ನವದೆಹಲಿ: ಕಾಶ್ಮೀರಿ ಪಂಡಿತರಿಗೆ 32 ವರ್ಷಗಳ ನಂತರ ಸಿನಿಮಾ ಸಿಕ್ಕಿದೆ. ಆದರೆ ನ್ಯಾಯ ಸಿಕ್ಕಿಲ್ಲ. ಹಾಗಾಗಿ ಎಲ್ಲ ರಾಜಕೀಯ ಪಕ್ಷಗಳು ಒಗ್ಗೂಡಿ ಅವರಿಗೆ ಪುನರ್ ವಸತಿ ಕಲ್ಪಿಸುವ ಮೂಲಕ ನ್ಯಾಯ ಒದಗಿಸಿಕೊಡಲು ಶ್ರಮಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮನವಿ ಮಾಡಿದ್ದಾರೆ.
Advertisement
ಕಾಶ್ಮೀರದಿಂದ ಸ್ಥಳಾಂತರಗೊಂಡ ಜನರ ಬಗ್ಗೆ ನನಗೆ ಸಹಾನುಭೂತಿ ಇದೆ. 32 ವರ್ಷ ಕಳೆದರೂ ಅವರಿಗೆ ನ್ಯಾಯ ಸಿಕ್ಕಿಲ್ಲ. ಬದಲಿಗೆ ಅವರಿಗೆ ಸಿಕ್ಕಿದ್ದು ಸಿನಿಮಾ ಮಾತ್ರ. ಇದು ತಪ್ಪು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಹಿಜಬ್‍ಗಾಗಿ ಪರೀಕ್ಷೆ ಕೈ ಬಿಟ್ಟ ವಿದ್ಯಾರ್ಥಿನಿ
Advertisement
Advertisement
ಇದೇ ವೇಳೆ ಕಳೆದ ಎಂಟು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಕಾಶ್ಮೀರಿ ಪಂಡಿತರಿಗಾಗಿ ಅವರು ಏನು ಮಾಡಿದ್ದಾರೆ? ಈಗ ಸಿನಿಮಾ ಪ್ರಚಾರ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಇದು ಬೇಕಾ? ಅವರಿಗೆ ಬೇಕಾಗಿರುವುದು ನ್ಯಾಯ ಎಂದಿದ್ದಾರೆ. ಇದನ್ನೂ ಓದಿ: SSLC ಪರೀಕ್ಷೆಗೆ ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಪರೀಕ್ಷಾ ಸಿಬ್ಬಂದಿಯಿಂದ ಮನವೊಲಿಕೆ
Advertisement
ಕಾಶ್ಮೀರಿ ಪಂಡಿತರಿಗೆ ನ್ಯಾಯ ಒದಗಿಸಲು ಏಕೈಕ ಮಾರ್ಗ ಎಂದರೆ ಪುನರ್ವಸತಿ ಕಲ್ಪಿಸುವುದಾಗಿದೆ. ತಪ್ಪಿತಸ್ಥರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಬೇಕು. ಇದಕ್ಕೆ ಪ್ರತಿ ರಾಜ್ಯದಲ್ಲಿರುವ ಸರ್ಕಾರವೂ ಬೆಂಬಲಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಈ ನಿಟ್ಟಿನಲ್ಲಿ ಕೇಂದ್ರವು ಒಂದು ಹೆಜ್ಜೆ ಮುಂದಿಟ್ಟರೆ ನಾವು ಖಂಡಿತವಾಗಿಯೂ ಬೆಂಬಲಿಸುತ್ತೇವೆ ಎಂದು ತಿಳಿಸಿದ್ದಾರೆ.