ರಾಯಚೂರು: ನಾನು ಜೆಡಿಎಸ್‌ನಲ್ಲಿದ್ದರೂ ಪಕ್ಷದಿಂದ 1 ರೂಪಾಯಿ ತಗೋತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ರಾಯಚೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ `ಬೇಡಿದವನಲ್ಲದೇ ಬಸವನಾದನಯ್ಯ’ ಎನ್ನುವಂತಾಗಿದೆ ನನ್ನ ಪರಿಸ್ಥಿತಿ. ಕಾರು ನನ್ನದು, ಡಿಸೇಲ್ ನನ್ನದು. ಊಟ ದಾಸೋಹದಲ್ಲಿ ನಡೆಯುತ್ತದೆ. ಆದರೆ ಪಕ್ಷದಿಂದ 1 ರೂಪಾಯಿಯೂ ತೆಗೆದುಕೊಳ್ಳುವುದಿಲ್ಲ. ನನಗೆ ಕುಡಿಯುವ ಅಭ್ಯಾಸವಿಲ್ಲ, ನಶೆ ಹಾಕ್ತಿದ್ದೆ ಅದನ್ನೂ ಈಗ ಬಿಟ್ಟಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾದೇಶಿಕ ಭಾಷಾ ಮಹತ್ವ ಪ್ರಧಾನಿ ಮೋದಿ ಮಾತಿಗೆ ಸಂತಸ ವ್ಯಕ್ತ ಪಡಿಸಿದ ಕಿಚ್ಚ ಸುದೀಪ್
Advertisement
Advertisement
3 ತಿಂಗಳು ಕಾಯಿರಿ: 2023ರ ಚುನಾವಣೆಯ ನಂತರ ರಾಜ್ಯದಲ್ಲಿ ಜೆಡಿಎಸ್ ಪಕ್ಷ ನಂಬರ್ 1 ಸ್ಥಾನಕ್ಕೆ ಬರಲಿದೆ. ಬಿಜೆಪಿ 2 ಹಾಗೂ ಕಾಂಗ್ರೆಸ್ 3ನೇ ಸ್ಥಾನದಲ್ಲಿರಲಿದೆ. ಇನ್ನು 3 ತಿಂಗಳಲ್ಲಿ ಹಲವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದರು.
Advertisement
ಕಾಂಗ್ರೆಸ್ ಒಡೆದ ಮನೆಯಾಗಿದೆ ಬಿಜೆಪಿ 40, ಕಾಂಗ್ರೆಸ್ 20 ಪರ್ಸೆಂಟ್ ಕಮಿಷನ್‌ಗಾಗಿ ಜಗಳವಾಡುತ್ತಿವೆ. ಈಗಾಗಲೇ ಕಾಂಗ್ರೆಸ್, ಬಿಜೆಪಿಯ ದುರಾಡಳಿತದಿಂದಾಗಿ ಜನ ಬೇಸತ್ತಿದ್ದು, ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದತ್ತಪೀಠ ವಿವಾದಿತ ಸ್ಥಳದಲ್ಲಿ ನಮಾಜ್?
Advertisement
ಸಂಪೂರ್ಣ ಬಹುಮತ ನೀಡಿದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು 4 ಲಕ್ಷ ಕೋಟಿ ವೆಚ್ಚದಲ್ಲಿ ನೀರಾವರಿ ಯೋಜನೆ ಪೂರ್ಣಗೊಳಿಸುವ ಸಂಕಲ್ಪ ಮಾಡಿದ್ದಾರೆ. ಕೊಟ್ಟ ಮಾತಿನಂತೆ ಕುಮಾರಸ್ವಾಮಿ ಕಡಿಮೆ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದಾರೆ ಎಂದು ಹೊಗಳಿದರು.