ಮಂಡ್ಯ: ವಿಂಗ್ ಕಮಾಂಡರ್ (Wing Commander) ಯುವಕನ ಮೇಲೆ ಹಲ್ಲೆ ವಿಚಾರವಾಗಿ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ. ವಿಂಗ್ ಕಮಾಂಡರ್ ಆಗಲಿ ಯಾರೇ ಆಗಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಅದ್ದಿಹಳ್ಳಿ ಹೆಲಿಪ್ಯಾಡ್‌ನಲ್ಲಿ ವಿಂಗ್ ಕಮಾಂಡರ್ ಯುವಕನ ಮೇಲೆ ಹಲ್ಲೆ ವಿಚಾರಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಈಗಾಗಲೇ ಈ ಪ್ರಕರಣ ಸಂಬಂಧ ದೂರು ದಾಖಲಾಗಿದೆ. ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಆಗುತ್ತದೆ. ವಿಂಗ್ ಕಮಾಂಡರ್ ತಪ್ಪು ಮಾಡಿದ್ರೂ ತಪ್ಪೇ. ಸೂಕ್ತ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ಸಂಸತ್ತೇ ಸರ್ವೋಚ್ಚ, ಚುನಾಯಿತ ಪ್ರತಿನಿಧಿಗಳು ಸಾಂವಿಧಾನಿಕ ವಿಷಯದ ಅಲ್ಟಿಮೇಟ್ ಮಾಸ್ಟರ್ಸ್: ಧನಕರ್
ರಾಜ್ಯದಲ್ಲಿ ಹಿಂದಿ ಹೇರಿಕೆಗೆ ನಾವು ಬಿಡಲ್ಲ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಒಪ್ಪಲ್ಲ, ನಮ್ಮ ವಿರೋಧವಿದೆ. ರಾಜ್ಯದಲ್ಲಿ ದ್ವಿಭಾಷ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಮತ್ತು ಇಂಗ್ಲಿಷ್ ಕಲಿಯುವ ಅವಕಾಶ ಇದೆ. ನಮ್ಮಲ್ಲಿ ತ್ರಿಭಾಷ ಸೂತ್ರವಿಲ್ಲ. ಕನ್ನಡ, ಇಂಗ್ಲಿಷ್ ಮಾತ್ರ ಕಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಚಾಕು ಇರಿದ ಪ್ರಿಯಕರ