ನವದೆಹಲಿ: ಹೆಣ್ಣು ಮಕ್ಕಳು ಸಶಸ್ತ್ರಪಡೆಗಳನ್ನು ಸೇರಲು ಸೈನಿಕ ಶಾಲೆಗಳು ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಸೈನಿಕ ಶಾಲೆಗಳ ವೆಬಿನಾರ್ ನಲ್ಲಿ ಭಾಗವಹಿಸಿದ್ದ ಸಿಂಗ್ ಅವರು, ಹೆಣ್ಣು ಮಕ್ಕಳಿಗೆ ಸಶಸ್ತ್ರಪಡೆಗಳಲ್ಲಿ ಹೆಚ್ಚಿನ ಅವಕಾಶ ನೀಡಲು 100 ಸೈನಿಕ ಶಾಲೆಗಳನ್ನು ಪ್ರಾರಂಭಿಸುತ್ತಿರುವುದಾಗಿ ಘೋಷಿಸಿದರು. ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುತ್ತಿದ್ದು, ಮಹಿಳೆಯರ ಹಾದಿಯನ್ನು ಸುಗಮಗೊಳಿಸಲು ಸೈನಿಕ ಶಾಲೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ – ಇಂದು ಮಧ್ಯಾಹ್ನ 3.30ಕ್ಕೆ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟ
‘ಸೈನಿಕ’ ಏಕತೆ, ಶಿಸ್ತು ಮತ್ತು ಭಕ್ತಿಯನ್ನು ಸೂಚಿಸಿದರೆ, ‘ಶಾಲೆ’ ಶಿಕ್ಷಣದ ಕೇಂದ್ರವಾಗಿದೆ. ಆದ್ದರಿಂದ ಸೈನಿಕ ಶಾಲೆಗಳು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ನಿರ್ಧಾರವು ದೇಶಕ್ಕೆ ಸೇವೆ ಸಲ್ಲಿಸುವ ತಮ್ಮ ಕನಸುಗಳನ್ನು ನನಸಾಗಿಸಲು ಮಹಿಳೆಯರನ್ನು ಉತ್ತೇಜಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಕ್ಕಳ ಮೂಲಭೂತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮತ್ತು ದೇಶದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕಳೆದ ಆರು-ಏಳು ವರ್ಷಗಳಲ್ಲಿ ಸರ್ಕಾರವು ತೆಗೆದುಕೊಂಡ ಅನೇಕ ಪ್ರಮುಖ ನಿರ್ಧಾರಗಳಲ್ಲಿ ಸೈನಿಕ ಶಾಲೆಗಳ ವಿಸ್ತರಣೆಯ ಘೋಷಣೆಯು ಒಂದು. ಸೈನಿಕ ಶಾಲೆಗಳಲ್ಲಿ ರಕ್ಷೆ ಮತ್ತು ಶಿಕ್ಷೆಗಳ ವಿಲೀನವು ಮುಂದಿನ ದಿನಗಳಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಶಿಸಿದರು. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕೆದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್