ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯ ಗಡಿಭಾಗದಲ್ಲಿ ಜನರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಸಿಗದೇ ನೆರೆಯ ಮಹಾರಾಷ್ಟ್ರದ ಮೀರಜ್ ಸಾಂಗಲಿಗೆ ಹೋಗಬೇಕಾದ ಸ್ಥಿತಿ ಎದುರಾಗಿದೆ. ಇದನ್ನ ತಪ್ಪಿಸುವ ಸಲುವಾಗಿ ಕಳೆದ 7 ವರ್ಷಗಳ ಹಿಂದೆ ಆಸ್ಪತ್ರೆಯೊಂದರ (Hospital) ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಮಂದಗತಿಯಿಂದ ಸಾಗಿದ್ದ ಕಾಮಗಾರಿ ಸದ್ಯ ಬಹುತೇಕ ಪೂರ್ಣಗೊಂಡಿದೆ. ಆದರೆ ಉದ್ಘಾಟನೆ ಭಾಗ್ಯ ಕಂಡಿಲ್ಲ.
Advertisement
ಬೆಳಗಾವಿ ಜಿಲ್ಲೆ ಚಿಕ್ಕೋಡಿಯ (Chikkodi) ಬಾಣಂತಿ ಕೋಡಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಈ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾಮಗಾರಿ ಆರಂಭವಾಗಿ 7 ವರ್ಷ ಕಳೆದಿದ್ದು, ಇತ್ತೀಚೆಗೆ ಬಹುತೇಕ ಪೂರ್ಣಗೊಂಡಿದೆ. ಆದ್ರೆ ಜನರು ಉದ್ಘಾಟನೆಗೆ ಇನ್ನೆಷ್ಟು ದಿನ ಕಾಯಬೇಕು ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಸಿಎಂ ಭೇಟಿಯಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಸ್ಥರು – ಸಿಐಡಿ ತನಿಖೆಗೆ ಮನವಿ
Advertisement
Advertisement
ಚಿಕ್ಕೋಡಿ ಉಪವಿಭಾಗದಲ್ಲಿ ಸೂಕ್ತ ಸರ್ಕಾರಿ ಆಸ್ಪತ್ರೆಗಳಿಲ್ಲದ (Hospitals) ಕಾರಣ ಜನರು ಮಹಾರಾಷ್ಟ್ರದ ಮೀರಜ್ ಸಾಂಗಲಿಯ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಾರೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ಚಿಕ್ಕೋಡಿಯಲ್ಲಿ ಸುಸಜ್ಜಿತ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡುವಂತೆ ಸಾಕಷ್ಟು ಆಗ್ರಹ ಕೇಳಿ ಬಂದಿತ್ತು. ಹಾಗಾಗಿ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರ ಸತತ ಪ್ರಯತ್ನದಿಂದ 100 ಹಾಸಿಗೆಗಳನ್ನೊಳಗೊಂಡ ಆಸ್ಪತ್ರೆ ನಿರ್ಮಾಣ ಮಾಡಲು ಅನುಮೋದನೆ ಸಿಕ್ಕಿತು. ಇದೀಗ 7 ವರ್ಷಗಳ ನಂತರ ಆಸ್ಪತ್ರೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಉದ್ಘಾಟನೆ ಭಾಗ್ಯ ಮಾತ್ರ ಕಂಡಿಲ್ಲ. ಇದರಿಂದ ಜನರು ಕಂಗಾಲಾಗಿದ್ದಾರೆ. ಕೆಲವರಂತೂ ಖಾಸಗಿ ಆಸ್ಪತ್ರೆಗಳಿಗೆ ಹಣ ಸುರಿದು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಕುಟುಂಬ ನಿರ್ವಹಣೆಗೂ ಹೆಣಗಾಡುತ್ತಿದ್ದಾರೆ. ಹಾಗಾಗಿ ಶೀಘ್ರದಲ್ಲೇ ಆಸ್ಪತ್ರೆ ಉದ್ಘಾಟನೆ ಮಾಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾಳೆ ಸಿಎಂ ಅಥಣಿ ಕ್ಷೇತ್ರ ಪ್ರವಾಸ – ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Advertisement
ಈ ಕುರಿತು ಮಾತನಾಡಿರುವ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಂತೋಷ್ ಕೊಣ್ಣೂರಿ, ಸಾರ್ವಜನಿಕ ಆಸ್ಪತ್ರೆ ಚಿಕ್ಕೋಡಿಯಿಂದ ಹೊಸದಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ 2015ರಿಂದ ಆರಂಭವಾಗಿದ್ದು ಈವರೆಗೂ ಪೂರ್ಣಗೊಂಡಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ವಿಳಂಬವಾಗಿತ್ತು. ಬಳಿಕ ಮತ್ತೆ ಕಟ್ಟಡ ಕಾಮಗಾರಿ ಶುರುವಾಯಿತು. ಇನ್ನೊಂದು ತಿಂಗಳಲ್ಲಿ ಆಸ್ಪತ್ರೆ ಉದ್ಘಾಟನೆ ಮಾಡುವ ಚಿಂತನೆ ಇದೆ. ಕಟ್ಟಡ ಕಾಮಗಾರಿ ಮುಗಿದಿದೆ. ಇಂಟಿರಿಯರ್ ವರ್ಕ್ ನಡೆದಿದೆ. ಈಗಾಗಲೇ 80% ವೈದ್ಯಕೀಯ ಉಪಕರಣಗಳು ಸಹ ಬಂದಿವೆ. ಆಸ್ಪತ್ರೆಗೆ ಬೇಕಾದಂತಹ ವೈದ್ಯಕೀಯ ಸಿಬ್ಬಂದಿ ಸಹ ನೇಮಕ ಮಾಡಿಕೊಳ್ಳಲಾಗಿದೆ. ಹೈಟೆಕ್ ಶಸ್ತ್ರಚಿಕಿತ್ಸಾ ಘಟಕ, ಲಿಫ್ಟ್ ಈ ಎರಡು ಕೆಲಸ ಆದರೆ, ಸಾರ್ವಜನಿಕ ಸೇವೆಗೆ ಆಸ್ಪತ್ರೆ ಮುಕ್ತಗೊಳ್ಳಲಿದೆ ಎಂದು ತಿಳಿಸಿದ್ದಾರೆ.
Web Stories