DistrictsKarnatakaLatestMain PostRaichur

ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಸಂಜೆ ನಿರ್ಧಾರ: ಸಿಎಂ ಬೊಮ್ಮಾಯಿ

ರಾಯಚೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಸಂಜೆ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ರಾಯಚೂರು ಕೃಷಿ ವಿವಿಯಲ್ಲಿ ಆಯೋಜಿಸಿರುವ ಸಿರಿಧಾನ್ಯ ಮೇಳಕ್ಕೆ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಿದ್ದರು. ಈ ವೇಳೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಕುರಿತಂತೆ ಉನ್ನತ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ನಡೆಯುತ್ತಿದೆ. ನಾನು ಈಗಲೇ ಏನೂ ಹೇಳುವುದಿಲ್ಲ, ಸದ್ಯ ಬೆಂಗಳೂರಿನಲ್ಲಿ ಸಭೆ ನಡೆಯುತ್ತಿದೆ. ಸಂಜೆ ಸಭೆ ಬಳಿಕ ನಾನು ಬೆಂಗಳೂರಿಗೆ ಹೋದ ಮೇಲೆ ಮುಂದಿನದನ್ನು ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ನಂತರ ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತ ರುಪ್ಸಾ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಶಿಕ್ಷಣ ಸಚಿವರು ಆರೋಪದಲ್ಲಿ ಯಾವುದೇ ಹುರುಳಿಲ್ಲ ಅಂತ ಹೇಳಿದ್ದಾರೆ. ನಾನು ಮತ್ತೆ ಅದಕ್ಕೆ ಸ್ಪಷ್ಟೀಕರಣ ಕೊಡುವ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಮೆರಿಕದ ವಿರುದ್ಧ ಬೆಂಗಳೂರಿನಲ್ಲಿ ಚೀನಾ ಕಾರ್ಯಕ್ರಮ – ಸಿದ್ದರಾಮಯ್ಯ, ಮಹಾದೇವಪ್ಪ ಮುಖ್ಯ ಅತಿಥಿ

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿವಾದಾತ್ಮಕ ಹೇಳಿಕೆಗಳ ವಿಚಾರವಾಗಿ ಮಾತನಾಡಿ, ರಾಯಚೂರು ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ತೆಲಂಗಾಣ ಸಿಎಂ ಕೆಸಿಆರ್ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ. ತೆಲಂಗಾಣ ಇನ್ನೂ ಹಿಂದುಳಿದ ಪ್ರದೇಶವಾಗಿದೆ. ಮೊದಲು ಕೆಸಿಆರ್ ತೆಲಂಗಾಣ ಅಭಿವೃದ್ಧಿಗೆ ಮುಂದಾಗಬೇಕು. ಯಾವುದೇ ರಾಜ್ಯಕ್ಕೆ ನಮ್ಮ ಒಂದಿಂಚು ಜಾಗವನ್ನು ನಾವು ಬಿಟ್ಟುಕೊಡುವುದಿಲ್ಲ ಎಂದು ಗುಡುಗಿದ್ದಾರೆ.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತು ಕಳೆದ ಬಾರಿ ದೆಹಲಿಗೆ ಹೋದಾಗ ಕೇಂದ್ರ ಆರೋಗ್ಯ ಸಚಿವರಿಗೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಬಗ್ಗೆ ಮಾತನಾಡಿದ್ದೇನೆ. 371 ಜೆ ಇರುವ ಭಾಗ, ಮಹತ್ವಾಕಾಂಕ್ಷೆ ಜಿಲ್ಲೆ, ಅಪೌಷ್ಟಿಕತೆ ಇರುವ ಜಿಲ್ಲೆಗೆ ಏಮ್ಸ್ ನಂತ ಸಂಸ್ಥೆ ಬೇಕು ಅಂತ ಮನವರಿಕೆ ಮಾಡಿ ಹೇಳಿದ್ದೇನೆ. ಅತೀ ಶೀಘ್ರದಲ್ಲಿ ಒಂದು ನಿರ್ಣಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 54 ವರ್ಷ, ಮಾಡಿರೋದು 164 + ಕಳ್ಳತನ – ಭೂಪನಿಗಿದ್ದಾರೆ ಮೂವರು ಹೆಂಡ್ತಿರು, 7 ಮಕ್ಳು

ತುಮಕೂರಿನ ಶಿರಾ ಬಳಿ ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಬದಲಿ ವ್ಯವಸ್ಥೆ ಮಾಡಿದ್ದೇವೆ. ನಿಮ್ಹಾನ್ಸ್‌ನಲ್ಲಿ ಮೊದಲ ಪ್ರಾಶಸ್ತ್ಯದಲ್ಲಿ ಚಿಕಿತ್ಸೆ ನೀಡಲು ನಿಮ್ಹಾನ್ಸ್‌ ನಿರ್ದೇಶಕರಿಗೆ ತಿಳಿಸಿದ್ದೇನೆ. ಅವರ ಸಂಪೂರ್ಣ ವೆಚ್ಚ ನಾವೇ ಭರಿಸಲಿದ್ದೇವೆ. ಹಿಂದುಳಿದ ಭಾಗದ ಜನ ಗುಳೆ ಹೋಗುವುದನ್ನ ತಪ್ಪಿಸಲು ನೀರಾವರಿ ಅಭಿವೃದ್ಧಿಯಾಗಬೇಕಿದೆ. ಇಲ್ಲಿನ ಇಂಡಸ್ಟ್ರಿ ಸೆಂಟರ್ ವಿಸ್ತರಣೆ ಮಾಡುತ್ತೇವೆ. ಇಲ್ಲಿನ ಜನರಿಗೆ ಹೆಚ್ಚು ಉದ್ಯೋಗ ಸಿಗುವ ದೃಷ್ಟಿಯಲ್ಲಿ ಗಾರ್ಮೆಂಟ್ ಉದ್ಯಮ ಬೆಳೆಯಬೇಕಿದೆ. ಬಳ್ಳಾರಿ, ರಾಯಚೂರು, ಕಲಬುರಗಿ ವಿಶೇಷ ಅಭಿವೃದ್ಧಿಗೆ ಕ್ರಮ ವಹಿಸಿದ್ದೇವೆ. ಕಲಬುರಗಿಗೆ ಟೆಕ್ಸ್ ಟೈಲ್ ಪಾರ್ಕ್ ಶಿಫಾರಸು ಮಾಡಿದ್ದೇವೆ. ರಾಜ್ಯದ ಕಾರ್ಯಕ್ರಮದ ಅಡಿ ರಾಯಚೂರಿಗೆ ಗಾರ್ಮೆಂಟ್ ಇಂಡಸ್ಟ್ರಿ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ 9 ಯೋಜನೆ ಕೈಗೆತ್ತಿಕೊಂಡಿದ್ದೇವೆ. ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಿಸುವ ಕುರಿತ ವಿಚಾರ ಸುಪ್ರೀಂಕೋರ್ಟ್‍ನಲ್ಲಿದೆ. ನೋಟಿಫಿಕೇಷನ್ ಬಂದ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ. ಇದಕ್ಕಾಗಿ 1 ಲಕ್ಷ 30 ಸಾವಿರ ಹೆಕ್ಟೇರ್ ಭೂ ಸ್ವಾಧೀನ ಹಾಗೂ 22 ಹಳ್ಳಿಗಳ ಸ್ಥಳಾಂತರ ಮಾಡಬೇಕು. ಈಗಾಗಲೇ ಹಳ್ಳಿಗಳ ಸ್ಥಳಾಂತರ ಪ್ರಕ್ರಿಯೆ ಆರಂಭವಾಗಿದೆ. ಅದಕ್ಕೆ 5 ಸಾವಿರ ಕೋಟಿ ಬೇಕಾಗುತ್ತೆ ಅದನ್ನು ಒದಗಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Live Tv

Leave a Reply

Your email address will not be published.

Back to top button