇಲಾಖೆ ಹಾಗೂ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದರು. ಇದನ್ನೂ ಓದಿ: ಬಾಡಿಗೆದಾರರೇ ನಿಮಗೆ ಉಚಿತ ವಿದ್ಯುತ್‌ ಬೇಕೇ – ಷರತ್ತುಗಳನ್ನು ಪೂರ್ಣಗೊಳಿಸಿದ್ರೆ ಮಾತ್ರ ಫ್ರೀ

Share This Article