ಬೆಂಗಳೂರು: ನಗರದಲ್ಲಿ ಸಾಮಾನ್ಯವಾಗಿ ಫೆಬ್ರವರಿಯಲ್ಲಿ 25 ರಿಂದ 26 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿತ್ತು. ಆದರೆ ಈ ಬಾರಿ 30 ಡಿಗ್ರಿಗೂ ಅಧಿಕ ಉಷ್ಣಾಂಶ ದಾಖಲಾಗಿದೆ.
ಈ ಬಾರಿ ಬೇಸಿಗೆಗೂ ಮುನ್ನವೇ ವಾಡಿಕೆಗಿಂತ ಮೂರ್ನಾಲ್ಕು ಡಿಗ್ರಿ ತಾಪಮಾನ ಹೆಚ್ಚಳವಾಗಿದೆ. ಕಳೆದ ಒಂದು ವಾರದಿಂದ 30 ಡಿಗ್ರಿ ಆಸುಪಾಸಿನಲ್ಲಿರುವ ಉಷ್ಣಾಂಶ ದಾಖಲಾಗಿದ್ದು, ಚಳಿಗಾಲ ಮುಕ್ತಾಯಕ್ಕೂ ಮುನ್ನವೇ ಬೆಂಗಳೂರಿಗರಿಗೆ (Bengaluru) ಬಿಸಿಲೇಟು ತಟ್ಟಿದೆ.ಇದನ್ನೂ ಓದಿ: ನಿರ್ದೇಶಕ ರಾಜ್ ಜೊತೆ ಸಮಂತಾ ಡೇಟಿಂಗ್?- ಚರ್ಚೆಗೆ ಗ್ರಾಸವಾಯ್ತು ನಟಿಯ ಪೋಸ್ಟ್
Advertisement
Advertisement
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಷ್ಣಾಂಶದಲ್ಲಿ ಏರಿಕೆಯಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಈಗಾಗಲೇ 32-34 ಡಿಗ್ರಿ ತಾಪಮಾನ ದಾಖಲಾಗಿದೆ.
Advertisement
ಬೆಂಗಳೂರು ನಗರ ಭಾನುವಾರ ಗರಿಷ್ಟ 32.5 ಡಿಗ್ರಿ ಸೆಲ್ಸಿಯಸ್, ಕನಿಷ್ಟ 16.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾದರೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಟ 32.9 ಡಿಗ್ರಿ ಸೆಲ್ಸಿಯಸ್, ಕನಿಷ್ಟ 16.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಹೆಚ್‌ಎಎಲ್ ಏರ್‌ಪೋರ್ಟ್ನಲ್ಲಿ ಗರಿಷ್ಟ 31.5 ಡಿಗ್ರಿ ಸೆಲ್ಸಿಯಸ್, ಕನಿಷ್ಟ 16 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ಇದನ್ನೂ ಓದಿ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆ