ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದರೆ ಜೈಲಿನಿಂದಲೇ ಕೆಲಸ ಮಾಡಲು ನ್ಯಾಯಾಲಯದ ಅನುಮತಿ ಪಡೆಯುವುದಾಗಿ ಆಮ್ ಆದ್ಮಿ ಪಕ್ಷ (AAP) ಹೇಳಿದೆ.
ಪಕ್ಷದ ಶಾಸಕರು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದರೂ ಜೈಲಿನಿಂದಲೇ ಅವರು ಸರ್ಕಾರವನ್ನು ನಡೆಸಬೇಕು ಎಂದು ಹೇಳಿದ್ದಾರೆ. ನಾವು ಜನರ ಪರವಾಗಿ ಹೋಗುತ್ತಿದ್ದೇವೆ. ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ ವಿರುದ್ಧ ದೌರ್ಜನ್ಯ ನಡೆಯುತ್ತಿದೆ ಎಂದು ಜನರು ಹೇಳುತ್ತಿದ್ದಾರೆ. ಇದಕ್ಕಾಗಿಯೇ ಕೇಜ್ರಿವಾಲ್ ಜೈಲಿಗೆ ಹೋದರೂ ಅವರು ಸಿಎಂ ಆಗಿಯೇ ಉಳಿಯಬೇಕು ಎಂದು ದೆಹಲಿ ಸಚಿವೆ ಅತಿಶಿ (Atishi) ಹೇಳಿದ್ದಾರೆ.
Advertisement
Advertisement
ದೆಹಲಿಯ ಜನರು ಕೇಜ್ರಿವಾಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ಅವರು ಸಿಎಂ ಆಗಿಯೇ ಉಳಿಯಬೇಕು. ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಮತ್ತು ಕ್ಯಾಬಿನೆಟ್ ಸಭೆಯನ್ನು ಜೈಲಿನಲ್ಲಿಯೇ ನಡೆಸಲು ಅನುಮತಿ ಕೇಳುತ್ತೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಮೊದಲ ಬಾರಿಗೆ ವಿವಿ ಚುನಾವಣೆಯಲ್ಲಿ ಎಬಿವಿಪಿಯಿಂದ ಮುಸ್ಲಿಂ ವಿದ್ಯಾರ್ಥಿನಿ ಕಣಕ್ಕೆ
Advertisement
ದೆಹಲಿಯ ಮದ್ಯ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2 ರಂದು ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆದಿತ್ತು. ಆದರೆ ಸಿಎಂ ಇಡಿ ಕಚೇರಿಗೆ ಹಾಜರಾಗದೇ ಸಮನ್ಸ್ ಅನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು. ಇದಾದ ಬಳಿಕ ಅವರನ್ನು ಶೀಘ್ರದಲ್ಲಿಯೇ ಬಂಧಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಈ ಹಿಂದೆ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ವಿಚಾರಣೆ ನಡೆಸಿತ್ತು.
Advertisement
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇದೇ ಪ್ರಕರಣದಲ್ಲಿ ಫೆಬ್ರವರಿಯಲ್ಲಿ ಬಂಧಿಸಲಾಗಿತ್ತು. ಬಂಧನದ ಬಳಿಕ ಅವರು ಕ್ಯಾಬಿನೆಟ್ ಹುದ್ದೆಯಿಂದ ಕೆಳಗಿಳಿದಿದ್ದರು. ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ. ಕಳೆದ ವಾರ ಸುಪ್ರೀಂ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು. ಇದನ್ನೂ ಓದಿ: ಕೈಕೊಟ್ಟ EVM; ವೋಟ್ ಮಾಡಲಾಗದೇ ಮಿಜೋರಾಂ ಸಿಎಂ ವಾಪಸ್