– ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ ಕೆಆರ್‌ಎಸ್ (KRS) ಅಣೆಕಟ್ಟೆ ಭರ್ತಿಯಾಗಿದೆ. ಇತ್ತ ತಮಿಳುನಾಡಿಗೆ (Tamil Nadu) ಕೊಡಬೇಕಾದ ಕೋಟಾದ ನೀರನ್ನು ಕೂಡ ಕೊಟ್ಟಾಗಿದೆ. ಜೊತೆಗೆ ಈಗಲೂ ಸಹ ತಮಿಳುನಾಡಿಗೆ ನೀರು ಹೋಗುತ್ತಿದೆ. ಯಾವುದೇ ತೊಂದರೆ ಇಲ್ಲದೇ ಬೆಳೆ ಬೆಳೆಯಬಹುದು ಎಂದು ಕನಸು ಕಟ್ಟಿಕೊಂಡಿದ್ದ ರೈತರಿಗೆ ಮತ್ತೆ ಕಾವೇರಿ ಶಾಕ್ ಎದುರಾಗಿದೆ.
Advertisement
ಕಳೆದ 20 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಇದರಿಂದ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣವಾಗಿ ಭರ್ತಿಯಾಗಿದೆ. ಜೊತೆಗೆ ಕೆಆರ್‌ಎಸ್ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಟ್ಟಿರುವ ಕಾರಣ ಕಾವೇರಿ ಮೈದುಂಬಿ ಹರಿದು ತಮಿಳುನಾಡಿನ ಮೆಟ್ಟೂರು ಡ್ಯಾಂನ ಒಡಲು ಸೇರಿದ್ದಾಳೆ. ಹೀಗಿರುವಾಗ ಕೆಆರ್‌ಎಸ್ ಡ್ಯಾಂನ ನಂಬಿರುವ ಕಾರಣ ಕಳೆದ ವರ್ಷ ಬೆಳೆ ಇಲ್ಲದೆ ಕಂಗಾಲಾಗಿದ್ದ ರೈತರು (Farmers) ಈ ಬಾರಿ ಯಾವುದೇ ಅಡ್ಡಿ ಆತಂಕಗಳು ಇಲ್ಲದೆ ಬೆಳೆ ಬೆಳೆಯಬಹುದು ಎಂಬ ಸಂತಸದಲ್ಲಿದ್ದರು. ಆದರೆ ಆ ಖುಷಿಗೆ ಸರ್ಕಾರ ಬ್ರೇಕ್ ಹಾಕಿದೆ. ಇದನ್ನೂ ಓದಿ: ಇಷ್ಟೆಲ್ಲಾ ಬೆಳವಣಿಗೆ ಆಗ್ತಿದ್ರು ಸುಮ್ಮನಿರೋದ್ಯಾಕೆ? ಭ್ರಷ್ಟ ಬಿಜೆಪಿ ನಾಯಕರನ್ನು ಜೈಲಿಗೆ ಹಾಕಿ – ಎಐಸಿಸಿಯಿಂದ ಸಿಎಂ, ಡಿಸಿಎಂಗೆ ಕ್ಲಾಸ್
Advertisement
Advertisement
ಕಳೆದ ವರ್ಷ ಸರಿಯಾದ ಪ್ರಮಾಣದ ಮಳೆ ಬೀಳದ ಕಾರಣ ಕಾವೇರಿ ಕೊಳ್ಳದ ರೈತರು ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಈ ಬಾರಿ ಕನ್ನಂಬಾಡಿ ಕಟ್ಟೆ ಅವಧಿಗೂ ಮುನ್ನವೇ ಭರ್ತಿಯಾಗಿದೆ. ಹೀಗಾಗಿ ರೈತರು ಉತ್ತಮ ಬೆಳೆ ಬೆಳೆಯಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಇದೀಗ ಸರ್ಕಾರ ಕೆಆರ್‌ಎಸ್ ಡ್ಯಾಂನಿಂದ ಕಟ್ಟು ಪದ್ಧತಿಯಲ್ಲಿ ನಾಲೆಗಳಿಗೆ ನೀರು ಬಿಡುವ ತೀರ್ಮಾನಕ್ಕೆ ಬಂದಿದೆ. ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಆಗಸ್ಟ್ 8 ರಿಂದ ಪದ್ಧತಿಯಂತೆ ನೀರು ಹರಿಸಲು ತೀರ್ಮಾನ ಮಾಡಲಿದೆ. ನಾಲ್ಕು ತಿಂಗಳ ಕಾಲ ತಿಂಗಳಲ್ಲಿ 18 ದಿನಗಳು ಮಾತ್ರ ನೀರು ಹರಿಸಲಾಗುತ್ತಿದೆ ಎಂದು ಕಾವೇರಿ ನಿಗಮ ಆದೇಶ ಹೊರಡಿಸಿದೆ. ಇದನ್ನೂ ಓದಿ: 45 ದಿನದಿಂದ ಕರೆಂಟ್ ಇಲ್ಲದೆ ಕತ್ತಲಲ್ಲಿ ಕಾಫಿನಾಡ ಅತ್ತಿಗುಂಡಿ ಗ್ರಾಮ
Advertisement
ಇತ್ತ ಸಚಿವ ಚಲುವರಾಯಸ್ವಾಮಿ ನೇತೃತ್ವದ ಸಭೆಯಲ್ಲಿ ಇಂತಹದೊಂದು ನಿರ್ಧಾರ ತೆಗೆದುಕೊಂಡು, ಈಗಾಗಲೇ ಘೋಷಣೆ ಮಾಡಲಾಗಿದೆ. ಅತ್ತ ಕಾಂಗ್ರೆಸ್ ಪಕ್ಷದ ಶಾಸಕ ಗಣಿಗ ರವಿಕುಮಾರ್ ಇದಕ್ಕೆ ವಿರೋಧ ವ್ಯಕ್ತಪಡಿಸಿ ರೈತರ ಪರ ನಿಂತಿದ್ದಾರೆ. ಈ ವರ್ಷ ಕೆಆರ್‌ಎಸ್ ಡ್ಯಾಂನಲ್ಲಿ ನೀರಿದ್ದರೂ ರೈತರು ಬಾಯಿಗೆ ಮಣ್ಣು ಹಾಕಿಕೊಳ್ಳಬೇಕಾ? ಕಟ್ಟು ಪದ್ಧತಿಯಲ್ಲಿ ನೀರು ಬಿಡಲು ನಿರ್ಧಾರ ಮಾಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಚಿವರ ಕಾರ್ಯವೈಖರಿಗೆ ಹೈಕಮಾಂಡ್ ಗರಂ – ದಸರಾ ಬಳಿಕ ಸಂಪುಟ ಪುನಾರಚನೆ ಆಗುತ್ತಾ?
ಒಟ್ಟಾರೆ ವರುಣನ ಕೃಪೆಯಿಂದ ಅವಧಿಗೂ ಮುನ್ನವೇ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿದೆ. ಇದೀಗ ಸರ್ಕಾರ ಯಾವ ಪೂರ್ವಗ್ರಹ ಪೀಡಿತವಾಗಿ ಕಟ್ಟು ಪದ್ಧತಿಯಲ್ಲಿ ನಾಲೆಗಳಿಗೆ ನೀರು ಹರಿಸುತ್ತೇವೆ ಎಂದು ಹೇಳಿದೆ ಗೊತ್ತಿಲ್ಲ. ಸರ್ಕಾರದ ಈ ನಿರ್ಧಾರದ ವಿರುದ್ಧ ರೈತಾಪಿ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ರಾಜಭವನವನ್ನು ಅತಿಹೆಚ್ಚು ದುರುಪಯೋಗ ಪಡೆಸಿಕೊಂಡ ಶ್ರೇಯಸ್ಸು ಕಾಂಗ್ರೆಸ್ಸಿಗಿದೆ: ಬೊಮ್ಮಾಯಿ