ಬೆಂಗಳೂರು: ನಾವು ಸದನದ ಒಳಗೆ ಬಹುಮತ ಸಾಬೀತು ಪಡಿಸಿ ತೋರಿಸುತ್ತೇವೆ ಅಂತ ಶಾಸಕ ಶ್ರೀರಾಮುಲು ಸವಾಲೆಸೆದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವೂ ಊಹಿಸಲೂ ಕೂಡ ಸಾಧ್ಯವಿಲ್ಲ, ಅಷ್ಟು ಶಾಸಕರು ಬಿಜೆಪಿ ತೆಕ್ಕೆಗೆ ಬರಲಿದ್ದಾರೆ. ಪಕ್ಷೇತರ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ. ಬೇರೆ ಪಕ್ಷಗಳ ಶಾಸಕರೂ ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ ಅಂತ ಮಾಹಿತಿಯೊಂದನ್ನು ಹೊರಹಾಕಿದ್ದಾರೆ.
Advertisement
ಚುನಾವಣಾ ಫಲಿತಾಂಶಕ್ಕೂ ಮೊದಲೇ ಮೇ 17ರಂದು ಪ್ರಮಾಣ ವಚನ ಸ್ವೀಕಾರ ಮಾಡಿಯೇ ಮಾಡುತ್ತೇನೆ ಎಂದಿದ್ದ ಬಿಎಸ್ ಯಡಿಯೂರಪ್ಪ ಅವರು ಕೊನೆಗೂ ಇಂದು ಪ್ರಮಾಣ ವಚನ ಸ್ವೀಕರಿಸಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ. ಈ ಬೆನ್ನಲ್ಲೇ ಇತ್ತ ರೆಸಾರ್ಟ್ ಗೆ ತೆರಳಿದ್ದ ಕಾಂಗ್ರೆಸ್- ಜೆಡಿಎಸ್ ಶಾಸಕರು ಹಾಗೂ ಮುಖಂಡರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.
Advertisement
Independent MLAs hamare touch mein hain, kaam ho jaega: BJP MLA B. Sriramulu on being asked about proving majority in floor test #Karnataka pic.twitter.com/7p0h48oHg9
— ANI (@ANI) May 17, 2018
Advertisement
ಈ ಮಧ್ಯೆ ಬಳ್ಳಾರಿಯ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ನಾಯಕರ ಕೈಗೆ ಸಿಗುತ್ತಿಲ್ಲ, ಇವರ ಜೊತೆ ಇನ್ನೊಬ್ಬ ಶಾಸಕ ಪ್ರತಾಪ್ ಗೌಡ ಕೂಡ ನಾಟ್ ರೀಚೆಬಲ್ ಆಗಿದ್ದಾರೆ. ಈ ಬೆಳವಣಿಗೆ ಕಾಂಗ್ರೆಸ್ ಮುಖಂಡರಲ್ಲಿ ಆತಂಕಕ್ಕೀಡು ಮಾಡಿದೆ. ಈ ಬಗೆ ಕುಮಾರಸ್ವಾಮಿ ಕಿಡಿಕಾರಿದ್ದು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸಂವಿಧಾನದ ವಿರುದ್ಧ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲ ವಜೂಭಾಯಿ ವಾಲಾರವರ ಮೇಲೆ ಕೇಂದ್ರ ಒತ್ತಡ ಹಾಕಿದೆ ಅಂತ ಕೇಂದ್ರದ ವಿರುದ್ಧ ಗಂಭೀರ ಆರೋಪ ಮಾಡಿದ್ರು.
Advertisement
2008 ರಿಂದ 2013ರಲ್ಲಿ ಬಿಜೆಪಿ ಮಾಡಿದ ಹಗರಣಗಳನ್ನು ನಾಡಿನ ಜನತೆ ನೆನಪು ಮಾಡಿಕೊಳ್ಳಬೇಕಿದೆ. ಭ್ರಷ್ಟಾಚಾರ ನಡೆಸುವುದು ಬಿಜೆಪಿಯ ಹುಟ್ಟುಗುಣ ಅದು ಅವರನ್ನು ಬಿಟ್ಟು ಹೋಗಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಉಳಿಸುವ ಸಲುವಾಗಿ ನಾಡಿನ ಜನರ ಬೀದಿಗಿಳಿದು ಶಾಂತಿಯುತ ಹೋರಾಟ ನಡೆಸಬೇಕೆಂದು ಇದೇ ವೇಳೆ ಹೆಚ್‍ಡಿಕೆ ಕರೆಕೊಟ್ಟಿದ್ದರು.
Modi govt is misusing institutions of central govt. I know they are threatening MLAs. Anand Singh (Cong MLA) told 'they are using ED, I had a case in ED & they are going to screw me. I'm sorry I have to protect my interest,' another Cong MLA who spoke to Singh told me-Kumaraswamy pic.twitter.com/QrzW8eHeAR
— ANI (@ANI) May 17, 2018