ಬೆಂಗಳೂರು: ರಾಜ್ಯದಲ್ಲಿ ಮೈಸೂರು, ಮಂಡ್ಯ, ಕಾರವಾರ, ಶಿವಮೊಗ್ಗ, ತುಮಕೂರಿನಲ್ಲಿ ಹೊಸದಾಗಿ ಕ್ಯಾನ್ಸರ್ ಆಸ್ಪತ್ರೆಗಳ ಸ್ಥಾಪನೆ ಮಾಡುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ನಾಗರಾಜ್ ಪ್ರಶ್ನೆ ಕೇಳಿ, ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಎಪಿಎಲ್ ಕಾರ್ಡ್ದಾರರಿಗೆ 50% ರಿಯಾಯಿತಿ ಕೊಡಿ. ಈಗ ಇರುವ 30% ಬದಲಾಗಿ 50% ರಿಯಾಯಿತಿ ಕೊಡಬೇಕು. ಬೆಳಗಾವಿಯಲ್ಲಿ ಒಂದು ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭ ಮಾಡಬೇಕು ಎಂದು ಒತ್ತಾಯ ಮಾಡಿದರು.ಇದನ್ನೂ ಓದಿ: ಕೇಂದ್ರದ ವಿರುದ್ಧ ಸುಳ್ಳು ಮಾಹಿತಿ: ಸಿಎಂ ವಿರುದ್ದ ವಿಶ್ವನಾಥ್ ಕೆಂಡಾಮಂಡಲ
Advertisement
Advertisement
ಇದಕ್ಕೆ ಶರಣ ಪ್ರಕಾಶ್ ಪಾಟೀಲ್ ಪ್ರತಿಕ್ರಿಯಿಸಿ, ರಾಜ್ಯದಲ್ಲಿ 80% ಇರುವ ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಚಿಕಿತ್ಸೆ ಇದೆ. ನಮ್ಮ ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸೆಗೆ ಕಡಿಮೆ ಹಣ ಇದೆ. ಎಪಿಎಲ್ ಕಾರ್ಡ್ದಾರರಿಗೆ 50% ರಿಯಾಯಿತಿ ಕೊಡುವ ಬಗ್ಗೆ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡುತ್ತೇವೆ. ಬೆಳಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಆಗಿದೆ. ಬೆಳಗಾವಿ ಮೆಡಿಕಲ್ ಕಾಲೇಜು ಆವರಣದಲ್ಲಿ ನಮಗೆ ಜಾಗ ಸಿಗುತ್ತಿಲ್ಲ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ಮಾಡಿ ಸ್ಥಳದ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು.
Advertisement
ನಮ್ಮ ಸರ್ಕಾರ ಬಡವರ ಪರ ಇರುವ ಸರ್ಕಾರ. ಹೀಗಾಗಿ ರಾಜ್ಯದ ಹಲವು ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡಲಾಗುತ್ತಿದೆ. ಕಾರವಾರ, ಮಂಡ್ಯ, ಶಿವಮೊಗ್ಗ, ಮೈಸೂರು, ತುಮಕೂರಿನಲ್ಲಿ ಹೊಸದಾಗಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.ಇದನ್ನೂ ಓದಿ: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರೋ ಹುದ್ದೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್