ನವದೆಹಲಿ: ಬ್ರಿಟಿಷರಿಗೆ ಕಾಂಗ್ರೆಸ್ ಧ್ವನಿಯನ್ನು ಹತ್ತಿಕ್ಕಲಾಗಲಿಲ್ಲ, ಇನ್ನೂ ಈ ಆಡಳಿತ ಪಕ್ಷದಿಂದ ಏನು ಸಾಧ್ಯ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಬಿಜೆಪಿಗೆ ಟಾಂಗ್ ಕೊಟ್ಟರು.
Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಇಂದು ರಾಹುಲ್ ಗಾಂಧಿ ಇಡಿ ಕಚೇರಿಗೆ ಹಾಜರಾಗುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಣದೀಪ್ ಸುರ್ಜೆವಾಲಾ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದು, ‘ಸತ್ಯ ಕಾ ಸಂಗ್ರಾಮ್’ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿಯೇ ಮುಂದುವರಿಯುತ್ತೆ. ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಬ್ರಿಟಿಷರಿಗೆ ಕಾಂಗ್ರೆಸ್ ಧ್ವನಿಯನ್ನು ಹತ್ತಿಕ್ಕಲಾಗಲಿಲ್ಲ. ಇನ್ನೂ ಈ ಆಡಳಿತ ಪಕ್ಷದಿಂದ ಏನು ಸಾಧ್ಯವಾಗುತ್ತೆ ಎಂದು ಕಿಡಿಕಾರಿದರು.
Advertisement
Advertisement
ರಾಹುಲ್ ಗಾಂಧಿ ನೇತೃತ್ವದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಕಚೇರಿಗೆ ಪಕ್ಷದ ಕಾರ್ಯಕರ್ತರು ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ನಾವು ಸಂವಿಧಾನದ ರಕ್ಷಕರು, ನಾವು ಯಾರಿಗೂ ತಲೆಬಾಗುವುದಿಲ್ಲ, ಯಾರಿಗೂ ಹೆದರುವುದಿಲ್ಲ. ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಿರುವುದನ್ನು ನೋಡಿದರೆ ಮೋದಿ ಸರ್ಕಾರವನ್ನು ಕಾಂಗ್ರೆಸ್ ನಡುಗಿಸಿದೆ ಎಂಬುದು ಸಾಬೀತಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: UP ಸಿಎಂ ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ: ಓವೈಸಿ ಕಿಡಿ
Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಇಂದು ಇಡಿ ಮುಂದೆ ಹಾಜರಾಗುವ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ಮೆರವಣೆಗೆ ಕೈಗೊಂಡಿದ್ದಾರೆ. ಈ ಹಿನ್ನೆಲೆ ದೆಹಲಿ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
#WATCH | Delhi Police detain Congress leaders amid sloganeering in support of party leader Rahul Gandhi ahead of his appearance before ED today in the National Herald case.
Visuals from outside AICC headquarters, Delhi pic.twitter.com/3MijfyFO4n
— ANI (@ANI) June 13, 2022
ಏನಿದು ಪ್ರಕರಣ?
2012 ರಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫೆರ್ನಾಂಡಿಸ್, ಸುಮನ್ ದುಬೆ ಮತ್ತು ಸ್ಯಾಮ್ ಪಿತ್ರೋಡಾ ವಿರುದ್ಧ ದೂರು ಸಲ್ಲಿಸಿದ್ದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಪಡೆಯುವಲ್ಲಿ ವಂಚನೆ ಮಾಡಲಾಗಿದ್ದು, ಇಲ್ಲಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ತನಿಖೆಗೆ ಮನವಿ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸತತ 8 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿ ಹಲವು ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿದ್ದರು. ಈ ಹಿನ್ನೆಲೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು.