ಬೆಳಗಾವಿ: ನನಗೆ ಗುಂಡು ಹೊಡೆದ್ರೂ ಸರಿ, ವಿಧಾನಸೌಧದಲ್ಲಿ ಟಿಪ್ಪು (Tipu Sultan) ಭಾವಚಿತ್ರ ಅಳವಡಿಸಲು ಬಿಡಲ್ಲ ಎಂದು ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಗುಡುಗಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ‘ಪಬ್ಲಿಕ್ ಟಿವಿ’ (Public TV) ಜೊತೆಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳಲ್ಲಿ ಅಳವಡಿಸಿರುವ ಟಿಪ್ಪು ಭಾವಚಿತ್ರ ತೆಗೆಯಬೇಕು ಎಂದು ಸದನದಲ್ಲಿ ಆಗ್ರಹಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಮೈಯಲ್ಲಿ ಭಯೋತ್ಪಾದಕರ ವಂಶದ ರಕ್ತ ಹರಿಯುತ್ತಿದೆ – ಈಶ್ವರಪ್ಪ ವಿವಾದಾತ್ಮಕ ಹೇಳಿಕೆ
ಸುವರ್ಣಸೌಧದಲ್ಲಿ ಸಾವರ್ಕರ್ (VD Savarkar) ಭಾವಚಿತ್ರ ಅಳವಡಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಸಾವರ್ಕರ್ ಭಾವಚಿತ್ರ ಅಳವಡಿಸಿದ್ದಕ್ಕೆ ಕಾಂಗ್ರೆಸ್‌ನವರು (Congress) ಪ್ರತಿಭಟನೆ ಮಾಡಿ ಹೋದರು. ಅವರದ್ದು ಅಷ್ಟೆ. ಸಿದ್ದರಾಮಯ್ಯ (Siddaramaiah) ಅವರು ಗಾಂಧಿ ಹತ್ಯೆಯಲ್ಲಿ ಸಾವರ್ಕರ್ ಪಾತ್ರ ಇದೆ ಎಂದು ಆರೋಪ ಮಾಡ್ತಿದ್ದಾರೆ. ಹಾಗಾದ್ರೆ ಕಾಂಗ್ರೆಸ್‌ನವರು ಸುಭಾಷ್ ಚಂದ್ರಬೋಸ್ ಹಾಗೂ ಲಾಲ್ ಬಹದ್ದೂರ್ ಅವರ ಸಾವಿನ ವಿಷಯ ಬಹಿರಂಗಪಡಿಸಲಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಓವೈಸಿ ಪಕ್ಷದ ನಾಯಕನ ಕಚೇರಿಯಲ್ಲೇ ವಿದ್ಯಾರ್ಥಿ ಕೊಲೆ
ನೆಹರೂ ಅವರ ಭಾವಚಿತ್ರವನ್ನು ಸುವರ್ಣಸೌಧದಲ್ಲಿ ಇಡಲು ನಮಗೇನೂ ಅಭ್ಯಂತರವಿಲ್ಲ. ಆದ್ರೆ ಟಿಪ್ಪು ಸುಲ್ತಾನ್ ಬಗ್ಗೆ ವಿರೋಧವಿದೆ ಎಂದರು. ಇನ್ನೂ ಎಂಇಎಸ್ ಮುಗಿದು ಹೋದ ಅಧ್ಯಾಯವಾಗಿದೆ. ಡಿಸೆಂಬರ್ 22 ರೊಳಗೆ ಪಂಚಮಸಾಲಿ ಮೀಸಲಾತಿ ಘೋಷಣೆ ಆಗುತ್ತೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.